- ಜೂನ್‌ನಲ್ಲಿ ನಡೆಯುವ ಸಮಾರಂಭದಲ್ಲಿ ಗೌರವ: ಜಿಲ್ಲಾಧ್ಯಕ್ಷ
- - -ಕನ್ನಡಪ್ರಭ ವಾರ್ತೆ ದಾವಣಗೆರೆ
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದಿಂದ ದಾವಣಗೆರೆ ಜಿಲ್ಲೆಯ ಪತ್ರಕರ್ತರ ಪ್ರತಿಭಾನ್ವಿತ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಲಾಗುವುದು ಎಂದು ಸಂಘದ ಜಿಲ್ಲಾಧ್ಯಕ್ಷ ಇ.ಎಂ. ಮಂಜುನಾಥ ತಿಳಿಸಿದ್ದಾರೆ.2025-26ನೇ ಸಾಲಿನ ಶೈಕ್ಷಣಿಕ ವರ್ಷದ ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ.80ಕ್ಕೂ ಹೆಚ್ಚು ಅಂಕಗಳನ್ನು ಪಡೆದು ಉತ್ತೀರ್ಣರಾಗಿರುವ ಪತ್ರಕರ್ತರ ಮಕ್ಕಳು ದಾವಣಗೆರೆ ಜಿಲ್ಲಾಮಟ್ಟದ ಪುರಸ್ಕಾರಕ್ಕೆ ಅರ್ಹರಾಗಿರುತ್ತಾರೆ ಎಂದಿದ್ದಾರೆ.
ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಶೇ.80ಕ್ಕೂ ಹೆಚ್ಚು ಅಂಕಗಳನ್ನು ಪಡೆದ ಪತ್ರಕರ್ತರ ಮಕ್ಕಳನ್ನು `ವಿದ್ಯಾಸಿರಿ'''''''' ಪ್ರಶಸ್ತಿಯೊಂದಿಗೆ ಮತ್ತು ದ್ವಿತೀಯ ಪಿಯುಸಿಯಲ್ಲಿ ಶೇ.80ಕ್ಕೂ ಹೆಚ್ಚು ಅಂಕಗಳನ್ನು ಪಡೆದ ಪತ್ರಕರ್ತರ ಮಕ್ಕಳನ್ನು `ವಿದ್ಯಾರತ್ನ'''''''' ಪ್ರಶಸ್ತಿಯೊಂದಿಗೆ ಸನ್ಮಾನಿಸಿ, ಸ್ಮರಣಿಕೆ, ಫಲ-ಪುಷ್ಪದೊಂದಿಗೆ ಗೌರವಿಸಲಾಗುವುದು ಎಂದು ಹೇಳಿದ್ದಾರೆ.
ಪ್ರಥಮ ಭಾಷೆ ಕನ್ನಡದಲ್ಲಿ 125ಕ್ಕೆ 120ಕ್ಕೂ ಹೆಚ್ಚು ಅಂಕಗಳನ್ನು ಪಡೆದ ವಿದ್ಯಾರ್ಥಿಗಳನ್ನು `ಕನ್ನಡ ರತ್ನ'''''''' ಪ್ರಶಸ್ತಿಯೊಂದಿಗೆ ವಿಶೇಷವಾಗಿ ಪುರಸ್ಕರಿಸಲಾಗುತ್ತದೆ. ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗಳಲ್ಲಿ ಶೇ.90ಕ್ಕೂ ಹೆಚ್ಚು ಅಂಕಗಳನ್ನು ಪಡೆದ ದಾವಣಗೆರೆ ಜಿಲ್ಲೆಯ ಪತ್ರಕರ್ತರ ಮಕ್ಕಳನ್ನು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದಿಂದ ರಾಜ್ಯಮಟ್ಟದ ಪುರಸ್ಕಾರಕ್ಕೆ ಆಯ್ಕೆ ಮಾಡಲಾಗುತ್ತದೆ ಎಂದು ಪ್ರಧಾನ ಕಾರ್ಯದರ್ಶಿ ಎನ್.ವಿ. ಬದರೀನಾಥ್ ತಿಳಿಸಿದ್ದಾರೆ.
ಅರ್ಹ ಪತ್ರಕರ್ತರ ಮಕ್ಕಳು ಅರ್ಜಿಗಳನ್ನು ಪಡೆದು ಸ್ವ-ವಿವರ, ಭಾವಚಿತ್ರ, ಅಂಕಪಟ್ಟಿ ಜೆರಾಕ್ಸ್, ಸದಸ್ಯರ ಹಾಗೂ ಮಕ್ಕಳ ಆಧಾರ್ ಕಾರ್ಡ್, ಸಂಘದ ಸದಸ್ಯತ್ವದ ಜೆರಾಕ್ಸ್ ಪ್ರತಿಯೊಂದಿಗೆ ಸಲ್ಲಿಸಬೇಕು. ಜಿಲ್ಲಾ ಮಟ್ಟಕ್ಕೆ ಮೇ 25ರೊಳಗೆ, ರಾಜ್ಯಮಟ್ಟಕ್ಕೆ ಮೇ 15ರೊಳಗಾಗಿ ಅರ್ಜಿ ಸಲ್ಲಿಸಬೇಕು. ಅರ್ಜಿಗಳನ್ನು ಸಿ.ವೇದಮೂರ್ತಿ, ಕಾರ್ಯಕ್ರಮದ ಉಸ್ತುವಾರಿ, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ದಾವಣಗೆರೆ ಜಿಲ್ಲಾ ಘಟಕದ ಕಾರ್ಯಾಲಯ, ಮಹಾನಗರ ಪಾಲಿಕೆ ಆವರಣ, ದಾವಣಗೆರೆ ಈ ವಿಳಾಸಕ್ಕೆ ಸಲ್ಲಿಸಬೇಕು.ಅರ್ಜಿ ಸಲ್ಲಿಸುವ ಮಕ್ಕಳ ಪೋಷಕರು ಕಡ್ಡಾಯವಾಗಿ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯತ್ವ ಹೊಂದಿರಬೇಕು. ಆಯ್ಕೆಯಾದ ವಿದ್ಯಾರ್ಥಿಗಳನ್ನು ಬರುವ ಜೂನ್ ಮಾಹೆಯಲ್ಲಿ ನಡೆಯುವ ಸಮಾರಂಭದಲ್ಲಿ ಪುರಸ್ಕರಿಸಲಾಗುತ್ತದೆ. ಈ ಕುರಿತು ಹೆಚ್ಚಿನ ಮಾಹಿತಿಗೆ ಮೊ: 94482- 77772 / 94487 28858 / 98443 77451 ಇಲ್ಲಿಗೆ ಸಂಪರ್ಕಿಸಲು ತಿಳಿಸಲಾಗಿದೆ.
- - -