ಚಿಕ್ಕಮಗಳೂರು: ಮುಳ್ಳಯ್ಯನಗಿರಿ ಹಾಗೂ ಸೀತಾಳಯ್ಯನಗಿರಿ ಸೇರಿದಂತೆ ಜಿಲ್ಲೆಯ ಪ್ರವಾಸಿ ತಾಣಗಳಲ್ಲಿ ಪ್ರವಾಸಿಗರ ಸುರಕ್ಷತೆ ಕಾಪಾಡುವ ದೃಷ್ಟಿಯಿಂದ ಸಿಸಿ ಕ್ಯಾಮರಾಗಳನ್ನು ಅಳವಡಿಸುವಂತೆ ಜಿಲ್ಲಾಧಿಕಾರಿ ಭ್ವನರ್ ಸಿಂಗ್ ಮೀನಾ ಪ್ರವಾಸೋದ್ಯಮ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಶನಿವಾರ ಬೆಳ್ಳಂಬೆಳಗ್ಗೆ ಮುಳ್ಳಯ್ಯನಗಿರಿ ಮತ್ತು ಸೀತಾಳಯ್ಯನಗಿರಿ, ಎನ್‌ಎಂಡಿಸಿ ಚೆಕ್‌ಪೋಸ್ಟ್‌ಗೆ ಭೇಟಿ ನೀಡಿದ ಅವರು, ಅಲ್ಲಿನ ಮೂಲ ಸೌಕರ್ಯಗಳ ಬಗ್ಗೆ ಪರಿಶೀಲನೆ ನಡೆಸಿದರು.ಪ್ರವಾಸಿಗರಿಗೆ ಅನುಕೂಲವಾಗುವಂತೆ ಮಾಹಿತಿ ಫಲಕಗಳನ್ನು ಸೂಕ್ತ ಸ್ಥಳಗಳಲ್ಲಿ ಅಳವಡಿಸುವಂತೆ ನಿರ್ದೇಶನ ನೀಡಿದ ಅವರು, ಚಾರಣಕ್ಕೆ ತೆರಳುವವರಿಗೂ ಅನುಕೂಲಕರವಾದ ವ್ಯವಸ್ಥೆ ಒದಗಿಸಬೇಕೆಂದು ತಿಳಿಸಿದರಲ್ಲದೆ, ಅವರಿಗೂ ಪ್ರಯೋಜನವಾಗುವಂತೆ ಆಯಕಟ್ಟಿನ ಕಡೆಗಳಲ್ಲಿ ಮಾಹಿತಿ ಫಲಕಗಳನ್ನು ಅಳವಡಿಸುವಂತೆ ಹೇಳಿದರು.ಗಿರಿ ಪ್ರದೇಶದ ಪ್ರವಾಸಿ ತಾಣಗಳಲ್ಲಿ ಕಸ ವಿಲೇವಾರಿಗೆ ಅಗತ್ಯ ಕ್ರಮ ಕೈಗೊಳ್ಳಬೇಕು. ಹಾಗೆಯೇ ಅಗತ್ಯವಿರುವ ಕಡೆಗಳಲ್ಲಿ ಕಸದ ಬುಟ್ಟಿಗಳನ್ನು ಇಡುವಂತೆಯೂ ತಿಳಿಸಿದರು.ಮುಳ್ಳಯ್ಯನಗಿರಿ ಹಾಗೂ ಸೀತಾಳಯ್ಯನಗಿರಿ ಪ್ರದೇಶವನ್ನು ಪ್ಲಾಸ್ಟಿಕ್ ಮುಕ್ತ ಪ್ರದೇಶವೆಂದು ಘೋಷಿಸಲಾಗಿದ್ದು, ಗಿರಿಗೆ ಬರುವ ಪ್ರವಾಸಿಗರು ಪ್ಲಾಸ್ಟಿಕ್ ಅನ್ನು ಬಳಸಬಾರದು ಹಾಗೂ ಕಸದ ಬುಟ್ಟಿಯಲ್ಲಿ ಕಸವನ್ನು ಹಾಕುವಂತೆ ಸೂಚನಾ ಫಲಕಗಳನ್ನು ಅಳವಡಿಸುವಂತೆ ನಿರ್ದೇಶನ ನೀಡಿದರು.ಈ ವೇಳೆ ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕ ಲೋಹಿತ್ ಇದ್ದರು.ಫೋಟೋ ಇದೆ
ಚಿಕ್ಕಮಗಳೂರು ಜಿಲ್ಲಾಧಿಕಾರಿ ಶನಿವಾರ ಮುಂಜಾನೆ ಮುಳ್ಳಯ್ಯನಗಿರಿ ಹಾಗೂ ಸೀತಾಳಯ್ಯನಗಿರಿ ಸೇರಿದಂತೆ ವಿವಿಧ ಪ್ರವಾಸಿ ತಾಣಗಳಿಗೆ ಭೇಟಿ ನೀಡಿ ಪರಿಶೀಲಿಸಿದರು. ಈ ವೇಳೆ ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕ ಲೋಹಿತ್ ಇದ್ದರು.