ಬುಗುಡನಹಳ್ಳಿ ಜಲಸಂಗ್ರಹಾಗಾರಕ್ಕೆ ಜಿಲ್ಲಾಧಿಕಾರಿ ಶುಭಕಲ್ಯಾಣ್ ಭೇಟಿ

| Published : Feb 04 2024, 01:33 AM IST

ಬುಗುಡನಹಳ್ಳಿ ಜಲಸಂಗ್ರಹಾಗಾರಕ್ಕೆ ಜಿಲ್ಲಾಧಿಕಾರಿ ಶುಭಕಲ್ಯಾಣ್ ಭೇಟಿ
Share this Article
  • FB
  • TW
  • Linkdin
  • Email

ಸಾರಾಂಶ

ತುಮಕೂರು ನಗರಕ್ಕೆ ಸರಬರಾಜಾಗುವ ಬುಗುಡನಹಳ್ಳಿ ಕುಡಿಯುವ ನೀರಿನ ಜಲ ಸಂಗ್ರಹಾಗಾರಕ್ಕೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅಧಿಕಾರಿಗಳೊಂದಿಗೆ ಭೇಟಿ ನೀಡಿ ನೀರಿನ ಲಭ್ಯತೆ ಬಗ್ಗೆ ಪರಿಶೀಲಿಸಿದರು. ತುಮಕೂರು ನಗರಕ್ಕೆ ಸರಬರಾಜಾಗುವ ಬುಗುಡನಹಳ್ಳಿ ಕುಡಿಯುವ ನೀರಿನ ಜಲ ಸಂಗ್ರಹಾಗಾರಕ್ಕೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅಧಿಕಾರಿಗಳೊಂದಿಗೆ ಭೇಟಿ ನೀಡಿ ನೀರಿನ ಲಭ್ಯತೆ ಬಗ್ಗೆ ಪರಿಶೀಲಿಸಿದರು.

ಕನ್ನಡಪ್ರಭ ವಾರ್ತೆ ತುಮಕೂರು

ತುಮಕೂರು ನಗರಕ್ಕೆ ಸರಬರಾಜಾಗುವ ಬುಗುಡನಹಳ್ಳಿ ಕುಡಿಯುವ ನೀರಿನ ಜಲ ಸಂಗ್ರಹಾಗಾರಕ್ಕೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅಧಿಕಾರಿಗಳೊಂದಿಗೆ ಭೇಟಿ ನೀಡಿ ನೀರಿನ ಲಭ್ಯತೆ ಬಗ್ಗೆ ಪರಿಶೀಲಿಸಿದರು.

ಮಹಾನಗರ ಪಾಲಿಕೆ ಕಾರ್ಯನಿರ್ವಾಹಕ ಎಂಜಿನಿಯರ್‌ ಬಿ.ಜಿ. ವಿನಯ್‌ಕುಮಾರ್‌ ಮಾತನಾಡಿ, ಬುಗುಡನಹಳ್ಳಿ ಕೆರೆಯ ಒಟ್ಟು ಸಾಮರ್ಥ್ಯ 363 ಎಂಸಿಎಫ್ಟಿಯಷ್ಟಿದ್ದು, ಪ್ರಸ್ತುತ ಫೆಬ್ರವರಿ 2ರಂದು 155 ಎಂಸಿಎಫ್ಟಿ ನೀರು ಲಭ್ಯವಿರುತ್ತದೆ. ಲಭ್ಯವಿರುವ ನೀರು ಮುಂಬರುವ ಏಪ್ರಿಲ್ ಮಾಹೆವರೆಗೂ ಸರಬರಾಜು ಮಾಡಬಹುದಾಗಿದೆ. ಬುಗುಡನಹಳ್ಳಿ ಕೆರೆಯಲ್ಲಿ ಲಭ್ಯವಿರುವ 155 ಎಂಸಿಎಫ್ಟಿ ಸಾಮರ್ಥ್ಯದ ನೀರಿನಲ್ಲಿ ಕುಡಿಯಲು 136 ಎಂಸಿಎಫ್ಟಿ ಮಾತ್ರ ಉಪಯೋಗಿಸಬಹುದಾಗಿದ್ದು, ಉಳಿದ 19 ಎಂಸಿಎಫ್ಟಿ ಯಷ್ಟು ಡೆಡ್ ಸ್ಟೋರೇಜ್ ಆಗಿರುತ್ತದೆ. ನಗರಕ್ಕೆ ಪ್ರತಿ ದಿನ ಕುಡಿಯುವ ನೀರಿಗಾಗಿ 1.50 ಎಂಸಿಎಫ್ಟಿ ನೀರು ಉಪಯೋಗಿಸಿದಲ್ಲಿ ಲಭ್ಯವಿರುವ ನೀರು ಮುಂದಿನ 3 ತಿಂಗಳ(90 ದಿನಗಳು)ವರೆಗೂ ಬಳಸಬಹುದಾಗಿದೆ ಎಂದು ತಿಳಿಸಿದರು.

ಹೇಮಾವತಿ ನಾಲಾ ವಲಯದ ಕಾರ್ಯನಿರ್ವಾಹಕ ಎಂಜಿನಿಯರ್ ಎಚ್.ಆರ್‌. ಮುರಳೀಧರ್ ಮಾತನಾಡಿ, ಏಪ್ರಿಲ್ ಮೊದಲ ವಾರದಲ್ಲಿ ಹೇಮಾವತಿ ನಾಲೆಯಿಂದ ಬುಗುಡನಹಳ್ಳಿ ಕೆರೆಗೆ ನೀರು ಹರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿಗಳ ಗಮನಕ್ಕೆ ತಂದರು.

ಬುಗುಡನಹಳ್ಳಿ ಜಲಸಂಗ್ರಹಾಗಾರದಲ್ಲಿ ಲಭ್ಯವಿರುವ ನೀರನ್ನು ಮಿತವಾಗಿ ಬಳಸಬೇಕೆಂದು ನಗರದ ನಾಗರಿಕರಲ್ಲಿ ಮನವಿ ಮಾಡಬೇಕು. ಇದರಿಂದ ಬೇಸಿಗೆಯಲ್ಲಿ ತಲೆದೋರಬಹುದಾದ ಕುಡಿಯುವ ನೀರಿನ ಸಮಸ್ಯೆಯನ್ನು ನಿವಾರಿಸಲು ಸಾಧ್ಯವಾಗುತ್ತದೆ. ಬುಗುಡನಹಳ್ಳಿ ಕೆರೆಯಲ್ಲಿರುವ ನೀರಿನ ಲಭ್ಯತೆಗೆ ಸಂಬಂಧಿಸಿದಂತೆ ವರದಿ ಸಿದ್ಧಪಡಿಸಿ ಗೃಹಮಂತ್ರಿಗಳಿಗೆ ನೀಡಬೇಕು ಎಂದು ಪಾಲಿಕೆ ಆಯುಕ್ತೆ ಬಿ.ವಿ. ಆಶ್ವಿಜ ಅವರಿಗೆ ಸೂಚನೆ ನೀಡಿದರು.

ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಶಿವಾನಂದ ಬಿ. ಕರಾಳೆ ಅವರೊಂದಿಗೆ ಪಾಲಿಕೆ ಹಾಗೂ ಹೇಮಾವತಿ ನಾಲಾ ವಲಯದ ಎಂಜಿನಿಯರ್‌ಗಳು ಹಾಜರಿದ್ದು ಜಿಲ್ಲಾಧಿಕಾರಿಗಳಿಗೆ ಮಾಹಿತಿ ನೀಡಿದರು.