ಸಾರಾಂಶ
ಕನ್ನಡಪ್ರಭ ವಾರ್ತೆ ಚಾಮರಾಜನಗರ
ಏಳನೇ ವೇತನ ಆಯೋಗದ ಅನುಷ್ಠಾನದಲ್ಲಿ 2022 ಜ.7 ರಿಂದ 2024 ಜು.31 ಅವಧಿಯಲ್ಲಿ ನಿವೃತ್ತರಾದ ಅಧಿಕಾರಿ ಹಾಗೂ ನೌಕರರಿಗೆ ಪರಿಷ್ಕೃತ ವೇತನ ಶ್ರೇಣಿಯಲ್ಲಿ ನಿವೃತ್ತಿ ಸೌಲಭ್ಯವನ್ನು ಒದಗಿಸಿಕೊಡುವಂತೆ ಒತ್ತಾಯಿಸಿ ಕರ್ನಾಟಕ ನಿವೃತ್ತಿ ನೌಕರರ ವೇದಿಕೆ ಜಿಲ್ಲಾ ಸಮಿತಿ ವತಿಯಿಂದ ಜಿಲ್ಲಾಡಳಿತ ಭವನದಲ್ಲಿ ಡೀಸಿ ಶಿಲ್ಪಾನಾಗ್ ಅವರಿಗೆ ಮನವಿ ಸಲ್ಲಿಸಿದರು.ವೇತನ ಶ್ರೇಣಿಗಳ ಪರಿಷ್ಕರಣೆಯ ಕಾರಣದಿಂದಾಗಿ ಉಂಟಾಗುವ ವೇತನ ಮತ್ತು ಭತ್ಯೆ ಹೆಚ್ಚಳವನ್ನು ದಿ. 01.08.2024 ಆ.1ರಿಂದ ನಗದಾಗಿ ಪಾವತಿ ಮಾಡತಕ್ಕದ್ದು, .2022 ಜು.1 ರಿಂದ 31.07.2024 ಜು 31ರ ಅವಧಿಯಲ್ಲಿ ಸೇವೆಯಿಂದ ನಿವೃತ್ತರಾದ ಅಥವಾ ಸೇವೆಯಲ್ಲಿರುವಾಗಲೇ ಮರಣ ಹೊಂದಿದ ಅಥವಾ ಸೇವೆಯಲ್ಲಿರುವುದು ಸಮಾಪ್ತಿಗೊಂಡ ಸರ್ಕಾರಿ ಪ್ರಕರಣಗಳಲ್ಲಿ ಪರಿಷ್ಕೃತ ವೇತನ ಶ್ರೇಣಿಗಳಲ್ಲಿ ನಿಗದಿಪಡಿಸಲಾದ ಕಾಲ್ಪನಿಕ ವೇತನವನ್ನು ನಿವೃತ್ತಿ ವೇತನ ಮತ್ತು ಕುಟುಂಬ ನಿವೃತ್ತಿ ವೇತನವನ್ನು ಲೆಕ್ಕ ಹಾಕುವ ಉದ್ದೇಶಗಳಿಗಾಗಿ ಪರಿಗಣಿಸತಕ್ಕದ್ದು. ಆದರೆ ಸದರಿ ಕಾಲ್ಪನಿಕ ಪುನರ್ ನಿಗದಿಯ ಆರ್ಥಿಕ ಲಾಭವು ನಿವೃತ್ತಿ ಹೊಂದಿದ ಸರ್ಕಾರಿ ನೌಕರನಿಗೆ ಅಥವಾ ಮರಣ ಹೊಂದಿದ ಸರ್ಕಾರಿ ನೌಕರನ ಫಲಾನುಭವಿಗೆ ಸಂದರ್ಭಾನುಸಾರ 01.08.2024 ಆ.1 ರಿಂದ ಪ್ರಾಪ್ತವಾಗತಕ್ಕದ್ದು.
ಈ ಆದೇಶದನ್ವಯ 2022 ಜು.1ರಿಂದ 2024 ಜು.31ರವರೆಗೆ (25 ತಿಂಗಳ ಅವಧಿಯಲ್ಲಿ) ನಿವೃತ್ತರಾದ/ನಿಧನ ಹೊಂದಿದ ಅಧಿಕಾರಿ/ನೌಕರರಿಗೆ ಪರಿಷ್ಕೃತ ವೇತನದನ್ವಯ ಲೆಕ್ಕಾಚಾರ ಮಾಡದೆ ಹಳೆಯ ವೇತನ ಶ್ರೇಣಿಯ ಮೇಲೆಯೇ ಪರಿಗಣಿಸುತ್ತಿರುವುದು ನಿವೃತ್ತಿ ಜೀವನ ಸಂಧ್ಯಾ ಕಾಲದಲ್ಲಿರುವ ನಮ್ಮಗಳಿಗೆ ಅತೀವ ಅಘಾತವಾಗಿರುತ್ತದೆ. ನಮ್ಮದಲ್ಲದ ಕಾರಣದಿಂದ ಆಗಸ್ಟ್ 2024ರಿಂದ ನಿವೃತ್ತಿ ಹೊಂದುವ ಅಧಿಕಾರಿ/ನೌಕರರು ಪರಿಷ್ಕೃತ ವೇತನದಲ್ಲಿ ನಿವೃತ್ತಿ ಆರ್ಥಿಕ ಸೌಲಭ್ಯವು ಲಭ್ಯವಾಗುತ್ತಿದ್ದು, ಅವರಂತೆ ನಾವು 7ನೇ ವೇತನ ಆಯೋಗದ ವರದಿಯಂತೆ ಪರಿಷ್ಕೃತ ವೇತನದಲ್ಲಿ ನಿವೃತ್ತಿ ಆರ್ಥಿಕ ಸೌಲಭ್ಯ ಪಡೆಯುವ ಅರ್ಹತೆ ಹೊಂದಿದ್ದೇವೆ.ಆದ್ದರಿಂದ ನಮಗೆ ಆಗುತ್ತಿರುವ ಆರ್ಥಿಕ ನಷ್ಟ ಅರ್ಥ ಮಾಡಿಕೊಂಡು ದಯಮಾಡಿ ಮೇಲಿನ ಅವಧಿಯಲ್ಲಿ ಲೆಕ್ಕಾಚಾರ ಮಾಡಿ ನ್ಯಾಯಯೋಜಚಿತವಾಗಿ ಲಭ್ಯವಾಗುವ ಆರ್ಥಿಕ ಸೌಲಭ್ಯವನ್ನು ದೊರಕಿಸಿ ಕೊಡಬೇಕು ಎಂದು ಡೀಸಿಗೆ ಸಲ್ಲಿಸಿರುವ ಮನವಿಯಲ್ಲಿ ಒತ್ತಾಯಿಸಿದ್ದಾರೆ. ಈ ವೇಳೆ ನಿವೃತ್ತ ನೌಕರರ ವೇದಿಕೆಯ ಜಿಲ್ಲಾ ಸಂಚಾಲಕ ಎ.ಶಿವಣ್ಣ, ಕೆ.ಎನ್.ಶಿವಸ್ವಾಮಿ, ಮಹದೇವಯ್ಯ, ಎಂ.ರಾಜಶೇಖರ್, ಎಂ.ಮಲ್ಲು, ನಾಗರಾಜು, ಎಸ್ ಭಾಗ್ಯ, ಪುಟ್ಟಗೋಪಮ್ಮ ಹಾಜರಿದ್ದರು.