ಸಾರಾಂಶ
ಹಾವೇರಿ: ನಗರದ ಜಿಲ್ಲಾಸ್ಪತ್ರೆಗೆ ಮಂಗಳವಾರ ಜಿಲ್ಲಾಧಿಕಾರಿ ವಿಜಯಮಹಾಂತೇಶ ದಾನಮ್ಮನವರ ದಿಢೀರ್ ಭೇಟಿ ನೀಡಿ ಅಭಿವೃದ್ಧಿ ಕಾಮಗಾರಿಗಳು ಹಾಗೂ ಸೌಲಭ್ಯಗಳ ಕುರಿತು ಪರಿಶೀಲನೆ ನಡೆಸಿದರು. ಜಿಲ್ಲಾ ಆಸ್ಪತ್ರೆಯ ಮುಂಭಾಗದಲ್ಲಿ ಪಾರ್ಕಿಂಗ್ ವ್ಯವಸ್ಥೆಯನ್ನು ಕಂಡು, ಸಾರ್ವಜನಿಕ ವಾಹನಗಳನ್ನು ಹಾಗೂ ದ್ವಿಚಕ್ರ ವಾಹನಗಳನ್ನು ಆಸ್ಪತ್ರೆಯ ಹೊರಗಡೆ ನಿಲ್ಲಿಸುವಂತೆ ಸೂಚನೆ ನೀಡಿದರು. ಆಸ್ಪತ್ರೆಯ ಮುಂಭಾಗದ ಗೆಟ್ ಎದುರು ಹೋಂ ಗಾರ್ಡ್‌ಗಳು ಸರಿಯಾಗಿ ಕೆಲಸ ನಿರ್ವಹಿಸುವಂತೆ ಸೂಚನೆ ನೀಡಿದರು. ಬಳಿಕ ಓಪಿಡಿ ವಿಭಾಗಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿಗಳು ಅಲ್ಲಿನ ಜನ ದಟ್ಟಣೆ ನೋಡಿ, ಓಪಿಡಿ ವಿಭಾಗದಲ್ಲಿ ಇನ್ನೇರಡು ಕೌಂಟರ್ ತೆರೆಯಿರಿ, ಜೊತೆಗೆ ಪಾಸ್ಟ್ ಟ್ಯಾಗ್ ವ್ಯವಸ್ಥೆ ಜಾರಿಗೊಳಿಸಬೇಕು. ಇದರಿಂದ ಜನದಟ್ಟಣೆ ಹಾಗೂ ಸಮಯ ಎರಡು ಉಳಿಯುತ್ತೆ ಈ ವ್ಯವಸ್ಥೆ ಜಾರಿಗೆ ಅಗತ್ಯ ಕ್ರಮ ಕೈಗೊಳ್ಳಲು ವೈದ್ಯಕೀಯ ಕಾಲೇಜಿನ ಡೀನ್ ಹಾಗೂ ಆಸ್ಪತ್ರೆಯ ಡಿಎಸ್ ಅವರಿಗೆ ಸೂಚನೆ ನೀಡಿದರು. ಎಂಸಿಎಚ್ ಆಸ್ಪತ್ರೆಗೆ ತೆರಳಿ ಅಲ್ಲಿಯೂ ಹೆಚ್ಚುವರಿ ಕೌಂಟರ್ ತೆರೆಯಲು ಸೂಚನೆ ನೀಡಿದರು. ಬಳಿಕ ಆಸ್ಪತ್ರೆಯ ಮೇಲ್ಭಾಗದಲ್ಲಿ ನಡೆಯುತ್ತಿರುವ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು, ಎರಡು ದಿನಗಳಲ್ಲಿ ಅದನ್ನು ಬಳಸಿಕೊಳ್ಳಿ ಎಂದು ತಾಕೀತು ಮಾಡಿದರು. ಬಳಿಕ ಮುಖ್ಯ ಕಟ್ಟಡದ ಮೇಲ್ಭಾಗದಲ್ಲಿ ನಡೆಯುತ್ತಿರುವ ಆಡಳಿತ ಕಚೇರಿಯ ಕಾಮಗಾರಿ ಮಂದಗತಿಯಲ್ಲಿ ಸಾಗುತ್ತಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿ ಯಾವಾಗ ಕಟ್ಟಡ ಬಳಕೆ ನೀಡುತ್ತಿರಿ ಎಂದು ಗುತ್ತಿಗೆದಾರರನ್ನು ತರಾಟೆ ತೆಗೆದುಕೊಂಡರು. ಈ ವೇಳೆ ಗುತ್ತಿಗೆದಾರರು ಕಚೇರಿಯ ಕಾಮಗಾರಿ ಪೂರ್ಣಗೊಳ್ಳಲು ಇನ್ನು ೧೦ ರಿಂದ ೧೫ ದಿನಗಳ ಕಾಲಾವಧಿ ಬೇಕಾಗುತ್ತದೆ ಎಂದು ಹೇಳಿದಾಗ ಶೀಘ್ರವೇ ಕಾಮಗಾರಿ ಪೂರ್ಣಗೊಳಿಸುವಂತೆ ಜಿಲ್ಲಾಧಿಕಾರಿಗಳು ಸೂಚಿಸಿದರು. ಅಲ್ಟ್ರಾ ಸ್ಕ್ಯಾನ್ ಪರೀಕ್ಷೆ ಹೆಚ್ಚಿಸಿ: ಜಿಲ್ಲಾಸ್ಪತ್ರೆಗೆ ಹೆಚ್ಚಿನ ಜನರು ಚಿಕಿತ್ಸೆಗಾಗಿ ಆಗಮಿಸುತ್ತಿದ್ದಾರೆ. ರಕ್ತ ಪರೀಕ್ಷೆ ರಿರ್ಪೋಟ್ ನೀಡಲು ಹೆಚ್ಚಿನ ಸಮಯ ತೆಗೆದುಕೊಳ್ಳುವ ಬಗ್ಗೆ ದೂರುಗಳು ಕೇಳಿ ಬಂದಿವೆ. ಇದರ ಜೊತೆಗೆ ಅಲ್ಟ್ರಾ ಸ್ಕಾನ್ ಪರೀಕ್ಷೆಯನ್ನು ಎರಡು ತಿಂಗಳ ನಂತರ ಪರೀಕ್ಷೆ ಡೆಟ್ ನೀಡುವ ಮಾಹಿತಿ ಇದೆ. ಇದನ್ನು ಹೆಚ್ಚಿಸುವ ಕೆಲಸ ಆಗಬೇಕು ಎಂದು ವೈದ್ಯಕೀಯ ಕಾಲೇಜಿನ ಡೀನ್ ಹಾಗೂ ಜಿಲ್ಲಾಸ್ಪತ್ರೆಯ ಶಸ್ತ್ರಚಿಕಿತ್ಸಕರಿಗೆ ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು. ಜಿಲ್ಲಾ ಉಸ್ತುವಾರಿ ಸಚಿವರು ಆಸ್ಪತ್ರೆಗೆ ಭೇಟಿ ಕಾಮಗಾರಿ ಪೂರ್ಣಗೊಳ್ಳಲು ಸಮಯ ನಿಗದಿ ಮಾಡಿದ್ದರು. ಆ ಕಾಮಗಾರಿಯ ಪ್ರಗತಿಯ ಪರಿಶೀಲನೆ ಮಾಡಲು ಆಸ್ಪತ್ರೆಗೆ ಭೇಟಿ ನೀಡಿದ್ದೇನೆ. ಅಡ್ಮಿನ್ ಬ್ಲಾಕ್ ಕಟ್ಟಡದ ಕಾಮಗಾರಿಯನ್ನು ೧೫ ದಿನದಲ್ಲಿ ಪೂರ್ಣಗೊಳಿಸಿ ನೀಡಲಾಗುವುದು ಎಂದಿದ್ದಾರೆ. ವಾರ್ಡ್ ಕಾಮಗಾರಿ ನಡೆಯುತ್ತಿದೆ. ಒಟ್ಟಾರೆಯಾಗಿ ಆಸ್ಪತ್ರೆಯ ಮೇಲ್ಭಾಗದಲ್ಲಿ ನಡೆಯುತ್ತಿರುವ ಕಾಮಗಾರಿಯನ್ನು ಅಕ್ಟೋಬರ್ ಅಂತ್ಯದೊಳಗೆ ಪೂರ್ಣಗೊಳಿಸಲಾಗುವುದು. ಇದರಿಂದ ಹೆಚ್ಚಿನ ಜನ ಒಳರೋಗಿಗಳಾಗಿ ಚಿಕಿತ್ಸೆ ಪಡೆಯಲು ಅನುಕೂಲವಾಗಲಿದೆ ಎಂದು ಜಿಲ್ಲಾಧಿಕಾರಿ ವಿಜಯಮಹಾಂತೇಶ ದಾನಮ್ಮನವರ ಹೇಳಿದರು.
;Resize=(128,128))
;Resize=(128,128))
;Resize=(128,128))