ಜಿಲ್ಲೆಯ ನೌಕರರು ಬೆಂಗಳೂರು ಹೋರಾಟಕ್ಕೆ

| Published : Oct 04 2024, 01:08 AM IST

ಸಾರಾಂಶ

ತುಮಕೂರು : ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಧಿಕಾರಿಗಳು,ನೌಕರರು ಹಾಗೂ ಗ್ರಾಪಂ ಸದಸ್ಯರ ಒಕ್ಕೂಟದ ನೇತೃತ್ವದಲ್ಲಿ ನಡೆಯುತ್ತಿರುವ ಅನಿರ್ಧಿಷ್ಟಾವದಿ ಮುಷ್ಕರದಲ್ಲಿ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿಗಳು ಅ.4 ರಂದು ಪಾಲ್ಗೊಳ್ಳಲಿದ್ದಾರೆ.

ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯ್ತಿಗಳ ಪಿಡಿಓಗಳು ಅನಿರ್ಧಿಷ್ಠಾವದಿ ಮುಷ್ಕರದಲ್ಲಿ ಪಾಲ್ಗೊಳ್ಳಲು ಬೆಂಗಳೂರಿಗೆ ತೆರಳುತ್ತಿರುವ ಹಿನ್ನೆಲೆಯಲ್ಲಿ ಅ.4 ರಂದು ಗ್ರಾ.ಪಂ.ಕಾರ್ಯ ಚಟುವಟಿಕೆಗಳು ಸ್ಥಗಿತಗೊಳ್ಳಲಿವೆ.

ಪಿಡಿಓಗಳ ವರ್ಗಾವಣೆ ನಿಯಮಗಳಲ್ಲಿ ಯಾವುದೇ ಬದಲಾವಣೆಗೆ ಮುನ್ನ ಸಂಘದ ಸಲಹೆಯನ್ನು ಪಡೆಯಬೇಕು.7ವರ್ಷ ಪೂರೈಸಿ ಕರ್ತವ್ಯ ನಿರ್ವಹಿಸುತ್ತಿರುವ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳನ್ನು ಬೇರೆ ತಾಲೂಕಿಗೆ ವರ್ಗಾವಣೆ ಮಾಡುವ ನಿಯಮವನ್ನು ಕೈಬಿಡಬೇಕು. ಪಿಡಿಒಗಳ ಜೇಷ್ಠತಾ ಪಟ್ಟಿಯನ್ನು ಅಂತಿಮಗೊಳಿಸಿ ಆದೇಶಿಸಬೇಕು. ಕುಂದುಕೊರತೆ ಪ್ರಾಧಿಕಾರವನ್ನು ಪೊಲೀಸ್ ಇಲಾಖೆ ಮಾದರಿಯಲ್ಲಿ ಸದೃಢಗೊಳಿಸುವುದು ಸೇರಿದಂತೆ ವಿವಿಧ ಬೇಡಿಕಗಳನ್ನು ಈಡೇರಿಸುವಂತೆ ಆಗ್ರಹಿಸಿ ಪ್ರೀಡಂ ಪಾರ್ಕ್‌ ಅನಿರ್ದಿಷ್ಠಾವಧಿ ಮುಷ್ಕರ ನಡೆಯುತ್ತಿದ್ದು, ಮುಷ್ಕರದಲ್ಲಿ ಜಿಲ್ಲೆಯ ಎಲ್ಲ ಗ್ರಾಪಂಗಳ ಪಿಡಿಒಗಳು ಅ.4 ರಂದು ಭಾಗವಹಿಸಲಿದ್ದಾರೆ ಎಂದು ಪಿಡಿಓಗಳ ಸಂಘದ ಜಿಲ್ಲಾಧ್ಯಕ್ಷ ಆರ್.ನಾಗರಾಜ್ ತಿಳಿಸಿದ್ದಾರೆ.ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಅವರಿಗೆ ಪಿಡಿಒಗಳು ಈ ಸಂಬಂಧ ಮನವಿ ಸಲ್ಲಿಸಿ ಅನಿರ್ದಿಷ್ಟಾವಧಿ ಮುಷ್ಕರದಲ್ಲಿ ಪಾಲ್ಗೊಳ್ಳಲು ಬೆಂಗಳೂರಿಗೆ ತೆರಳಿದರು.