ಕನ್ನಡಪ್ರಭ ವಾರ್ತೆ ಕೋಲಾರಹೃದಯಾಘಾತದಿಂದ ವಿಧಿವಶರಾದ ದೇವರಾಜ ಅರಸು ಮೊಮ್ಮಗ ಹಾಗೂ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಉಪಾಧ್ಯಕ್ಷ ಸೂರಜ್ ಹೆಗ್ಡೆರಿಗೆ ಜಿಲ್ಲಾ ಕಾಂಗ್ರೆಸ್ ಸಮಿತಿ ಶ್ರದ್ಧಾಂಜಲಿ ಅರ್ಪಿಸಿತು.ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಲಕ್ಷ್ಮೀನಾರಾಯಣ ಮಾತನಾಡಿ, ಸರಳತೆ, ಸಜ್ಜನಿಕೆಗೆ ಹೆಸರಾಗಿದ್ದ ಸೂರಜ್ ಹೆಗ್ಡೆ, ಕಾಂಗ್ರೆಸ್ ಪಕ್ಷದ ನಿಷ್ಠಾವಂತ ನಾಯಕರಾಗಿದ್ದರು ಎಂದು ಗುಣಗಾನ ಮಾಡಿದರು.ಕಾಂಗ್ರೆಸ್ ಎಸ್ಸಿ ಘಟಕದ ಜಿಲ್ಲಾಧ್ಯಕ್ಷ ಕೆ. ಜಯದೇವ್ ಮಾತನಾಡಿ, ಪಕ್ಷದ ವಿವಿಧ ಹುದ್ದೆಗಳಲ್ಲಿ ಕೆಲಸ ಮಾಡಿದ ಸೂರಜ್, ಸೋನಿಯಾ ಗಾಂಧಿ ಕುಟುಂಬಕ್ಕೆ ಹತ್ತಿರವಾಗಿದ್ದರು, ಅವರ ನಡೆ, ಸರಳತೆ, ತಾಳ್ಮೆ ಕಾಂಗ್ರೆಸ್ ಕಾರ್ಯಕರ್ತರಿಗೆ ಆದರ್ಶ ಎಂದರು.ಮಾಜಿ ಸಿಎಂ ಆಗಿ, ದೀನದಲಿತರ ನಾಯಕರಾಗಿ ರಾಜ್ಯದಲ್ಲಿ ಹೆಸರು ಮಾಡಿದ್ದ ಅರಸು ಮೊಮ್ಮಗ ಎನ್ನುವುದು ಮತ್ತೊಂದು ಹೆಮ್ಮೆಯಾಗಿತ್ತು ಎಂದು ತಿಳಿಸಿದರು.ಕಾಂಗ್ರೆಸ್ ಜಿಲ್ಲಾ ಕಾರ್ಯಾಧ್ಯಕ್ಷ ಊರುಬಾಗಿಲು ಶ್ರೀನಿವಾಸ್, ಪಕ್ಷದ ಮುಖಂಡರಾದ ಅಹಿಂದ ಒಬಿಸಿ ಮಂಜುನಾಥ್, ವೆಂಕಟಪತಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಪ್ಸರ್, ಸಂಪತ್ ಕುಮಾರ್, ನಾಗರಾಜ್ ಇದ್ದರು.
ಸೂರಜ್ ಹೆಗ್ಡೆ ನಿಧನಕ್ಕೆ ಜಿಲ್ಲಾ ಕಾಂಗ್ರೆಸ್ ಕಂಬನಿ
ಹೃದಯಾಘಾತದಿಂದ ವಿಧಿವಶರಾದ ದೇವರಾಜ ಅರಸು ಮೊಮ್ಮಗ ಹಾಗೂ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಉಪಾಧ್ಯಕ್ಷ ಸೂರಜ್ ಹೆಗ್ಡೆರಿಗೆ ಜಿಲ್ಲಾ ಕಾಂಗ್ರೆಸ್ ಸಮಿತಿ ಶ್ರದ್ಧಾಂಜಲಿ ಅರ್ಪಿಸಿತು.
Latest Videos
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.