ಸಾರಾಂಶ
ರಾಯಚೂರು ನಗರದ ಎಸ್ ಆರ್ ಪಿ ಎಸ್ ಪದವಿಪೂರ್ವ ಕಾಲೇಜಿನಲ್ಲಿರುವ ಭದ್ರತಾ ಕೊಠಡಿಗಳು ಹಾಗೂ ಮತಎಣಿಕೆ ಕೊಠಡಿಗಳಿಗೆ ಡಿಸಿ, ಚುನಾವಣಾಧಿಕಾರಿ ಎಲ್.ಚಂದ್ರಶೇಖರ ನಾಯಕ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ರಾಯಚೂರು: ಲೋಕಸಭಾ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಎಲ್.ಚಂದ್ರಶೇಖರ ನಾಯಕ ಅವರು ನಗರದ ಎಸ್ ಆರ್ ಪಿ ಎಸ್ ಪದವಿಪೂರ್ವ ಕಾಲೇಜಿನಲ್ಲಿರುವ ಭದ್ರತಾ ಕೊಠಡಿಗಳು ಹಾಗೂ ಮತಎಣಿಕೆ ಕೊಠಡಿಗಳಿಗೆ ಭೇಟಿ ನೀಡಿ ಮಂಗಳವಾರ ಪರಿಶೀಲನೆ ನಡೆಸಿದರು.
ಇದೇ ಮೇ 7ರಂದು ಲೋಕಸಭಾ ಚುನಾವಣೆಗೆ ಮತದಾನ ಪ್ರಕ್ರಿಯೆ ನಡೆದಿದ್ದು, ಜೂ.4ರಂದು ಮತ ಎಣಿಕೆ ನಡೆಯಲಿದೆ. ಈ ಹಿನ್ನೆಲೆ ಮತ ಎಣಿಕೆ ಕೆಂದ್ರಕ್ಕೆ ಭೇಟಿ ನೀಡಿದ ಅವರು, ಮತ ಎಣಿಕೆ ಕಾರ್ಯದಲ್ಲಿ ಯಾವುದೇ ಲೋಪದೋಷ ಗಳಾಗದಂತೆ ಸರಿಯಾದ ರೀತಿಯಲ್ಲಿ ನೋಡಿಕೊಳ್ಳಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.ಮತ ಎಣಿಕೆ ಸಿಬ್ಬಂದಿ, ರಾಜಕೀಯ ಪಕ್ಷಗಳ ಏಜಂಟರುಗಳಿಗೆ, ಪೊಲೀಸ್ ಹಾಗೂ ಭದ್ರತಾ ಸಿಬ್ಬಂದಿಗೆ ಸರಿಯಾದ ರೀತಿಯಲ್ಲಿ ಕುಡಿಯುವ ನೀರು ಹಾಗೂ ಊಟದ ವ್ಯವಸ್ಥೆ ಮಾಡಿಕೊಳ್ಳಬೇಕು. ಮತ ಎಣಿಕೆ ಕೇಂದ್ರದ ಸುತ್ತಲೂ ಸ್ವಚ್ಛತೆ ಮಾಡಿಕೊಳ್ಳುವಂತೆ ತಿಳಿಸಿದರು.
ನಂತರ ಮಾಧ್ಯಮ ಕೊಠಡಿಗೆ ಭೇಟಿ ನೀಡಿ, ಮತ ಎಣಿಕೆ ವರದಿಗಾಗಿ ಬರುವ ಮಾಧ್ಯಮದವರಿಗೆ ಸರಿಯಾದ ರೀತಿಯಲ್ಲಿ ಕುಡಿಯುವ ನೀರಿನ ವ್ಯವಸ್ಥೆ, ಊಟದ ವ್ಯವಸ್ಥೆ ಮಾಡಿಕೊಳ್ಳಬೇಕು. ಕೊಠಡಿಯಲ್ಲಿ ಎಲ್ಇಡಿ ಪರದೆ ಹಾಗೂ ಅಂತರ್ಜಾಲದ(ಇಂಟರ್ನೆಟ್) ವ್ಯವಸ್ಥೆ ಸರಿಯಾದ ರೀತಿಯಲ್ಲಿ ಮಾಡಿಕೊಳ್ಳುವಂತೆ ತಿಳಿಸಿದರು.ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ, ಸಹಾಯಕ ಆಯುಕ್ತ ಎಸ್.ಎಸ್ ಸಂಪಗಾವಿ, ನಗರಸಭೆ ಪೌರಾಯುಕ್ತ ಜಿ.ಎನ್ ಚಲಪತಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.