ಸಾರಾಂಶ
ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿರುವ ರಾಜಕೀಯ ಅಭ್ಯರ್ಥಿಗಳಿಗೆ ಮತ ಎಣಿಕೆ ಪ್ರಕ್ರಿಯೆ ಕುರಿತು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಸಿ ಸತ್ಯಭಾಮ ಮಾಹಿತಿ ನೀಡಿದರು.
ಕನ್ನಡಪ್ರಭ ವಾರ್ತೆ ಹಾಸನ
ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿರುವ ರಾಜಕೀಯ ಅಭ್ಯರ್ಥಿಗಳಿಗೆ ಮತ ಎಣಿಕೆ ಪ್ರಕ್ರಿಯೆ ಕುರಿತು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಸಿ ಸತ್ಯಭಾಮ ಮಾಹಿತಿ ನೀಡಿದರು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಜೂನ್ ೪ ರಂದು ಮತ ಎಣಿಕೆ ನಡೆಯುವ ಹಿನ್ನೆಲೆಯಲ್ಲಿ ಎಣಿಕೆ ಸ್ಥಳ, ಎಣಿಕೆ ಪ್ರಾರಂಭದ ಸಮಯ, ಕೊಠಡಿ ಹಾಗೂ ಇತರೆ ವಿಷಯಗಳ ಕುರಿತು ಸಭೆ ನಡೆಸಿದರು. ಮತ ಎಣಿಕೆ ನಡೆಯುವ ವೇಳೆಯಲ್ಲಿ ಅಭ್ಯರ್ಥಿಗಳ ಪರವಾಗಿ ಎಣಿಕಾ ಏಜೆಂಟ್ ನೇಮಕದ ಬಗ್ಗೆ ಹಾಗೂ ಏಜೆಂಟ್ ಗಳಿಗೆ ನಿಗದಿಪಡಿಸಿದ ಸ್ಥಳಗಳ ಬಗ್ಗೆ ಮಾಹಿತಿ ನೀಡಿದರು. ಎಣಿಕಾ ಏಜೆಂಟ್ ವಿವರವನ್ನು ಮೊದಲೇ ಸಲ್ಲಿಸಿ ಏಜೆಂಟ್ ಗುರುತಿನ ಚೀಟಿ ಪಡೆಯುವಂತೆ ಹಾಗೂ ಏಜೆಂಟ್ ನೇಮಕದ ವೆಚ್ಚವನ್ನು ಆಯಾ ರಾಜಕೀಯ ಪಕ್ಷದ ಅಭ್ಯರ್ಥಿಗಳು ವೆಚ್ಚಕ್ಕೆ ತೆಗೆದುಕೊಳ್ಳಲಾಗುತ್ತದೆ ಎಂದು ತಿಳಿಸಿದರು.ಎಣಿಕೆ ಕೇಂದ್ರಕ್ಕೆ ಆಗಮಿಸುವ ಎಣಿಕಾ ಏಜೆಂಟ್‌ಗಳು ತಮ್ಮ ಗುರುತಿನ ಚೀಟಿಯನ್ನು ನೀಡಿರುವ ಕೊಠಡಿ ಸೀಮಿತವಾಗಿರುತ್ತದೆ. ಎಣಿಕ ಕೇಂದ್ರಕ್ಕೆ ಮೊಬೈಲ್ ಹಾಗೂ ಇತರೆ ಅಪಾಯವನ್ನು ಉಂಟು ಮಾಡುವ ವಸ್ತುಗಳನ್ನು ನಿರ್ಬಂಧಿಸಲಾಗಿದೆ ಎಂದು ಮಾಹಿತಿ ನೀಡಿದರು. ಈ ವೇಳೆಯಲ್ಲಿ ಅಪರ ಜಿಲ್ಲಾಧಿಕಾರಿ ಕೆ ಟಿ ಶಾಂತಲಾ ಹಾಗೂ ಅಭ್ಯರ್ಥಿಗಳು, ಚುನಾವಣಾ ಏಜೆಂಟ್ ಗಳು ಉಪಸ್ಥಿತರಿದ್ದರು.