ಮಂಗಳೂರಿನಿಂದ ಶನಿವಾರ ಬೆಳಗ್ಗೆ 11.20ಕ್ಕೆ ತೀರ್ಥಹಳ್ಳಿ ಪಟ್ಟಣಕ್ಕೆ ಆಗಮಿಸಿದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಜೊತೆ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ, ಅರಣ್ಯ ಸಚಿವ ರಾಮಲಿಂಗಾ ರೆಡ್ಡಿ ಇದ್ದರು. ಸ್ಥಳೀಯ ಶಾಸಕ ಆರಗ ಜ್ಞಾನೇಂದ್ರ ಹಾಗೂ ಬೇಳೂರು ಗೋಪಾಲಕೃಷ್ಣ, ಮಾಜಿ ಶಾಸಕ ಕಿಮ್ಮನೆ ರತ್ನಾಕರ್, ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್.ಎಂ.ಮಂಜುನಾಥಗೌಡ ಸೇರಿದಂತೆ ಮುಖಂಡರು ಮುಖ್ಯಮಂತ್ರಿಗಳನ್ನು ಸ್ವಾಗತಿಸಿದರು.

ತೀರ್ಥಹಳ್ಳಿ: ಮಂಗಳೂರಿನಿಂದ ಶನಿವಾರ ಬೆಳಗ್ಗೆ 11.20ಕ್ಕೆ ತೀರ್ಥಹಳ್ಳಿ ಪಟ್ಟಣಕ್ಕೆ ಆಗಮಿಸಿದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಜೊತೆ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ, ಅರಣ್ಯ ಸಚಿವ ರಾಮಲಿಂಗಾ ರೆಡ್ಡಿ ಇದ್ದರು. ಸ್ಥಳೀಯ ಶಾಸಕ ಆರಗ ಜ್ಞಾನೇಂದ್ರ ಹಾಗೂ ಬೇಳೂರು ಗೋಪಾಲಕೃಷ್ಣ, ಮಾಜಿ ಶಾಸಕ ಕಿಮ್ಮನೆ ರತ್ನಾಕರ್, ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್.ಎಂ.ಮಂಜುನಾಥಗೌಡ ಸೇರಿದಂತೆ ಮುಖಂಡರು ಮುಖ್ಯಮಂತ್ರಿಗಳನ್ನು ಸ್ವಾಗತಿಸಿದರು.

ವೇದಿಕೆ ಕಾರ್ಯಕ್ರಮಕ್ಕೆ ಹೋಗುವ ಮುನ್ನ ಪಟ್ಟಣದ ಸುವರ್ಣ ಸಹಕಾರ ಭವನದಲ್ಲಿ ನಡೆಯುತ್ತಿದ್ದ ತಾಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ ಸುವರ್ಣ ಮಹೋತ್ಸವ ಸಮಾರಂಭಕ್ಕೆ ಭೇಟಿ ನೀಡಿ ಶುಭ ಹಾರೈಸಿದ ಮುಖ್ಯಮಂತ್ರಿ ಸಮಾಜದಲ್ಲಿ ಸಹಬಾಳ್ವೆ ಮೂಡಿಸಲು ಸಹಕಾರಿ ವ್ಯವಸ್ಥೆ ಸಹಕಾರಿಯಗಿದೆ. ನಾನು ನನ್ನ 22ನೇ ವಯಸ್ಸಿನಲ್ಲಿ ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ ಮೂಲಕವೇ ಸಾರ್ವಜನಿಕ ಜೀವನಕ್ಕೆ ಕಾಲಿಟ್ಟಿದ್ದೇನೆ ಎಂದರು.

ವೇದಿಕೆ ಕಾರ್ಯಕ್ರಮದ ನಂತರ ಬಾಳೆಹೊನ್ನೂರಿಗೆ ಹೋಗುವ ಮುನ್ನ ಪಟ್ಟಣದ ಪುರಾಣ ಪ್ರಸಿದ್ಧವಾದ ಶ್ರೀ ರಾಮೇಶ್ವರ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿದರು. ದೇವಸ್ಥಾನದ ಅಭಿವೃದ್ಧಿಗೆ ಸರ್ಕಾರದ ಅನುದಾನ ಕೋರಿ ಮುಖ್ಯಮಂತ್ರಿಗಳಿಗೆ ಧರ್ಮದರ್ಶಿ ಮಂಡಳಿ ಅಧ್ಯಕ್ಷ ಹಾಲಿಗೆ ನಾಗರಾಜ್ ಮನವಿ ಸಲ್ಲಿಸಿದರಲ್ಲದೇ, ಧರ್ಮದರ್ಶಿ ಮಂಡಳಿಯ ವತಿಯಿಂದ ನೆನಪಿನ ಕಾಣಿಕೆ ನೀಡಿ ಗೌರವಿಸಿದರು. ಇದೇ ವೇಳೆ ಶ್ರೀ ರಾಮೇಶ್ವರ ಅನ್ನದಾಸೋಹ ಸಮಿತಿಯ ವತಿಯಿಂದಲೂ ಮುಖ್ಯಮಂತ್ರಿಗಳನ್ನು ಗೌರವಿಸಲಾಯಿತು.

---

ತೀರ್ಥಹಳ್ಳಿ ಪಟ್ಟಣಕ್ಕೆ ಆಗಮಿಸಿದ್ದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಇಲ್ಲಿನ ಪುರಾಣ ಪ್ರಸಿದ್ಧವಾದ ಶ್ರೀ ರಾಮೇಶ್ವರ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿದರು.