ಹಾಸನ: ನಗರದ ವಾಣಿವಿಲಾಸ ಬಾಲಕಿಯರ ಸರ್ಕಾರಿ ಪ್ರೌಢಶಾಲೆಯಲ್ಲಿರುವ ಪರೀಕ್ಷಾ ಕೇಂದ್ರಕ್ಕೆ ಜಿಲ್ಲಾಧಿಕಾರಿ ಕೆ ಎಸ್ ಲತಾ ಕುಮಾರಿ ಅವರು ಸೋಮವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ನಂತರ ಮಾತನಾಡಿದ ಅವರು, ಶಾಂತಿಯುತವಾಗಿ ಪರೀಕ್ಷೆ ನಡೆಯುತ್ತಿದೆ ಸೂಕ್ತ ವ್ಯವಸ್ಥೆಯನ್ನು ಮಾಡಲಾಗಿದೆ. ವಿದ್ಯಾರ್ಥಿಗಳಲ್ಲಿ ಆರೋಗ್ಯದ ಸಮಸ್ಯೆ ಉಂಟಾದಲ್ಲಿ ತುರ್ತು ಚಿಕಿತ್ಸಾ ಉಪಕರಣದೊಂದಿಗೆ ಆರೋಗ್ಯ ಇಲಾಖೆಯಿಂದ ಸಿಬ್ಬಂದಿಯವರು ನಿಯೋಜಿಸಲಾಗಿದೆ ಎಂದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಶಿಕ್ಷಣ ಇಲಾಖೆಯಿಂದ ವಿದ್ಯಾರ್ಥಿಗಳು ಕೈಗೊಳ್ಳಬೇಕಾದ ಸಿದ್ಧತೆಗಳ ಬಗ್ಗೆ ಪರೀಕ್ಷೆಯನ್ನು ಎದುರಿಸುವ ಬಗ್ಗೆ ಕಾರ್ಯಾಗಾರಗಳನ್ನು ಏರ್ಪಡಿಸಲಾಗಿದೆ, ವಿದ್ಯಾರ್ಥಿಗಳಿಗೆ ಯಾವುದೇ ಗೊಂದಲವಾಗದಂತೆ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದಲ್ಲಿ ಸಹಾಯವಾಣಿಯನ್ನು ತೆರೆಯಲಾಗಿದೆ ಎಂದು ತಿಳಿಸಿದರು.

ಜಿಲ್ಲೆಯು ರಾಜ್ಯದಲ್ಲಿ ಮೊದಲ ಸ್ಥಾನ ಬರುವ ನಿರೀಕ್ಷೆಯಿದ್ದು, ಪೂರ್ವಭಾವಿ ಪರೀಕ್ಷೆಯಲ್ಲಿ ಜಿಲ್ಲೆ ಮೊದಲ ಸ್ಥಾನದಲ್ಲಿದ್ದು, ಪ್ರತಿಯೊಂದು ಮಗುವೂ ಉತ್ತೀರ್ಣರಾಗಬೇಕು ಯಾವುದೇ ವಿದ್ಯಾರ್ಥಿಯು ಸಹ ಅನುತ್ತೀರ್ಣರಾಗಬಾರದು, ಇದರಿಂದ ಮಕ್ಕಳು ಪಿಡುಗುಗಳಿಗೆ ಒಳಗಾಗುವ ಸಾಧ್ಯತೆಗಳಿವೆ ಎಂದರು. ನಂತರ ಪರೀಕ್ಷೆ ಬರೆದು ಹೊರಬಂದ ವಿದ್ಯಾರ್ಥಿಗಳಿಂದ ಮಾಹಿತಿ ಪಡೆದರು.