ಸಾರಾಂಶ
ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಬೆದರಿಕೆ ಹಾಕಿರುವ ವ್ಯಕ್ತಿಯ ಮೇಲೆ ಹಾಗೂ ಇದರ ಹಿಂದೆ ಯಾರ ಕೈವಾಡವಿದೆ ಎಂಬುದನ್ನು ಪತ್ತೆ ಹಚ್ಚಿ
ಕನ್ನಡಪ್ರಭ ವಾರ್ತೆ ಮೈಸೂರು
ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಶೂ ಎಸೆದಿರುವುದನ್ನು ಖಂಡಿಸಿ ಹಾಗೂ ತಪ್ಪಿತಸ್ಥರ ಮೇಲೆ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದವರು ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಶನಿವಾರ ಪ್ರತಿಭಟಿಸಿದರು.ಸಿಜೆಐ ಬಿ.ಆರ್. ಗವಾಯಿ ಅವರ ಮೇಲೆ ವಕೀಲ ರಾಕೇಶ್ ಕಿಶೋರ್ ಎಂಬವರು ಶೂ ಎಸೆದಿರುವುದು ಸಂವಿಧಾನ ವಿರೋಧಿ ನೀತಿಯಾಗಿದೆ. ನ್ಯಾಯಮೂರ್ತಿ ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ಉದ್ದೇಶಪೂರ್ವಕವಾಗಿ ಈ ಕೃತ್ಯ ಎಸಗಿರುವ ರಾಕೇಶ್ ಕಿಶೋರ್ ಮೇಲೆ ದೇಶದ್ರೋಹ ಪ್ರಕರಣ ದಾಖಲಿಸಿ, ಸೂಕ್ತ ಕ್ರಮ ವಹಿಸಬೇಕು ಎಂದು ಅವರು ಒತ್ತಾಯಿಸಿದರು.ಹಾಗೆಯೇ, ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಬೆದರಿಕೆ ಹಾಕಿರುವ ವ್ಯಕ್ತಿಯ ಮೇಲೆ ಹಾಗೂ ಇದರ ಹಿಂದೆ ಯಾರ ಕೈವಾಡವಿದೆ ಎಂಬುದನ್ನು ಪತ್ತೆ ಹಚ್ಚಿ ಸಂಬಂಧಿಸಿದವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದರು.ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ಜಿಲ್ಲಾಧ್ಯಕ್ಷ ಕೆ. ರಮೇಶ್, ಮುಖಂಡರಾದ ಸಿ. ಚಿಕ್ಕಣ್ಣ, ರಾಕೇಶ್ ಕುಮಾರ್, ಕೆ.ಎಸ್. ಸುಶೀಲಾ ಮೊದಲಾದವರು ಇದ್ದರು.