ಸಾರಾಂಶ
ಜಿಲ್ಲೆಯ ಎಲ್ಲಾ ತಾಲೂಕು ಆಸ್ಪತ್ರೆಗಳು ಸೇರಿ ಒಟ್ಟು ೫೦೦ ಕೆ.ಜಿ.ತ್ಯಾಜ್ಯ ಉತ್ಪಾದನೆಯಾಗುತ್ತಿದೆ, ಇವುಗಳನ್ನು ಸರಿಯಾದ ವಿಧಾನದಲ್ಲಿ ವಿಲೇವಾರಿ ಮಾಡದಿದ್ದರೆ ಮಾನವನ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತದೆ. ವೈದ್ಯಕೀಯ ತ್ಯಾಜ್ಯ ವಿಲೇವಾರಿ ಮಾಡುವ ಸಂಸ್ಥೆಗಳು ವಾರಕ್ಕೆ ಎರಡು ಬಾರಿ ತ್ಯಾಜ್ಯಗಳನ್ನು ಸಂಗ್ರಹಿಸಿ ವೈಜ್ಞಾನಿಕ ವಿಧಾನದ ಮೂಲಕ ವಿಲೇವಾರಿ ಮಾಡುತ್ತಿದ್ದಾರೆ.
ಕನ್ನಡಪ್ರಭ ವಾರ್ತೆ ಮಂಡ್ಯ
ಆಸ್ಪತ್ರೆಗಳಲ್ಲಿ ಉತ್ಪತ್ತಿಯಾಗುವ ಜೈವಿಕ ವೈದ್ಯಕೀಯ ತ್ಯಾಜ್ಯವನ್ನು ವಿಲೇವಾರಿ ಮಾಡುವ ವೇಳೆ ವೈಜ್ಞಾನಿಕ ವಿಧಾನ ಅನುಸರಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಕುಮಾರ ಹೇಳಿದರು.ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಜೈವಿಕ ವೈದ್ಯಕೀಯ ತ್ಯಾಜ್ಯ ನಿರ್ವಹಣಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಮಿಮ್ಸ್ ಆಸ್ಪತ್ರೆಯಲ್ಲಿ ೮೦೦ ಹಾಸಿಗೆಗಳಿದ್ದು ಪ್ರತಿ ಹಾಸಿಗೆಯಿಂದ ದಿನಕ್ಕೆ ೨೫೦ ಗ್ರಾಂ ಜೈವಿಕ ತ್ಯಾಜ್ಯ ಉತ್ಪತ್ತಿಯಾಗುತ್ತಿದೆ, ಅಂದಾಜು ದಿನಕ್ಕೆ ೨೫೦ ಕೆ.ಜಿ ತ್ಯಾಜ್ಯ ಉತ್ಪತ್ತಿಯಾಗುತ್ತಿದೆ ಎಂದರು.
ಜಿಲ್ಲೆಯ ಎಲ್ಲಾ ತಾಲೂಕು ಆಸ್ಪತ್ರೆಗಳು ಸೇರಿ ಒಟ್ಟು ೫೦೦ ಕೆ.ಜಿ.ತ್ಯಾಜ್ಯ ಉತ್ಪಾದನೆಯಾಗುತ್ತಿದೆ, ಇವುಗಳನ್ನು ಸರಿಯಾದ ವಿಧಾನದಲ್ಲಿ ವಿಲೇವಾರಿ ಮಾಡದಿದ್ದರೆ ಮಾನವನ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತದೆ. ವೈದ್ಯಕೀಯ ತ್ಯಾಜ್ಯ ವಿಲೇವಾರಿ ಮಾಡುವ ಸಂಸ್ಥೆಗಳು ವಾರಕ್ಕೆ ಎರಡು ಬಾರಿ ತ್ಯಾಜ್ಯಗಳನ್ನು ಸಂಗ್ರಹಿಸಿ ವೈಜ್ಞಾನಿಕ ವಿಧಾನದ ಮೂಲಕ ವಿಲೇವಾರಿ ಮಾಡುತ್ತಿದ್ದಾರೆ, ಪ್ರತಿ ಹಾಸಿಗೆಯ ತ್ಯಾಜ್ಯ ವಿಲೇವಾರಿಗೆ ೭ ರು.ನಂತೆ ಶುಲ್ಕ ವಿಧಿಸಲಾಗುತ್ತಿದೆ, ಆಯುರ್ವೇದಿಕ್ ಆಸ್ಪತ್ರೆಗಳ ತ್ಯಾಜ್ಯವನ್ನು ಸರ್ಕಾರಿ ಆದೇಶದಂತೆ ೪೮ ಗಂಟೆಯೊಳಗೆ ವಿಲೇವಾರಿ ಮಾಡಬೇಕು ಎಂದು ಸೂಚಿಸಿದರು.ಚಿಕಿತ್ಸೆಗೆ ಬಳಸುವ ಹತ್ತಿ, ಬ್ಯಾಂಡೇಜ್ ನಂತಹ ವಸ್ತುಗಳು, ಹೊಡೆದ ಗ್ಲಾಸ್ ಚುರುಗಳು, ಚುಚ್ಚುಮದ್ದು ಹಾಗೂ ಬ್ಲೇಡ್‌ನ್ನು ಮುಂತಾದ ಜೈವಿಕ ತ್ಯಾಜ್ಯಗಳನ್ನು ವಿವಿಧ ಭಾಗಗಳಾಗಿ ಬೇರ್ಪಡಿಸಿ ವಿಲೇವಾರಿ ಮಾಡುವುದು ಉತ್ತಮ. ಬಯೋ ಮೆಡಿಕಲ್ ತ್ಯಾಜ್ಯ ವಿಲೇವಾರಿ ಸಂದರ್ಭದಲ್ಲಿ ಅಧಿಕಾರಿಗಳು ಖುದ್ದು ಹಾಜರಿದ್ದು ವಿಲೇವಾರಿ ಕಾರ್ಯ ವ್ಯವಸ್ಥಿತವಾಗಿ ನಡೆಯುವಂತೆ ಉಸ್ತುವಾರಿವಹಿಸಿ ಎಂದು ಸೂಚಿಸಿದರು.
ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಧಿಕಾರಿ ಡಾ.ಕೆ.ಮೋಹನ್, ಪಶುಸಂಗೋಪನೆ ಇಲಾಖೆಯ ಉಪ ನಿರ್ದೇಶಕ ಎಸ್.ಸಿ.ಸುರೇಶ್, ಕುಟುಂಬ ಕಲ್ಯಾಣಧಿಕಾರಿ ಡಾ.ಬೆಟ್ಟಸ್ವಾಮಿ, ಜಿಲ್ಲಾ ಸರ್ವೇಕ್ಷಣಾ ಸರ್ವೇಕ್ಷಣಾಧಿಕಾರಿ ಡಾ.ಕುಮಾರ್ ಇತರರಿದ್ದರು.