ಸಾರಾಂಶ
ಯಾದಗಿರಿ: 2024-25ನೇ ಸಾಲಿನ ಆತ್ಮ ಯೋಜನೆಯಡಿಯಲ್ಲಿ ಜಿಲ್ಲಾ ಮಟ್ಟದ ಶ್ರೇಷ್ಠ ಕೃಷಿಕ ಪ್ರಶಸ್ತಿ ಹಾಗೂ ತಾಲೂಕು ಮಟ್ಟದ ಶ್ರೇಷ್ಠ ಕೃಷಿಕ ಪ್ರಶಸ್ತಿಗಳನ್ನು, ಪ್ರಗತಿಪರ ರೈತರ ಸಾಧನೆಗಳನ್ನು ಗುರುತಿಸಿ ಪುರಸ್ಕರಿಸಲು ಸರ್ಕಾರದಿಂದ ತೀರ್ಮಾನಿಸಲಾಗಿದೆ. ಕೃಷಿ ವಲಯದಲ್ಲಿ ಸಾಧನೆ ಮೂಲಕ ರೈತ ಸಮುದಾಯಕ್ಕೆ ಅತ್ಯುತ್ತಮ ಕೊಡುಗೆ ನೀಡುತ್ತಿರುವ ಕೃಷಿಕ ಪ್ರಶಸ್ತಿಗಾಗಿ ಪರಿಣಿತ ಕೃಷಿಕ ರೈತ, ರೈತ ಮಹಿಳೆಯರನ್ನು ಗುರುತಿಸಿ ಪ್ರಶಸ್ತಿಯನ್ನು ನಗದು ಬಹುಮಾನದೊಂದಿಗೆ ನೀಡಿ ಗೌರವಿಸಲಾಗುವುದು. 2024-25ನೇ ಸಾಲಿನ ಜಿಲ್ಲಾ ಮಟ್ಟದ ಶ್ರೇಷ್ಠ ಕೃಷಿಕ ಪ್ರಶಸ್ತಿ ಹಾಗೂ ತಾಲೂಕು ಮಟ್ಟದ ಶ್ರೇಷ್ಠ ಕೃಷಿಕ ಪ್ರಶಸ್ತಿಗಾಗಿ ಜಿಲ್ಲೆಯ ಎಲ್ಲಾ ತಾಲೂಕಗಳಲ್ಲಿ ರೈತ, ರೈತ ಮಹಿಳೆಯರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಯಾದಗಿರಿ ಜಂಟಿ ಕೃಷಿ ನಿರ್ದೇಶಕರು ಹಾಗೂ ಯೋಜನಾ ನಿರ್ದೇಶಕರು (ಆತ್ಮ) ಶ್ರೀ ಕೆ.ಹೆಚ್ ರವಿ ಅವರು ತಿಳಿಸಿದ್ದಾರೆ.
ಶ್ರೇಷ್ಟ ಕೃಷಿಕ ಪ್ರಶಸ್ತಿಗಾಗಿ ಭಾಗವಹಿಸಲಿಚ್ಚಿಸುವವರು ಕೃಷಿ ಕ್ಷೇತ್ರದಲ್ಲಿ ಗಮನಾರ್ಹ, ವಿಶಿಷ್ಟ ಸಾಧನೆ ಮಾಡಿರಬೇಕು. ಅವರ ಸಂಶೋಧನೆ, ಸಾಧನೆಗಳು ವ್ಯಾಪಕವಾಗಿ ಅಳವಡಿಸಲು ಕೃಷಿ ಕ್ಷೇತ್ರದ ಏಳಿಗೆಗೆ ಪೂರಕವಾಗಿರಬೇಕು. ಅಭ್ಯರ್ಥಿಗಳ ಸಾಧನೆಯ ಮೂಲ ಸ್ವರೂಪವಾಗಿದ್ದು, ಬೇರೆಯವರ ಸಾಧನೆಗಿಂತ ಭಿನ್ನವಾಗಿರಬೇಕು. ಕಂದಾಯ ಇಲಾಖೆಯ ದಾಖಲೆ ಪ್ರಕಾರ ಜಮೀನು (ಖಾತೆ) ಹೊಂದಿರುವ ಹಾಗೂ ಸ್ವಂತ ಬೇಸಾಯದಲ್ಲಿ ತೊಡಗಿರುವ ಸ್ವಯಂ ಕ್ರೀಯಾಶೀಲ ಕೃಷಿಕರಾಗಿದ್ದು, ಪಹಣಿ ಪತ್ರಿಕೆ ಕಡ್ಡಾಯ ಭರ್ತಿ ಮಾಡಿದ ಅರ್ಜಿಯೊಂದಿಗೆ ಲಗತ್ತಿಸಬೇಕು.ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 10ರ ಒಳಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಸಹಾಯಕ ಕೃಷಿ ನಿರ್ದೇಶಕರು ಕಚೇರಿ ಹಾಗೂ ತಾಲೂಕ ತಾಂತ್ರಿಕ ವ್ಯವಸ್ಥಾಪಕರನ್ನು ಸಂಪರ್ಕಿಸಬಹುದು. ಶಹಾಪೂರ, ನಕುಲ 7975478141, ಶೋರಾಪೂರ ವಿನಾಯಕ ಚೌವ್ಹಣ 9741287761, ಯಾದಗಿರಿ, ರವೀಂದ್ರ ಬೈಟಿಪುಲಿ 6361587248ಗೆ ಸಂಪರ್ಕಿಸಬಹುದು.