ಆರ್ಥಿಕ ಬೆಳವಣಿಗೆಯಲ್ಲಿ ಸಣ್ಣ, ಸೂಕ್ಷ್ಮ ಕೈಗಾರಿಕೆಗಳ ಪಾತ್ರ ಪ್ರಮುಖ

| Published : Feb 23 2025, 12:32 AM IST

ಆರ್ಥಿಕ ಬೆಳವಣಿಗೆಯಲ್ಲಿ ಸಣ್ಣ, ಸೂಕ್ಷ್ಮ ಕೈಗಾರಿಕೆಗಳ ಪಾತ್ರ ಪ್ರಮುಖ
Share this Article
  • FB
  • TW
  • Linkdin
  • Email

ಸಾರಾಂಶ

ಕೊರೋನಾ ನಂತರದ 80 ಸಾವಿರ ಎಂಎಸ್ಎಂ ಮುಚ್ಚಿ ಹೋಗಿವೆ. ಇದರಿಂದ ಆರ್ಥಿಕತೆಯ ಬೆನ್ನಲೆಬು ಕುಸಿದು ಬಿದ್ದಿತು.

ಕನ್ನಡಪ್ರಭ ವಾರ್ತೆ ಮೈಸೂರುದೇಶದ ಆರ್ಥಿಕತೆ ಬೆಳವಣಿಗೆಯಲ್ಲಿ ಸಣ್ಣ, ಸೂಕ್ಷ್ಮ ಕೈಗಾರಿಕೆಗಳು ಪ್ರಮುಖ ಪಾತ್ರವಹಿಸಿವೆ ಎಂದು ಸಮಾಜ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ. ಮಹದೇವಪ್ಪ ತಿಳಿಸಿದರು.ನಗರದ ಚಾಮುಂಡಿ ವಿಹಾರ ಕ್ರೀಡಾಂಗಣ ಆವರಣದಲ್ಲಿ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ, ಜಿಲ್ಲಾ ಕೈಗಾರಿಕಾ ಕೇಂದ್ರ ಹಾಗೂ ಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘ (ಕಾಸಿಯಾ) ಸಹಯೋಗದಲ್ಲಿ ಆಯೋಜಿಸಿರುವ 2 ದಿನಗಳ ಮಹಿಳಾ ಉದ್ಯಮಿಗಳಿಂದ ತಯಾರಿಸಲಾದ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ ಮೇಳವನ್ನು ಅವರು ಶನಿವಾರ ಉದ್ಘಾಟಿಸಿ ಮಾತನಾಡಿದರು.ಕೊರೋನಾ ನಂತರದ 80 ಸಾವಿರ ಎಂಎಸ್ಎಂ ಮುಚ್ಚಿ ಹೋಗಿವೆ. ಇದರಿಂದ ಆರ್ಥಿಕತೆಯ ಬೆನ್ನಲೆಬು ಕುಸಿದು ಬಿದ್ದಿತು. ಈಗ ಮತ್ತೆ ಸಣ್ಣ, ಗುಡಿ ಕೈಗಾರಿಗಳು ಬೆಳವಣಿಗೆ ರಾಜ್ಯ ಸರ್ಕಾರ ರೂಪುರೇಷೆಗಳನ್ನು ರೂಪಿಸಿ ಅವಕಾಶಗಳನ್ನು ಒದಗಿಸುವ ವ್ಯವಸ್ಥೆ ಮಾಡುತ್ತಿದೆ ಎಂದು ಅವರು ಹೇಳಿದರು. ಗ್ರಾಮೀಣಾಭಿವೃದ್ಧಿ ಸಚಿವನಾಗಿದ್ದ ಸಂದರ್ಭದಲ್ಲಿ ಗುಡಿ ಕೈಗಾರಿಕೆಗಳಿಗೆ ಮಾರುಕಟ್ಟೆ ವ್ಯವಸ್ಥೆಯನ್ನು ಕಲ್ಪಿಸುವ ಯೋಜನೆ ರೂಪಿಸಿದ್ದೆ. ಇದರ ಜೊತೆಗೆ ಕಡಕೊಳದ ಬಳಿ ಜಮೀನನ್ನು ಮಹಿಳಾ ಉದ್ಯಮಕ್ಕಾಗಿ ನೀಡಲಾಗಿದೆ. ಮಹಿಳೆಯರಿಗೆ ಸೂಕ್ತ ಅವಕಾಶಗಳನ್ನು ಒದಗಿಸಿದರೆ ಯಾರಿಗೂ ಕಡಿಮೆ ಇಲ್ಲ ಎಂಬುದನ್ನು ಸಾಬೀತು ಪಡಿಸಿದ್ದಾರೆ ಎಂದು ಅವರು ಶ್ಲಾಘಿಸಿದರು.ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷೆ ಡಾ. ಪುಷ್ಪಾ ಅಮರನಾಥ್, ಕಾಸಿಯಾ ಉಪಾಧ್ಯಕ್ಷ ಬಿ.ಆರ್. ಗಣೇಶ್ ರಾವ್, ಪ್ರಧಾನ ಕಾರ್ಯದರ್ಶಿ ಎನ್. ಸುರೇಶ್ ಸಾಗರ್, ಜಂಟಿ ಕಾರ್ಯದರ್ಶಿಗಳಾದ ಎನ್. ಸತೀಶ್, ಜೆ.ಎಸ್. ಬಾಬು, ಖಜಾಂಚಿ ಎಚ್. ಮಂಜುನಾಥ್, ಮಹಿಳಾ ಸಬಲೀಕರಣದ ಉಪಾಧ್ಯಕ್ಷೆ ಎಸ್. ಲತಾ, ಜಿಲ್ಲಾ ಕೈಗಾರಿಕಾ ಕೇಂದ್ರ ಜಂಟಿ ನಿರ್ದೇಶಕ ಕೆ. ಶಿವಲಿಂಗಯ್ಯ ಮೊದಲಾದವರು ಇದ್ದರು.-- 85 ಮಳಿಗೆಗಳಲ್ಲಿ ಪ್ರದರ್ಶನ--

ಕಾಸಿಯಾ ಅಧ್ಯಕ್ಷ ಎಂ.ಜಿ. ರಾಜಗೋಪಾಲ್ ಮಾತನಾಡಿ, ಮಹಿಳೆಯರಿಗೆ ಉತ್ತೇಜನ ಹಾಗೂ ಪ್ರೋತ್ಸಾಹ ನೀಡಲು ಮೇಳವನ್ನು ಆಯೋಜಿಸಲಾಗಿದೆ. ಈ ಬಾರಿ ಒಟ್ಟಾರೆ 85 ಮಳಿಗೆಗಳಿದ್ದು, ಮಳಿಗೆಗಳಲ್ಲಿ ಮಹಿಳೆಯರಿಂದಲೇ ತಯಾರಿಸಲ್ಪಟ್ಟ ಎಂಜಿನಿಯರಿಂಗ್ ಸಂಬಂಧಿದ ವಸ್ತುಗಳು, ಮಕ್ಕಳ ಆಟಿಕೆಗಳು, ಆಹಾರೋತ್ಪನ್ನಗಳು, ಕರಕುಶಲ ವಸ್ತುಗಳು ಲಭ್ಯವಿದೆ ಎಂದು ವಿವರಿಸಿದರು.ಮೈಸೂರು, ಚಾಮರಾಜನಗರ, ಮಂಡ್ಯ, ಹಾಸನದ ಮಹಿಳಾ ಉದ್ಯಮಿಗಳಿಗೆ ಹೆಚ್ಚಿನ ಅವಕಾಶ ನೀಡಲಾಗಿದ್ದು, ಬೆಂಗಳೂರು, ಕಲಬುರಗಿ ಸೇರಿದಂತೆ ವಿವಿಧ ಜಿಲ್ಲೆಗಳ ಮಹಿಳೆಯರು ಮಳಿಗೆಗಳನ್ನು ತೆರೆದಿದ್ದಾರೆ. ಮಹಿಳೆಯರ ಮಳಿಗೆಗಳನ್ನು ಪ್ರೋತ್ಸಾಹಿಸುವ ಸಲುವಾಗಿ ಉತ್ತಮವಾದ ಮೂರು ಮಳಿಗೆಗಳಿಗೆ ಪ್ರಶಸ್ತಿಗಳನ್ನು ನೀಡುವುದರ ಜೊತೆಗೆ ಭಾಗಹಿಸಿದ ಪ್ರತಿಯೊಬ್ಬ ಮಹಿಳೆಗೂ ಪ್ರಮಾಣ ಪತ್ರ ನೀಡಲಾಗುವುದು ಎಂದು ಅವರು ತಿಳಿಸಿದರು.