ನವೆಂಬರ್‌ 15ರಂದು ರಾಣಿಬೆನ್ನೂರಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ

| Published : Nov 09 2025, 03:15 AM IST

ನವೆಂಬರ್‌ 15ರಂದು ರಾಣಿಬೆನ್ನೂರಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ
Share this Article
  • FB
  • TW
  • Linkdin
  • Email

ಸಾರಾಂಶ

ರಾಣಿಬೆನ್ನೂರ ನಗರದ ಆಂಗ್ಲೋ ಉರ್ದು ಹೈಸ್ಕೂಲಿನಲ್ಲಿ ನ. 15ರಂದು ನಡೆಯುವ ಹಾವೇರಿ ಜಿಲ್ಲಾ ಮಟ್ಟದ ಉದ್ಯೋಗ ಮೇಳದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಉದ್ಯೋಗದಾತ ಕಂಪನಿಗಳು ಭಾಗವಹಿಸುವಂತೆ ಕ್ರಮವಹಿಸಬೇಕು ಹಾಗೂ ಜಿಲ್ಲೆಯ ನಿರುದ್ಯೋಗಿಗಳಿಗೆ ಉದ್ಯೋಗ ಸಿಗುವಂತಾಗಬೇಕು ಎಂದು ಅಪರ ಜಿಲ್ಲಾಧಿಕಾರಿ ಡಾ. ನಾಗರಾಜ ಎಲ್. ಅಧಿಕಾರಿಗಳಿಗೆ ಸೂಚನೆ ನೀಡಿದರು.

ಹಾವೇರಿ: ರಾಣಿಬೆನ್ನೂರ ನಗರದ ಆಂಗ್ಲೋ ಉರ್ದು ಹೈಸ್ಕೂಲಿನಲ್ಲಿ ನ. 15ರಂದು ನಡೆಯುವ ಹಾವೇರಿ ಜಿಲ್ಲಾ ಮಟ್ಟದ ಉದ್ಯೋಗ ಮೇಳದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಉದ್ಯೋಗದಾತ ಕಂಪನಿಗಳು ಭಾಗವಹಿಸುವಂತೆ ಕ್ರಮವಹಿಸಬೇಕು ಹಾಗೂ ಜಿಲ್ಲೆಯ ನಿರುದ್ಯೋಗಿಗಳಿಗೆ ಉದ್ಯೋಗ ಸಿಗುವಂತಾಗಬೇಕು ಎಂದು ಅಪರ ಜಿಲ್ಲಾಧಿಕಾರಿ ಡಾ. ನಾಗರಾಜ ಎಲ್. ಅಧಿಕಾರಿಗಳಿಗೆ ಸೂಚನೆ ನೀಡಿದರು. ಅಪರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಶುಕ್ರವಾರ ಹಾವೇರಿ ಜಿಲ್ಲಾ ಮಟ್ಟದ ಉದ್ಯೋಗ ಮೇಳದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಯುವನಿಧಿ ಸೌಲಭ್ಯ ಪಡೆಯುತ್ತಿರುವ ಫಲಾನುಭವಿಗಳು ಈ ಉದ್ಯೋಗಮೇಳದಲ್ಲಿ ಭಾಗವಹಿಸುವಂತೆ ಅವರಿಗೆ ವಾಟ್ಸಾಪ್ ಸಂದೇಶ ಕಳುಹಿಸಬೇಕು ಎಂದು ಸಲಹೆ ನೀಡಿದರು.ಅಗತ್ಯ ಮಾಹಿತಿ ನೀಡಿ: ಉದ್ಯೋಗ ಮೇಳದಲ್ಲಿ ಭಾಗವಹಿಸುವ ಅಭ್ಯರ್ಥಿಗಳಿಗೆ ನೋಂದಣಿ, ದಾಖಲೆಗಳ ಮಾಹಿತಿ, ಮೇಳಕ್ಕೆ ಆಗಮಿಸುವ ಮಾರ್ಗ, ನೋಂದಣಿ ಕೌಂಟರ್ ಸೇರಿದಂತೆ ಅಗತ್ಯ ಮಾಹಿತಿ ನೀಡಬೇಕು. ಉದ್ಯೋಗ ಮೇಳದಲ್ಲಿ ನೀರು ಹಾಗೂ ನೆರಳಿನ ವ್ಯವಸ್ಥೆ ಮಾಡಬೇಕು ಎಂದು ಸೂಚಿಸಿದರು.ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಸೋನಾಲಿಕ್ ಕ್ಷೀರಸಾಗರ ಮಾತನಾಡಿ, ಉದ್ಯೋಗ ಮೇಳದ ಕುರಿತು ಎಲ್ಲ ತರದ ಉದ್ಯೋಗ ಕಂಪನಿಗಳನ್ನು ಸಂಪರ್ಕಿಸಲಾಗಿದೆ ಹಾಗೂ ಸಮಾಜಿಕ ಜಾಲತಾಣ ಸೇರಿದಂತೆ ಎಲ್ಲ ಕಡೆಗಳಲ್ಲಿ ಪ್ರಚಾರ ಕೈಗೊಳ್ಳಲಾಗಿದೆ. ನ.7ರ ವರೆಗೆ ಬೆಂಗಳೂರು, ಮೈಸೂರು, ಹುಬ್ಬಳ್ಳಿ, ಹಾವೇರಿ ಸೇರಿದಂತೆ ವಿವಿಧ ಜಿಲ್ಲೆಗಳ 23ಕ್ಕೂ ಅಧಿಕ ಉದ್ಯೋಗಾತ ಕಂಪನಿಗಳು ನೋಂದಾಯಿಸಿಕೊಂಡಿದ್ದು, 2,500ಕ್ಕೂ ಅಧಿಕ ಉದ್ಯೋಗಿಗಳ ಅವಶ್ಯಕತೆ ಇದ್ದು, ಕೃಷಿ, ತೋಟಗಾರಿಕೆ, ಬಿ.ಕಾಂ, ಬಿಇಡಿ, ಡಿಇಡಿ, ಬಿ.ಎಸ್ಸಿ, ಬಿ.ಎ, ಬಿಬಿಎ, ಬಿಬಿಎಂ, ಬಿಸಿಎ, ಬಿಇ, ಡಿಪ್ಲೋಮಾ, ಐಟಿಐ, ಎಂ.ಎ, ಎಂ.ಪಿಲ್, ನರ್ಸಿಂಗ್, ಪಿಯುಸಿ, ಎಸ್ಸೆಸ್ಸೆಲ್ಸಿ ಹಾಗೂ ಇತರೆ ವಿದ್ಯಾರ್ಹತೆಯ 950ಕ್ಕೂ ಅಧಿಕ ನಿರುದ್ಯೋಗಿಗಳು ನೋಂದಾಯಿಸಿಕೊಂಡಿದ್ದಾರೆ ಎಂದು ಮಾಹಿತಿ ನೀಡಿದರು. ಉದ್ಯೋಗ ಮೇಳದಲ್ಲಿ ಭಾಗವಹಿಸಲು ಯಾವುದೇ ಶುಲ್ಕ ಇರುವುದಿಲ್ಲ. ಸಂಪೂರ್ಣ ಉಚಿತವಾಗಿರುತ್ತದೆ. ಭಾಗವಹಿಸುವ ನಿರುದ್ಯೋಗಿಗಳು ಸ್ವ ವಿವರ, ವಿದ್ಯಾರ್ಹತೆಯ ಅಂಕಪಟ್ಟಿ ಮತ್ತು ಆಧಾರ್ ಕಾರ್ಡ್ ಝರಾಕ್ಸ್ ಪ್ರತಿ, ಭಾವಚಿತ್ರ ಕನಿಷ್ಠ 10 ಝರಾಕ್ಸ್ ಪ್ರತಿ ತರಬೇಕು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿಗಳ ಕಚೇರಿ ದೂ.08375-249191 ಅಥವಾ ಮೊ.7892349959 ಸಂಪರ್ಕಿಸಬಹುದು ಎಂದು ತಿಳಿಸಿದರು. ಸಭೆಯಲ್ಲಿ ಜಿಲ್ಲಾ ಕೈಗಾರಿಕಾ ಇಲಾಖೆ ಜಂಟಿ ನಿರ್ದೇಶಕ ಅಶೋಕ ಪ್ಯಾಟಿ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರು ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಇದ್ದರು. ವ್ಯಾಪಕ ಪ್ರಚಾರ ಕೈಗೊಳ್ಳಿ..ಈ ಉದ್ಯೋಗ ಮೇಳದ ಕುರಿತು ನಗರ ಹಾಗೂ ಗ್ರಾಮೀಣ ಸ್ಥಳೀಯ ಸಂಸ್ಥೆಗಳ ಕಸವಿಲೇವಾರಿ ವಾಹನಗಳ ಮೂಲಕ, ಪೋಸ್ಟರ್‌, ಬ್ಯಾನರ್ ಹಾಗೂ ಸಾಮಾಜಿಕ ಜಾಲತಾಣ ಸೇರಿದಂತೆ ಎಲ್ಲ ಕಡೆಗಳಲ್ಲಿ ವ್ಯಾಪಕ ಪ್ರಚಾರ ಕೈಗೊಳ್ಳಬೇಕು. ಜಿಲ್ಲಾ ಕೈಗಾರಿಕಾ ಇಲಾಖೆ, ಕೈಮಗ್ಗ ಮತ್ತು ಜವಳಿ ಇಲಾಖೆ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಹಾಗೂ ಐಟಿಐ, ಜಿಟಿಟಿಸಿ, ಪಾಲಿಟೆಕ್ನಿಕ್, ಪದವಿ ಮಹಾವಿದ್ಯಾಲಯಗಳ ಪ್ರಾಚಾರ್ಯರು ಉದ್ಯೋಗ ಮೇಳದ ಯಶಸ್ವಿಗೆ ಸಮನ್ವಯದಿಂದ ಕಾರ್ಯನಿರ್ವವಹಿಸಬೇಕು ಎಂದು ಅಪರ ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು.