ಬೀದರ್‌ನಲ್ಲಿ ಮಾ.9, 10ರಂದು ಜಿಲ್ಲಾ ಸಾಹಿತ್ಯ ಸಮ್ಮೇಳನ

| Published : Mar 05 2024, 01:37 AM IST

ಸಾರಾಂಶ

ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆಯಾಗಿರುವ ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರು ಮತ್ತು ಸ್ವಾಗತ ಸಮಿತಿ ಅಧ್ಯಕ್ಷ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅವರನ್ನು ಸನ್ಮಾನಿಸಿ, ಸಮ್ಮೇಳನಕ್ಕೆ ಆಹ್ವಾನ ನೀಡಲಾಯಿತು.

ಭಾಲ್ಕಿ: ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆಯಾಗಿರುವ ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರು ಮತ್ತು ಸ್ವಾಗತ ಸಮಿತಿ ಅಧ್ಯಕ್ಷ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅವರನ್ನು ಸನ್ಮಾನಿಸಿ, ಸಮ್ಮೇಳನಕ್ಕೆ ಆಹ್ವಾನ ನೀಡಲಾಯಿತು.

ತಾಲೂಕಿನ ಕರಡ್ಯಾಳ ಚನ್ನಬಸವೇಶ್ವರ ಗುರುಕುಲದಲ್ಲಿ ಭಾನುವಾರ ಜಿಲ್ಲಾ ಕಸಾಪ ಅಧ್ಯಕ್ಷ ಸುರೇಶ ಚನಶೆಟ್ಟಿ ನೇತೃತ್ವದಲ್ಲಿ ಪದಾಧಿಕಾರಿಗಳು ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರು, ಪೀಠಾಪತಿ ಗುರುಬಸವ ಪಟ್ಟದ್ದೇವರು, ಸಚಿವ ಈಶ್ವರ ಖಂಡ್ರೆ ಅವರನ್ನು ಸಂಪ್ರದಾಯದಂತೆ ಶಾಲು ಹೊದಿಸಿ ಸನ್ಮಾನಿಸಿ, ಆಹ್ವಾನ ಪತ್ರಿಕೆ ನೀಡಲಾಯಿತು.

ಜಿಲ್ಲಾ ಕಸಾಪ ಸುರೇಶ ಚನಶೆಟ್ಟಿ ಮಾತನಾಡಿ, ಮಾ.9 ಮತ್ತು 10ರಂದು ಎರಡು ದಿವಸ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಜರುಗಲಿದೆ. ಮಠಾಧೀಶರು, ರಾಜಕೀಯ ಗಣ್ಯರು, ಸಾಹಿತಿಗಳು, ಚಿಂತಕರು, ಬುದ್ದಿಜೀವಿಗಳು, ಕಲಾವಿದರು ಭಾಗವಹಿಸಲಿದ್ದು, ಕನ್ನಡಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸಮ್ಮೇಳನ ಯಶಸ್ವಿಗೊಳಿಸುವಂತೆ ಮನವಿ ಮಾಡಿದರು.

ತಾಲೂಕು ಕಸಾಪ ಅಧ್ಯಕ್ಷ ನಾಗಭೂಷಣ ಮಾಮಡಿ, ಮಾಜಿ ಅಧ್ಯಕ್ಷ ಶಶಿಧರ ಕೋಸಂಬೆ, ನಗರ ಅಧ್ಯಕ್ಷ ಸಂತೋಷ ಬಿಜಿ ಪಾಟೀಲ್, ಪ್ರಮುಖರಾದ ಬಸವರಾಜ ಬಲ್ಲೂರ, ಶಿವಶಂಕರ ಟೋಕರೆ, ಶಿವಕುಮಾರ ಕಟ್ಟೆ, ಟಿ.ಎಂ.ಮಚ್ಚೆ, ಗುರುನಾಥ ರಾಜಗೀರಾ, ಗಿರೀಶ ಎಂ.ವಿ, ಐಜಿಕ ಬಂಗಾರೆ, ಚಂದ್ರಕಾಂತ ತಳವಾಡೆ, ಜಯರಾಜ ದಾಬಶೆಟ್ಟೆ, ಸಂತೋಷ ಹಡಪದ, ದೀಪಕ ಠಮಕೆ, ಮಲ್ಲಿಕಾರ್ಜುನ ಪಾಟೀಲ್ ಸೇರಿದಂತೆ ಹಲವರು ಇದ್ದರು.