ಸಾರಾಂಶ
ಬೆಳಗಾವಿ ಜಿಲ್ಲಾ ವಿಭಜನೆ ಪ್ರಸ್ತಾಪ ಸಂಬಂಧ ನಿರ್ಧಾರ ತೆಗೆದುಕೊಳ್ಳುವುದು ಸರ್ಕಾರದ ಮಟ್ಟದಲ್ಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.
ಕನ್ನಡಪ್ರಭ ವಾರ್ತೆ ಬೆಳಗಾವಿ
ಬೆಳಗಾವಿ ಜಿಲ್ಲಾ ವಿಭಜನೆ ಪ್ರಸ್ತಾಪ ಸಂಬಂಧ ನಿರ್ಧಾರ ತೆಗೆದುಕೊಳ್ಳುವುದು ಸರ್ಕಾರದ ಮಟ್ಟದಲ್ಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲಾ ವಿಭಜನೆಗೆ ಎಲ್ಲ ಶಾಸಕರು, ಎಲ್ಲ ಪಕ್ಷದ ನಾಯಕರು ಈಗಾಗಲೇ ಹೇಳಿದ್ದೇವೆ. ಸರ್ಕಾರ ಯಾವಾಗ ನಿರ್ಧಾರ ತೆಗೆದುಕೊಳ್ಳುತ್ತದೆ ಎನ್ನುವುದನ್ನು ಕಾಯ್ದುನೋಡಬೇಕು ಎಂದರು.ಹಿಡಕಲ್ ಜಲಾಶಯಕ್ಕೆ ಬಾಗಿನ ಅರ್ಪಣೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು ನಾವು ಆ ಅಧಿಕಾರವನ್ನು ಗ್ರಾಮ ಪಂಚಾಯತಿ ಅಧ್ಯಕ್ಷರಿಗೆ ಬಿಟ್ಟು ಕೊಟ್ಟಿದ್ದೇವೆ. ಅವರೇ ಬಾಗಿನ ಅರ್ಪಣೆ ಮಾಡುತ್ತಾರೆ. ಅದಕ್ಕಾಗಿ ಜಗಳ ಬೇಡವೆಂದು ಅವರಿಗೆ ಅಧಿಕಾರ ನೀಡಿದ್ದೇವೆ ಎಂದರು.
ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು ಚುನಾವಣೆ ಆಗುವುದಾದರೇ ಆಗಲಿ, ನಮ್ಮ ಪಕ್ಷದಿಂದ ನಾವು ಸಿದ್ಧತೆ ಮಾಡಿಕೊಂಡಿದ್ದೇವೆ. ನನ್ನ ಪುತ್ರ ರಾಹುಲ ಡಿಸಿಸಿ ಬ್ಯಾಂಕ್ ಚುನಾವಣೆಗೆ ಸ್ಪರ್ಧಿಸುವ ವಿಚಾರ ಇನ್ನೂ 3 ತಿಂಗಳ ಸಮಯವಿದೆ. ಕಾಯ್ದುನೋಡೋಣ ಎಂದರು.ರಾಜ್ಯ ಕಾಂಗ್ರೆಸ್ ಉಸ್ತುವಾರಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣಜಿತ ಸಿಂಗ್ ಸುರ್ಜೇವಾಲಾ ಅವರು ಇನ್ನು 2 ಬಾರಿ ರಾಜ್ಯಕ್ಕೆ ಬರುತ್ತಾರೆ. ಎಲ್ಲ ಶಾಸಕರನ್ನು ಭೇಟಿ ಮಾಡುತ್ತಾರೆ ಎಂದರು.