ಕನ್ನಡಪ್ರಭ ವಾರ್ತೆ ಮಂಡ್ಯ
ಜಿಲ್ಲಾದ್ಯಂತ ಕರ್ತವ್ಯ ನಿರ್ವಹಿಸುತ್ತಿರುವ ಸರ್ಕಾರಿ ಅಧಿಕಾರಿ-ನೌಕರರ ಕಾರ್ಯವೈಖರಿ, ಕಾರ್ಯಕ್ಷಮತೆ ಹಾಗೂ ಗಮನಾರ್ಹ ಸಾಧನೆಯನ್ನು ಪರಿಗಣಿಸಿ ಜಿಲ್ಲಾ ಮಟ್ಟದ ಆಯ್ಕೆ ಸಮಿತಿಯು ೨೦೨೪, ೨೦೨೫ ಮತ್ತು ೨೦೨೬ನೇ ಸಾಲಿನಲ್ಲಿ ಜಿಲ್ಲಾ ಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿಗೆ ಆಯ್ಕೆ ಮಾಡಿದೆ.ಜಿಲ್ಲಾಡಳಿತದಿಂದ ಮೇ ೧೩ರಂದು ಮಧ್ಯಾಹ್ನ ೨ ಗಂಟೆಗೆ ನಗರದ ಅಂಬೇಡ್ಕರ್ ಭವನದಲ್ಲಿ ರಾಜ್ಯ ಸರ್ಕಾರಿ ನೌಕರರ ದಿನಾಚರಣೆ ಹಾಗೂ ಜಿಲ್ಲಾ ಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿ ಪ್ರದಾನ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ. ಕೃಷಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ನಡೆಯಲಿದೆ.
೨೦೨೪ ನೇ ಸಾಲಿನಲ್ಲಿ ಜಿಲ್ಲಾ ಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿಗೆ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಮುಖ್ಯ ಆಡಳಿತಾಧಿಕಾರಿ ಟಿ. ಎನ್.ಶಿವಕುಮಾರ್, ಕೆ.ಆರ್.ಪೇಟೆ ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಕೆ.ಸುಷಾ, ಡಯಟ್ ಉಪನ್ಯಾಸಕ ಜಿ.ಆರ್.ಚಂದ್ರಶೇಖರ್, ಜಿಲ್ಲಾಧಿಕಾರಿ ಕಚೇರಿಯ ಶಿರಸ್ತೇದಾರ್ ಬಿ.ಎ.ಬಾಲಸುಬ್ರಹ್ಮಣ್ಯ ಮತ್ತು ಕೊತ್ತತ್ತಿ -೨ನೇ ಹೋಬಳಿ ಉಪ ತಹಶೀಲ್ದಾರ್ ಡಿ.ತಮ್ಮಣ್ಣಗೌಡ, ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯ ವ್ಯವಸ್ಥಾಪಕರು ಎಂ.ರೇಣುಕಾ, ಪಂಚಾಯತ್ ಇಲಾಖೆಯಿಂದ ಮದ್ದೂರು ತಾಲೂಕು ಹೆಮ್ಮನಹಳ್ಳಿ ಗ್ರಾಮ ಪಂಚಾಯಿತಿ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಲೀಲಾವತಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಹಾಸ್ಟೆಲ್ ಸೂಪರಿಂಡೆಂಟ್ ಎಂ.ಎನ್.ಗೋಪಿ ಹಾಗೂ ಜಿಲ್ಲಾಧಿಕಾರಿ ಕಚೇರಿಯ ಅಟೆಂಡರ್ ರಾಖಿಗೋವಿಯಸ್ ಆಯ್ಕೆಯಾಗಿದ್ದಾರೆ.೨೦೨೫ ನೇ ಸಾಲಿನಲ್ಲಿ ಆಹಾರ ಇಲಾಖೆ ಜಂಟಿ ನಿರ್ದೇಶಕ ಎಂ.ಪಿ.ಕೃಷ್ಣಕುಮಾರ್, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಎಸ್.ರಶ್ಮಿ, ಶಾಲಾ ಶಿಕ್ಷಣ ಇಲಾಖೆಯ ಜಿಲ್ಲಾ ಯೋಜನಾ ಉಪ ಸಮನ್ವಯಾಧಿಕಾರಿ ಬಿ.ಚಂದ್ರಶೇಖರ, ಸಾತನೂರು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಶಿಲ್ಪ, ಜಿಲ್ಲಾ ಪಶುಸಂಗೋಪನ ಇಲಾಖೆಯ ಮುಖ್ಯ ಪಶು ವೈದ್ಯಾಧಿಕಾರಿ ಡಾ.ಬಿ.ಎಸ್.ತ್ರಿನೇಶ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಹಾಸ್ಟೆಲ್ ಸೂಪರಿಂಡೆಂಟ್ ಎಚ್.ಎನ್.ರವಿ, ನಾಗಮಂಗಲ ತಾಲೂಕು ಅಂಚೆ ಚಿಟ್ಟನಹಳ್ಳಿ ವೃತ್ತದ ಗ್ರಾಮ ಆಡಳಿತ ಅಧಿಕಾರಿ ಸೌಮ್ಯ, ಕರ್ನಾಟಕ ಸರ್ಕಾರಿ ವಿಮಾ ಇಲಾಖೆಯ ದ್ವಿತೀಯ ದರ್ಜೆ ಸಹಾಯಕ ಆನಂದ್ ಆಯ್ಕೆಯಾಗಿದ್ದಾರೆ.
೨೦೨೬ ನೇ ಸಾಲಿನ ಜಿಲ್ಲಾ ಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿಗೆ ಜಿಲ್ಲಾ ಖಜಾನೆ ಉಪ ನಿರ್ದೇಶಕಿ ವರಲಕ್ಷ್ಮೀ, ಪಶು ಸಂಗೋಪನಾ ಇಲಾಖೆ ಪ್ರಭಾರ ಉಪ ಕಾರ್ಯದರ್ಶಿ ಶಿವಲಿಂಗಯ್ಯ, ಮಂಡ್ಯ ಉಪ ವಿಭಾಗಾಧಿಕಾರಿ ಎಂ.ಶಿವಮೂರ್ತಿ, ನಾಗಮಂಗಲ ತಾಲೂಕು ಆಸ್ಪತ್ರೆ ಡಾ.ಆದಿತ್ಯ ಕುಮಾರ್, ಅಕ್ಷರ ದಾಸೋಹ ವಿಭಾಗದ ಸಹಾಯಕ ನಿರ್ದೇಶಕ ಡಿ.ಗಿರೀಶ, ಜಿಲ್ಲಾ ಪಂಚಾಯತ್ ಸೂಪರಿಂಟೆಂಡೆಂಟ್ ಎಲ್.ಜಿ.ಪ್ರಕಾಶ್, ಜಿಲ್ಲಾಧಿಕಾರಿಗಳ ಕಚೇರಿಯ ದ್ವಿತೀಯ ದರ್ಜೆ ಸಹಾಯಕ ನರೇಶ್, ಕೀಲಾರ ಸಮುದಾಯ ಆರೋಗ್ಯ ಕೇಂದ್ರದ ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಎಚ್.ಎಂ.ರವಿ, ಮದ್ದೂರು ತಾಲೂಕು ಅಬಲವಾಡಿ ಮತ್ತು ಕೌಡ್ಲೆ ವೃತ್ತದ ಗ್ರಾಮ ಆಡಳಿತ ಅಧಿಕಾರಿ ಜೆ.ಮುರಳಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ನಿಲಯ ಪಾಲಕಿ ಎಸ್.ಯೋಗಿತಾ ಆಯ್ಕೆಯಾಗಿದ್ದಾರೆ.