ಇವಿಎಂ ಭದ್ರತಾ ಕೊಠಡಿ ಪರಿಶೀಲಿಸಿದ ಜಿಲ್ಲಾಧಿಕಾರಿ ಡಾ.ಕುಮಾರ

| Published : Apr 18 2024, 02:22 AM IST

ಇವಿಎಂ ಭದ್ರತಾ ಕೊಠಡಿ ಪರಿಶೀಲಿಸಿದ ಜಿಲ್ಲಾಧಿಕಾರಿ ಡಾ.ಕುಮಾರ
Share this Article
  • FB
  • TW
  • Linkdin
  • Email

ಸಾರಾಂಶ

ಕೇರಳದಿಂದ ಮಂಡ್ಯಕ್ಕೆ ಹೆಲಿಕಾಪ್ಟರ್‌ ಮೂಲಕ ನಗರದ ಪಿಇಟಿ ಕ್ರೀಡಾಂಗಣದಲ್ಲಿ ನಿರ್ಮಿಸಲಾಗಿದ್ದ ಹೆಲಿಪ್ಯಾಡ್‌ಗೆ ರಾಹುಲ್‌ ಗಾಂಧಿ ಬಂದಿಳಿದರು. ಈ ಸಂದರ್ಭದಲ್ಲಿ ಸ್ಥಳಕ್ಕೆ ಧಾವಿಸಿದ ಚುನಾವಣಾ ಕರ್ತವ್ಯದಲ್ಲಿದ್ದ ತಂಡ ರಾಹುಲ್ ಹೆಲಿಕ್ಯಾಪ್ಟರ್‌ನಿಂದ ಇಳಿದ ಬಳಿಕ ಹೆಲಿಕ್ಯಾಪ್ಟರ್‌ನ ಆಸನಗಳನ್ನು ಸೇರಿದಂತೆ ಎಲ್ಲೆಡೆ ತಪಾಸಣೆ ಮಾಡಿದರು.

ಕನ್ನಡಪ್ರಭ ವಾರ್ತೆ ಮದ್ದೂರು

ಜಿಲ್ಲಾಧಿಕಾರಿ ಡಾ.ಕುಮಾರ ಬುಧವಾರ ತಾಲೂಕಿನಲ್ಲಿ ಇವಿಎಂ ಭದ್ರತಾ ಕೊಠಡಿಯನ್ನು ಪರಿಶೀಲಿಸಿದರು. ಸಹಾಯಕ ಚುನಾವಣಾಧಿಕಾರಿ ಲೋಕನಾಥ್ ಅವರಿಂದ ಚುನಾವಣಾ ಆಯೋಗದ ನಿರ್ದೇಶನಗಳ ಪಾಲನೆಯ ಬಗ್ಗೆ ಮಾಹಿತಿ‌ ಪಡೆದುಕೊಂಡರು. ನಂತರ ಜಿಲ್ಲಾಧಿಕಾರಿಗಳು ತಾಲೂಕಿನ ಮಲ್ಲನಕುಪ್ಪೆ ಚೆಕ್ ಪೋಸ್ಟ್ ಗೆ ಭೇಟಿ ನೀಡಿ ಚಲಿಸುವ ಎಲ್ಲಾ ವಾಹನಳ ಪರಿಶೀಲನೆ ನಡೆಸಬೇಕು.

ತಾವು ಮಾಡುವ ಕೆಲಸಗಳನ್ನು ಜಿಲ್ಲಾ ದೂರು ನಿರ್ವಾಹಣಾ ಕೋಶದಿಂದ ವೀಕ್ಷಿಸಲಾಗುತ್ತಿದೆ. ಇದರ ಜೊತೆಗೆ ಸಹಾಯಕ ಚುನಾವಣಾಧಿಕಾರಿಗಳು ಹಾಗೂ ವೀಕ್ಷಕರು ಸಹ ತಮ್ಮ ಕೆಲಸಗಳ ಬಗ್ಗೆ ನಿಗಾ ವಹಿಸುತ್ತಾರೆ. ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ ಲೋಪ ಕಂಡುಬಂದರೆ ನೋಟೀಸ್ ಜಾರಿ ಮಾಡಿ ಆರ್.ಪಿ‌ ಆಕ್ಟ್ ಅಡಿ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದರು.

ಈ ವೇಳ ಜಿಪಂ ಸಿಇಒ ಶೇಖ್ ತನ್ವೀರ್ ಆಸಿಫ್, ಸಹಾಯಕ ಚುನಾವಣಾಧಿಕಾರಿ ಲೋಕನಾಥ್ ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.ರಾಹುಲ್‌ ಬಂದ ಹೆಲಿಕಾಪ್ಟರ್‌ ತಪಾಸಣೆ

ಕನ್ನಡಪ್ರಭ ವಾರ್ತೆ ಮಂಡ್ಯಕಾಂಗ್ರೆಸ್ ಅಭ್ಯರ್ಥಿ ಪರ ಚುನಾವಣಾ ಪ್ರಚಾರಕ್ಕಾಗಿ ಆಗಮಿಸಿದ ರಾಹುಲ್‌ ಗಾಂಧಿ ಅವರ ಹೆಲಿಕಾಪ್ಟರನ್ನು ಚುನಾವಣಾಧಿಕಾರಿಗಳು ಮಂಡ್ಯದಲ್ಲಿ ತಪಾಸಣೆ ನಡೆಸಿದರು.

ಕೇರಳದಿಂದ ಮಂಡ್ಯಕ್ಕೆ ಹೆಲಿಕಾಪ್ಟರ್‌ ಮೂಲಕ ನಗರದ ಪಿಇಟಿ ಕ್ರೀಡಾಂಗಣದಲ್ಲಿ ನಿರ್ಮಿಸಲಾಗಿದ್ದ ಹೆಲಿಪ್ಯಾಡ್‌ಗೆ ರಾಹುಲ್‌ ಗಾಂಧಿ ಬಂದಿಳಿದರು. ಈ ಸಂದರ್ಭದಲ್ಲಿ ಸ್ಥಳಕ್ಕೆ ಧಾವಿಸಿದ ಚುನಾವಣಾ ಕರ್ತವ್ಯದಲ್ಲಿದ್ದ ತಂಡ ರಾಹುಲ್ ಹೆಲಿಕ್ಯಾಪ್ಟರ್‌ನಿಂದ ಇಳಿದ ಬಳಿಕ ಹೆಲಿಕ್ಯಾಪ್ಟರ್‌ನ ಆಸನಗಳನ್ನು ಸೇರಿದಂತೆ ಎಲ್ಲೆಡೆ ತಪಾಸಣೆ ಮಾಡಿದರು.

ಇದೇ ಹೆಲಿಕ್ಯಾಪ್ಟರ್‌ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸಹ ಬಂದಿಳಿದಿದ್ದು ವಿಶೇಷವಾಗಿತ್ತು.