ಪಲ್ಸ್ ಪೋಲಿಯೊ ಲಸಿಕಾ ಅಭಿಯಾನಕ್ಕೆ ಚಾಲನೆ

| Published : Mar 04 2024, 01:18 AM IST

ಸಾರಾಂಶ

ಮಕ್ಕಳು ಅಂಗಾಂಗಳ ನ್ಯೂನತೆಗೆ ಒಳಗಾಗಬಾರದು ಎಂಬ ಮುನ್ನೆಚ್ಚರಿಕೆ ಕ್ರಮವಾಗಿ ಸರ್ಕಾರವು ಪೋಲಿಯೊ ಲಸಿಕಾ ಅಭಿಯಾನ ಹಮ್ಮಿಕೊಂಡಿದ್ದು, ಎಲ್ಲಾ ಪೋಷಕರು ತಮ್ಮ 5 ವರ್ಷದೊಳಗಿನ ಮಕ್ಕಳಿಗೆ ನಿರ್ಲಕ್ಷ್ಯ ಮಾಡದೆ ಕಡ್ಡಾಯವಾಗಿ ಪೋಲಿಯೊ ಹಾಕಿಸಬೇಕು. ಸಮಾಜದಲ್ಲಿ ಎಲ್ಲಾ ಮಕ್ಕಳ ಆರೋಗ್ಯದಿಂದ ಉತ್ತಮ ಗುಣಮಟ್ಟದ ಶಿಕ್ಷಣ ಪಡೆಯಲು ಸಹಕಾರಿಯಾಗಲಿದೆ

ಕನ್ನಡಪ್ರಭ ವಾರ್ತೆ ಮೈಸೂರುಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕಟುಂಬ ಕಲ್ಯಾಣ ಇಲಾಖೆ ವತಿಯಿಂದ ನಗರದ ಎಸ್.ಎಂ.ಟಿ ಆಸ್ಪತ್ರೆಯಲ್ಲಿ ಭಾನುವಾರ ಆಯೋಜಿಸಿದ್ದ ರಾಷ್ಟ್ರೀಯ ಪಲ್ಸ್ ಪೋಲಿಯೊ ಲಸಿಕಾ ಅಭಿಯಾನಕ್ಕೆ ಸಮಾಜ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ. ಮಹದೇವಪ್ಪ ಅವರು ಪುಟ್ಟ ಮಕ್ಕಳಿಗೆ ಪೋಲಿಯೊ ಲಸಿಕೆ ಹಾಕುವ ಮೂಲಕ ಚಾಲನೆ ನೀಡಿದರು. ಈ ವೇಳೆ ಮಾತನಾಡಿದ ಸಚಿವರು, ಮಕ್ಕಳು ಅಂಗಾಂಗಳ ನ್ಯೂನತೆಗೆ ಒಳಗಾಗಬಾರದು ಎಂಬ ಮುನ್ನೆಚ್ಚರಿಕೆ ಕ್ರಮವಾಗಿ ಸರ್ಕಾರವು ಪೋಲಿಯೊ ಲಸಿಕಾ ಅಭಿಯಾನ ಹಮ್ಮಿಕೊಂಡಿದ್ದು, ಎಲ್ಲಾ ಪೋಷಕರು ತಮ್ಮ 5 ವರ್ಷದೊಳಗಿನ ಮಕ್ಕಳಿಗೆ ನಿರ್ಲಕ್ಷ್ಯ ಮಾಡದೆ ಕಡ್ಡಾಯವಾಗಿ ಪೋಲಿಯೊ ಹಾಕಿಸಬೇಕು. ಸಮಾಜದಲ್ಲಿ ಎಲ್ಲಾ ಮಕ್ಕಳ ಆರೋಗ್ಯದಿಂದ ಉತ್ತಮ ಗುಣಮಟ್ಟದ ಶಿಕ್ಷಣ ಪಡೆಯಲು ಸಹಕಾರಿಯಾಗಲಿದೆ ಎಂದು ತಿಳಿಸಿದರು. ಇದೇ ವೇಳೆ ವಿಶೇಷಚೇತನ ಮಕ್ಕಳಿಗೆ ಗಾಲಿಕುರ್ಚಿ, ಎಂ.ಆರ್. ಕಿಟ್ ಸಾಮಗ್ರಿಗಳು ಹಾಗೂ ಕಾರ್ಮಿಕ ಇಲಾಖೆಯ ವತಿಯಿಂದ ಕಟ್ಟಡ ಕಾರ್ಮಿಕರ ಮಕ್ಕಳಿಗೆ ಲ್ಯಾಪ್ ಟಾಪ್‌ ಗಳನ್ನು ವಿತರಿಸಲಾಯಿತು. ವಿಧಾನಪರಿಷತ್ತು ಸದಸ್ಯ ಡಾ.ಡಿ. ತಿಮ್ಮಯ್ಯ, ಜಿಪಂ ಸಿಇಒ ಕೆ.ಎಂ. ಗಾಯಿತ್ರಿ, ಜಿಲ್ಲಾ ಆರೋಗ್ಯ ಮತ್ತು ಕಟುಂಬ ಕಲ್ಯಾಣ ಅಧಿಕಾರಿ ಡಾ.ಪಿ.ಸಿ. ಕುಮಾರಸ್ವಾಮಿ, ಮೈಸೂರು ವೈದ್ಯಕೀಯ ಕಾಲೇಜು ನಿರ್ದೇಶಕಿ ಮತ್ತು ಡೀನ್ ಡಾ. ದಾಕ್ಷಾಯಿಣಿ, ಜಿಲ್ಲಾ ಆರ್.ಸಿ.ಎಚ್ ಅಧಿಕಾರಿ ಡಾ. ಜಯಂತ್, ನೋಡೆಲ್ ಅಧಿಕಾರಿ ಡಾ. ವಸಂತ್, ಸಿಎಚ್ಒ ಡಾ. ವೆಂಕಟೇಶ್ ಮೊದಲಾದವರು ಇದ್ದರು.