ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಜಿಲ್ಲಾ ಏಡ್ಸ್ ನಿಯಂತ್ರಣ ಮತ್ತು ತಡೆಗಟ್ಟುವ ಘಟಕದ ವತಿಯಿಂದ ಎಚ್.ಐ.ವಿ/ ಏಡ್ಸ್ ಬಗ್ಗೆ ಅರಿವು ಮೂಡಿಸಿ ಜಾಗೃತರಾಗಿಸುವ ಉದ್ದೇಶದಿಂದ ಜಿಲ್ಲಾಮಟ್ಟದ 5 ಕಿ.ಮೀ. ಮ್ಯಾರಥಾನ್ ಸ್ಪರ್ಧೆಯನ್ನು 17 ರಿಂದ 25 ವರ್ಷ ವಯಸ್ಸಿನೊಳಗಿನ ಕಾಲೇಜು ವಿದ್ಯಾರ್ಥಿಗಳಿಗೆ ನಗರದ ಮಂಗಳ ಸ್ಟೇಡಿಯಂನಲ್ಲಿ ನಡೆಸಲಾಯಿತು.

ಮಂಗಳೂರು ; ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಜಿಲ್ಲಾ ಏಡ್ಸ್ ನಿಯಂತ್ರಣ ಮತ್ತು ತಡೆಗಟ್ಟುವ ಘಟಕದ ವತಿಯಿಂದ ಎಚ್.ಐ.ವಿ/ ಏಡ್ಸ್ ಬಗ್ಗೆ ಅರಿವು ಮೂಡಿಸಿ ಜಾಗೃತರಾಗಿಸುವ ಉದ್ದೇಶದಿಂದ ಜಿಲ್ಲಾಮಟ್ಟದ 5 ಕಿ.ಮೀ. ಮ್ಯಾರಥಾನ್ ಸ್ಪರ್ಧೆಯನ್ನು 17 ರಿಂದ 25 ವರ್ಷ ವಯಸ್ಸಿನೊಳಗಿನ ಕಾಲೇಜು ವಿದ್ಯಾರ್ಥಿಗಳಿಗೆ ನಗರದ ಮಂಗಳ ಸ್ಟೇಡಿಯಂನಲ್ಲಿ ನಡೆಸಲಾಯಿತು.

ಸ್ಪರ್ಧೆಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಎಚ್.ಆರ್.ತಿಮ್ಮಯ್ಯ ಹಸಿರು ನಿಶಾನೆ ಬಾವುಟ ತೋರಿಸುವುದರ ಮೂಲಕ ಸ್ಪರ್ಧೆಗೆ ಚಾಲನೆ ನೀಡಿದರು.ಸುಮಾರು 120 ಸ್ಪರ್ಧಿಗಳು ಭಾಗವಹಿಸಿದ್ದರು. ಪುರುಷರ ವಿಭಾಗದಲ್ಲಿ ಎಸ್‌ಡಿಎಂ ಕಾಲೇಜಿನ ರಂಗಣ್ಣ ನಾಯ್ಕ ಪ್ರಥಮ ಸ್ಥಾನ, ಮಹಿಳಾ ವಿಭಾಗದಲ್ಲಿ ಶ್ರೀದೇವಿ ಕಾಲೇಜಿನ ಶ್ರೇಯ ಎಂ. ಪ್ರಥಮ ಸ್ಥಾನ ಪಡೆದುಕೊಂಡರು.

ಸ್ಪರ್ಧಾ ವಿಜೇತರಿಗೆ ಜಿಲ್ಲಾ ಏಡ್ಸ್ ನಿಯಂತ್ರಣ ಘಟಕದ ಕಾರ್ಯಕ್ರಮ ಅಧಿಕಾರಿ ಡಾ.ಖತೀಜ ದಿಲ್‍ಶಾದ್ ಎಂ.ಪಿ. ಪ್ರಶಸ್ತಿ ಪ್ರಧಾನ ಮಾಡಿದರು.

ತಾಲೂಕು ಆರೋಗ್ಯ ಅಧಿಕಾರಿ ಡಾ.ಸುಜಯ್ ಕುಮಾರ್ ಮತ್ತಿತರರು ಇದ್ದರು.