ಜಿಲ್ಲೆಯವರು ಸಿಎಂ ಆದರೆ ಸ್ವಾಗತಿಸುವೆ: ಶಾಸಕ ಸವದಿ

| Published : Sep 04 2024, 01:50 AM IST

ಸಾರಾಂಶ

ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರದು ಯಾವುದೇ ಪಾತ್ರ ಇಲ್ಲ. ಹೀಗಾಗಿ ಸಿಎಂ ಬದಲಾವಣೆ ಪ್ರಶ್ನೆಯೇ ಉದ್ಭವಿಸಲ್ಲ. ಒಂದು ವೇಳೆ ಅಂತಹ ಪ್ರಸಂಗ ಎದುರಾಗಿ ಜಿಲ್ಲೆಯವರು ಯಾರೇ ಸಿಎಂ ಆದರೂ ಸ್ವಾಗತಿಸುತ್ತೇನೆ ಎಂದು ಅಥಣಿ ಶಾಸಕ ಲಕ್ಷ್ಮಣ ಸವದಿ ಹೇಳಿದರು.

ಕನ್ನಡಪ್ರಭ ವಾರ್ತೆ ಬೆಳಗಾವಿ

ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರದು ಯಾವುದೇ ಪಾತ್ರ ಇಲ್ಲ. ಹೀಗಾಗಿ ಸಿಎಂ ಬದಲಾವಣೆ ಪ್ರಶ್ನೆಯೇ ಉದ್ಭವಿಸಲ್ಲ. ಒಂದು ವೇಳೆ ಅಂತಹ ಪ್ರಸಂಗ ಎದುರಾಗಿ ಜಿಲ್ಲೆಯವರು ಯಾರೇ ಸಿಎಂ ಆದರೂ ಸ್ವಾಗತಿಸುತ್ತೇನೆ ಎಂದು ಅಥಣಿ ಶಾಸಕ ಲಕ್ಷ್ಮಣ ಸವದಿ ಹೇಳಿದರು.

ಅಥಣಿಯಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಸಿಎಂ ಹುದ್ದೆಗೆ ಸಚಿವ ಸತೀಶ ಜಾರಕಿಹೊಳಿ ಹೆಸರು ಕೇಳಿಬರುತ್ತಿದೆ ಎಂಬ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಜಿಲ್ಲೆಯವರು ಯಾರೇ ಸಿಎಂ ಆದರೂ ಸ್ವಾಗತಿಸುತ್ತೇನೆ ಎಂದು ಹೇಳಿದರು. ನೀವು ಸಚಿವ ಸ್ಥಾನ ಆಕಾಂಕ್ಷಿಗಳಾ ಎಂಬ ಪ್ರಶ್ನೆಗೆ, ಉಪಮುಖ್ಯಮಂತ್ರಿ ಸೇರಿ ಅನೇಕ ಜವಾಬ್ದಾರಿ ನಿಭಾಯಿಸಿದ್ದು, ನನಗೆ ಯಾವುದೇ ಹುದ್ದೆಯ ಆಸೆ ಇಲ್ಲ. ಮುಂದಿನ ದಿನಗಳಲ್ಲಿ ನನಗೂ ಉತ್ತಮ ದಿನಗಳು ಬರಬಹುದು ಎಂದು ಮಾರ್ಮಿಕವಾಗಿ ಹೇಳಿದರು.

ಪಂಚಗ್ಯಾರಂಟಿ ಯೋಜನೆಗಳಿಂದಾಗಿ ಅಭಿವೃದ್ಧಿಗೆ ಅನುದಾನ ಕೊರತೆ ಉಂಟಾಗಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ನನಗೇನು ಅನುದಾನದ ಕೊರತೆ ಉಂಟಾಗಿಲ್ಲ. ಎರಡು ವರ್ಷದಲ್ಲಿ ಕೋಟ್ಯಂತರ ರೂ. ಅನುದಾನ ತಂದಿದ್ದೇನೆ ಎಂದರು.