ನವೆಂಬರ್‌ 19 ರಂದು ಚಾಮರಾಜನಗರದಲ್ಲಿ ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಮಟ್ಟದ ಸರ್ವ ಸದಸ್ಯರ ಸಭೆ

| Published : Nov 17 2024, 01:17 AM IST

ನವೆಂಬರ್‌ 19 ರಂದು ಚಾಮರಾಜನಗರದಲ್ಲಿ ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಮಟ್ಟದ ಸರ್ವ ಸದಸ್ಯರ ಸಭೆ
Share this Article
  • FB
  • TW
  • Linkdin
  • Email

ಸಾರಾಂಶ

ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ಜಿಲ್ಲಾ ಮಟ್ಟದ ಸರ್ವ ಸದಸ್ಯರ ಸಭೆ ಹಾಗೂ ಜಿಲ್ಲಾ ಸಮಿತಿ ಪುನರ್ ರಚನೆ ಕಾರ್ಯಕ್ರಮವು ನ.19 ರಂದು ಮಂಗಳವಾರ ನಗರದ ವಾಲ್ಮೀಕಿ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಸಮಿತಿಯ ರಾಜ್ಯ ಸಂಘಟನಾ ಸಂಚಾಲಕ ಕೆ.ಸಿದ್ದರಾಜು ದೊಡ್ಡಿಂದುವಾಡಿ ತಿಳಿಸಿದರು. ಚಾಮರಾಜನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಕನ್ನಡಪ್ರಭ ವಾರ್ತೆ ಚಾಮರಾಜನಗರ

ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ಜಿಲ್ಲಾ ಮಟ್ಟದ ಸರ್ವ ಸದಸ್ಯರ ಸಭೆ ಹಾಗೂ ಜಿಲ್ಲಾ ಸಮಿತಿ ಪುನರ್ ರಚನೆ ಕಾರ್ಯಕ್ರಮವು ನ.19 ರಂದು ಮಂಗಳವಾರ ನಗರದ ವಾಲ್ಮೀಕಿ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಸಮಿತಿಯ ರಾಜ್ಯ ಸಂಘಟನಾ ಸಂಚಾಲಕ ಕೆ.ಸಿದ್ದರಾಜು ದೊಡ್ಡಿಂದುವಾಡಿ ತಿಳಿಸಿದರು.

ನಗರದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ನಡೆಯುವ ಸಭೆಯನ್ನು ಸಮಿತಿಯ ರಾಜ್ಯಾಧ್ಯಕ್ಷ ಮಾವಳ್ಳಿ ಶಂಕರ್ ಉದ್ಘಾಟಿಸುವರು, ರಾಜ್ಯ ಸಂಘಟನಾ ಸಂಚಾಲಕ ಕೆ.ಸಿದ್ದರಾಜು ದೊಡ್ಡಿಂದುವಾಡಿ ಅಧ್ಯಕ್ಷತೆ ವಹಿಸುವವರು, ರಾಜ್ಯ ಸಮಿತಿ ಸದಸ್ಯರಾದ ಇಂದಿರಾಕೃಷ್ಣಪ್ಪ ಪುಷ್ಪಾರ್ಚನೆ ಮಾಡುವವರು, ಉಡುಪಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಪ್ರಾದೇಶಿಕ ನಿರ್ದೇಶಕ ಡಾ.ಕೆ.ಪಿ.ಮಹಾಲಿಂಗು ಕಲ್ಕುಂದ ಹಾಗೂ ಚಾಮರಾಜನಗರ ವಿವಿ ಕನ್ನಡ ಪ್ರಾಧ್ಯಾಪಕ ಜಿ.ಗುರುರಾಜ್ ಯರಗನಹಳ್ಳಿ ದಲಿತ ಸಾಹಿತ್ಯ ಮತ್ತು ದಲಿತ ಚಳವಳಿ ಕುರಿತು ಮುಖ್ಯ ಭಾಷಣ ಮಾಡಲಿದ್ದಾರೆ ಎಂದರು.

ಮುಖ್ಯ ಅತಿಥಿಗಳಾಗಿ ರಾಜ್ಯ ಸಂಘಟನಾ ಸಂಚಾಲಕ ರಮೇಶ್‌ ಡಾ.ಕುಳಿಕಿ, ಈರೇಶ್‌ ಈರೇಹಳ್ಳಿ, ಸುಂದರ್ ಮಾಸ್ಟರ್, ಕಾರಳ್ಳಿ ಶ್ರೀನಿವಾಸ್, ದಲಿತ ಮಹಿಳಾ ಒಕ್ಕೂಟದ ರಾಜ್ಯ ಸಂಚಾಲಕಿ ನಿರ್ಮಲ, ಸುಮ ಇತರರು ಭಾಗವಹಿಸಲಿದ್ದಾರೆ. ಈ ಕಾರ್ಯಕ್ರಮಕ್ಕೆ ಸಂಘದ ಪದಾಧಿಕಾರಿಗಳು ಸದಸ್ಯರು, ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶ್ವಸಿಗೊಳಿಸಿಕೊಡಬೇಕು ಎಂದು ಮನವಿ ಮಾಡಿದರು.

ಪತ್ರಿಕಾಗೋಷ್ಠಿಯಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ ಕೆ.ವೀರ ವಿ.ಎಸ್.ದೊಡ್ಡಿ ಒಡೆಯರಪಾಳ್ಯ, ಹಿಂಡಯ್ಯ ಮಾಂಬಳ್ಳಿ ನಾಗಣ್ಣ ಹನೂರು, ಮಹೇಶ್‌ ಕಾಳನಹುಂಡಿ, ಹನೂರು ತಾಲೂಕು ಸಂಚಾಲಕ ಮಾದೇಶ್ ಭೈರನತ್ತ. ಸಂಘಟನಾ ಸಂಚಾಲಕ ಮುರುಗೇಶ್, ಕೊಳ್ಳೇಗಾಲ ತಾಲೂಕು ಸಂಚಾಲಕ ಚಿಕ್ಕದೊಡ್ಡಯ್ಯ. ಕೊತ್ತನೂರು, ಯಳಂದೂರು ತಾಲೂಕು ಸಂಚಾಲಕ ಆರ್.ರಾಚಪ್ಪ, ಈರತಯ್ಯ ಕೊತ್ತನೂರ ಹಾಜರಿದ್ದರು.