ಸಾರಾಂಶ
District In-charge Minister Khandre visit today
ಬೀದರ್: ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ ಬಿ.ಖಂಡ್ರೆ ಅವರು ಭಾನುವಾರ ಬೀದರ್ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ.
ಅಂದು ಬೆಳಗ್ಗೆ 8.10ಕ್ಕೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹೊರಟು ಕಲಬುರಗಿ ವಿಮಾನ ನಿಲ್ದಾಣಕ್ಕೆ ಆಗಮಿಸಿ ಬೆಳಗ್ಗೆ 9.30ಕ್ಕೆ ಕಲಬುರಗಿಯಿಂದ ರಸ್ತೆ ಮೂಲಕ ಹೊರಟು ಭಾಲ್ಕಿಗೆ ಪ್ರಯಾಣಿಸಲಿದ್ದಾರೆ. ಮಧ್ಯಾಹ್ನ 12ಕ್ಕೆ ಭಾಲ್ಕಿಯಲ್ಲಿ ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ.ಜು.29 ರಂದು ಬೆಳಗ್ಗೆ 8.45ಕ್ಕೆ ಬೀದರ್‌ನ ವಿವಿಧ ಪ್ರದೇಶಗಳಿಗೆ ಭೇಟಿ ನೀಡುವರು. ನಂತರ 9.30ಕ್ಕೆ ಮಳೆಯಿಂದ ಹಾನಿಗೊಳಗಾದ ಪ್ರದೇಶಕ್ಕೆ ಭೇಟಿ ನೀಡಲಿದ್ದಾರೆ. ಬೆಳಗ್ಗೆ 10.30ಕ್ಕೆ ಬೀದರ್‌ನ ನೆಹರು ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿರುವ ಹೊಸ ಕ್ರೀಡಾ ವಸತಿ ನಿಲಯ ಕಟ್ಟಡದ ಅಡಿಗಲ್ಲು ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.
ನಂತರ ಬೆಳಗ್ಗೆ 11ಕ್ಕೆ ಬೀದರ್ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಂಡಿರುವ ಜಿಲ್ಲಾ ಮಟ್ಟದ ಅಧಿಕಾರಿಗಳ ಜೊತೆ ಸಭೆ ನಡೆಸಲಿದ್ದಾರೆ. ಮಧ್ಯಾಹ್ನ 12ಕ್ಕೆ ಬೀದರ್ ಪತ್ರಿಕಾ ಭವನದಲ್ಲಿ ಹಮ್ಮಿಕೊಂಡಿರುವ ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಬಳಿಕ ಮಧ್ಯಾಹ್ನ 1 ಗಂಟೆಗೆ ಬೀದರ್‌ನಿಂದ ರಸ್ತೆ ಮೂಲಕ ಕಲಬುರಗಿಗೆ ಪ್ರಯಾಣಿಸಲಿದ್ದಾರೆ ಎಂದು ಸಚಿವರ ಆಪ್ತ ಕಾರ್ಯದರ್ಶಿ ಎ.ಆರ್.ರವಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.