The Shivamogga District Arya Ediga Sangha has expressed happiness over the inclusion of Madhu Bangarappa in the state cabinet.

ಶಿವಮೊಗ್ಗ: ರಾಜ್ಯ ಸಚಿವ ಸಂಪುಟಕ್ಕೆ ಮಧುಬಂಗಾರಪ್ಪ ಅವರನ್ನು ಸೇರಿಸಿಕೊಂಡಿರುವುದಕ್ಕೆ ಶಿವಮೊಗ್ಗ ಜಿಲ್ಲಾ ಆರ್ಯ ಈಡಿಗ ಸಂಘ ಹರ್ಷ ವ್ಯಕ್ತಪಡಿಸಿದೆ.

ಈ ಸಂಬಂಧ ಪತ್ರಿಕಾ ಹೇಳಿಕೆ ನೀಡಿರುವ ಸಂಘದ ಅಧ್ಯಕ್ಷ ಆರ್.ಶ್ರೀಧರ್ ಹುಲ್ತಿಕೊಪ್ಪ ಅವರು, ಮಲೆನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿರುವ ಈಡಿಗ ಸಮುದಾಯಕ್ಕೆ ಹೆಚ್ಚಿನ ಪ್ರಾತಿನಿಧ್ಯ ನೀಡಬೇಕೆಂಬ ಮನವಿ ಮಾಡಲಾಗಿತ್ತು. ಈಗ ಸಮುದಾಯದ ಪ್ರಶ್ನಾತೀತ ನಾಯಕರಾಗಿದ್ದ ಮಾಜಿ ಮುಖ್ಯಮಂತ್ರಿ ಎಸ್. ಬಂಗಾರಪ್ಪ ಅವರ ಪುತ್ರರೂ ನಮ್ಮ ಸಮುದಾಯದ ಹೆಮ್ಮೆಯ ಮಧುಬಂಗಾರಪ್ಪ ಅವರಿಗೆ ಸಂಪುಟಕ್ಕೆ ಸೇರಿಸಲಾಗಿದೆ. ಸಂಖ್ಯೆಯ ದೃಷ್ಟಿಯಿಂದ ಸಮುದಾಯಕ್ಕೆ ಇನ್ನೂ ಆದ್ಯತೆ ನೀಡಬೇಕೆಂಬ ಬಯಕೆ ಜನರದ್ದಾಗಿತ್ತು ಆದರೆ ಈಗ ಕೊಟ್ಟಿರುವ ಅವಕಾಶಕ್ಕಾಗಿ ಪಕ್ಷಕ್ಕೆ ಧನ್ಯವಾದ ಸಲ್ಲಿಸುವುದಾಗಿ ಅವರು ತಿಳಿಸಿದ್ದಾರೆ.

ಈಡಿಗ ಸಮುದಾಯದ ಹೆಮ್ಮೆಯ ಯುವನಾಯಕ ಮಧುಬಂಗಾರಪ್ಪರಿಗೆ ಸಚಿವರನ್ನು ಮಾಡಿರುವುದಕ್ಕೆ ಕಾಂಗ್ರೆಸ್ ನಾಯಕರಿಗೆ ಈಡಿಗರ ಸಂಘ ಧನ್ಯವಾದ ಹೇಳುತ್ತದೆ. ಮಧು ಬಂಗಾರಪ್ಪ ಅವರಿಗೆ ಉತ್ತಮ ಖಾತೆಯನ್ನು ನೀಡುವ ಮೂಲಕ ಸಮುದಾಯಕ್ಕೆ ಹೆಚ್ಚಿನ ಶಕ್ತಿ ನೀಡಬೇಕೆಂದು ಸಿಎಂ ಡಿ.ಕೆ.ಶಿವಕುಮಾರ್ ಅವರಲ್ಲಿ ಮನವಿ ಮಾಡುವುದಾಗಿ ಶ್ರೀಧರ್ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.