ಗಾಂಧಿ ಜಯಂತಿ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಕಚೇರಿ ಕ್ಯಾಂಪಸ್‌ನಲ್ಲಿ ಗುರುವಾರ ಶ್ರಮದಾನ ನಡೆಯಿತು. ಜಿಲ್ಲಾಧಿಕಾರಿ ಇಕ್ರಮ ಶರೀಫ್, ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ ಸೇರಿದಂತೆ ಇತರ ಅಧಿಕಾರಿಗಳು ಪೊರಕೆ ಹಿಡಿದು ಆವರಣದಲ್ಲಿ ಕಸಗೂಡಿಸುವ ಮೂಲಕ ಸ್ವಚ್ಚತಾ ಕಾರ್ಯಕ್ಕೆ ಚಾಲನೆ ನೀಡಿ ಸ್ವಚ್ಛತೆ ಮಹತ್ವ ಸಾರಿದರು.
ಕನ್ನಡಪ್ರಭ ವಾರ್ತೆ ಕಲಬುರಗಿ
ಗಾಂಧಿ ಜಯಂತಿ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಕಚೇರಿ ಕ್ಯಾಂಪಸ್‌ನಲ್ಲಿ ಗುರುವಾರ ಶ್ರಮದಾನ ನಡೆಯಿತು. ಜಿಲ್ಲಾಧಿಕಾರಿ ಇಕ್ರಮ ಶರೀಫ್, ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ ಸೇರಿದಂತೆ ಇತರ ಅಧಿಕಾರಿಗಳು ಪೊರಕೆ ಹಿಡಿದು ಆವರಣದಲ್ಲಿ ಕಸಗೂಡಿಸುವ ಮೂಲಕ ಸ್ವಚ್ಚತಾ ಕಾರ್ಯಕ್ಕೆ ಚಾಲನೆ ನೀಡಿ ಸ್ವಚ್ಛತೆ ಮಹತ್ವ ಸಾರಿದರು.ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಉಪನಿರ್ದೇಶಕ ಜಡಿಯಪ್ಪ ಗೆದ್ಲಗಟ್ಟಿ, ಜಿಲ್ಲಾಧಿಕಾರಿ ಕಚೇರಿಯ ತಹಸೀಲ್ದಾರರಾದ ಗಂಗಾಧರ, ಪಂಪಯ್ಯ, ಶಿವಪ್ರಭು ಹಿರೇಮಠ ಸೇರಿದಂತೆ ಕಚೇರಿ ಸಿಬ್ಬಂದಿ ವರ್ಗ ಹಾಗೂ ಮಹಾನಗರ ಪಾಲಿಕೆಯ ಸಿಬ್ಬಂದಿ ವರ್ಗ ಶ್ರಮದಾನದಲ್ಲಿ ಭಾಗಿಯಾಗಿ ಸಂಪೂರ್ಣ ಆವರಣ ಸ್ವಚ್ಛಗೊಳಿಸಿದರು. ಸಭಾಂಗಣ ಕಾಮಗಾರಿ ವೀಕ್ಷಣೆ: ನಂತರ ಜಿಲ್ಲಾಧಿಕಾರಿ ಇಕ್ರಂ ಶರೀಫ್ ಅವರು ಮಿನಿ ವಿಧಾನಸೌಧ ಆವರಣದಲ್ಲಿನ ವಿವಿಧ ಕಚೇರಿಗಳಿಗೆ ಭೇಟಿ ನೀಡಿದರು. ಆವರಣದಲ್ಲಿ ನಡೆಯುತ್ತಿರುವ ಜಿ+2 ಮಾದರಿಯ ಸಭಾಂಗಣ ಕಾಮಗಾರಿ ಸಹ ವೀಕ್ಷಿಸಿ ಅದರ ಪ್ರಗತಿ ಕುರಿತು ಮಾಹಿತಿ ಪಡೆದುಕೊಂಡು ಸಲಹೆ ಸೂಚನೆ ನೀಡಿದರು.ಮಿನಿ ವಿಧಾನಸೌಧಕ್ಕೆ ಪ್ರತಿನಿತ್ಯ ಸಾವಿರಾರು ಜನ ಸಾರ್ವಜನಿಕರು ಅಗಮಿಸುವುದರಿಂದ ಅವರು ಕುಳಿತುಕೊಳ್ಳಲು ಅಲ್ಲಲ್ಲಿ ಆಸನ, ಕುಡಿಯುವ ನೀರಿನ ವ್ಯವಸ್ಥೆ, ವಾಹನ ಪಾರ್ಕಿಂಗ್ ವ್ಯವಸ್ಥೆ, ಸಾರ್ವಜನಿಕ ಶೌಚಾಲಯ ನಿರ್ಮಿಸಬೇಕು. ಉತ್ತಮ ನಿರ್ವಹಣೆಯಿಂದ ಉದ್ಯಾನವನದಲ್ಲಿ ಸ್ವಚ್ಛತೆ ಕಾಪಾಡಿಕೊಳ್ಳಬೇಕೆಂದು. ಅಗತ್ಯ ಮೂಲಸೌಕರ್ಯಗಳ ಅಳವಡಿಸಬೇಕು ಎಂದು ಜಿಲ್ಲಾಧಿಕಾರಿ ಇಕ್ರಂ ಶರೀಫ್ ಅಧಿಕಾರಿಗಳಿಗೆ ಸೂಚನೆ ನೀಡಿದರು.