ವಿದ್ಯಾರ್ಥಿಗಳಲ್ಲಿ ಪರಿಸರ, ವನ್ಯಜೀವಿ ಮತ್ತು ವನ್ಯ ಸಂಪತ್ತಿನ ಬಗ್ಗೆ ಅರಿವು ಮೂಡಿಸುವ ಸದುದ್ದೇಶದಿಂದ ಕನ್ನಡಪ್ರಭದಿಂದ ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲಾ ಮಕ್ಕಳಿಗಾಗಿ ಜ.18ರಂದು ಭಾನುವಾರ ನಗರದ ಶ್ರೀ ಜಯದೇವ ವೃತ್ತದ ಬಳಿಯ ಶ್ರೀ ಶಿವಯೋಗಿ ಮಂದಿರದ ಹಿಂಭಾಗದ ನೂತನ ಸಭಾಂಗಣದಲ್ಲಿ ಜಿಲ್ಲಾಮಟ್ಟದ ಚಿತ್ರಕಲಾ ಸ್ಪರ್ಧೆ ಹಮ್ಮಿಕೊಳ್ಳಲಾಗಿದೆ.

- ಜಯದೇವ ವೃತ್ತ ಬಳಿ ಶಿವಯೋಗಿ ಮಂದಿರ ಹಿಂಭಾಗದ ಸಭಾಂಗಣದಲ್ಲಿ ಕಾರ್ಯಕ್ರಮ

- - -

- ಹೈಯರ್ ಪ್ರೈಮರಿ ಮಕ್ಕಳಿಗೆ ಜಿಲ್ಲಾಮಟ್ಟಕ್ಕೆ ಸೀಮಿತ ಸ್ಪರ್ಧೆ

- ಹೈಸ್ಕೂಲ್ ಮಕ್ಕಳು ಜಿಲ್ಲಾಮಟ್ಟದಲ್ಲಿ ಗೆದ್ದರೆ ರಾಜ್ಯಮಟ್ಟಕ್ಕೆ

- - -

ಕನ್ನಡಪ್ರಭ ವಾರ್ತೆ ದಾವಣಗೆರೆ

ವಿದ್ಯಾರ್ಥಿಗಳಲ್ಲಿ ಪರಿಸರ, ವನ್ಯಜೀವಿ ಮತ್ತು ವನ್ಯ ಸಂಪತ್ತಿನ ಬಗ್ಗೆ ಅರಿವು ಮೂಡಿಸುವ ಸದುದ್ದೇಶದಿಂದ ಕನ್ನಡಪ್ರಭದಿಂದ ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲಾ ಮಕ್ಕಳಿಗಾಗಿ ಜ.18ರಂದು ಭಾನುವಾರ ನಗರದ ಶ್ರೀ ಜಯದೇವ ವೃತ್ತದ ಬಳಿಯ ಶ್ರೀ ಶಿವಯೋಗಿ ಮಂದಿರದ ಹಿಂಭಾಗದ ನೂತನ ಸಭಾಂಗಣದಲ್ಲಿ ಜಿಲ್ಲಾಮಟ್ಟದ ಚಿತ್ರಕಲಾ ಸ್ಪರ್ಧೆ ಹಮ್ಮಿಕೊಳ್ಳಲಾಗಿದೆ.

ಅಂದು ಬೆಳಗ್ಗೆ 9.30 ಗಂಟೆಗೆ ದಾವಣಗೆರೆ ನಗರ ಮತ್ತು ತಾಲೂಕು ಹಾಗೂ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಪ್ರಥಮ 3 ಸ್ಥಾನ ಪಡೆದ ಸ್ಪರ್ಧಿಗಳು, ಜಿಲ್ಲಾಮಟ್ಟದ ಸ್ಪರ್ಧೆಯಲ್ಲಿ ಹೈಸ್ಕೂಲ್ ಮಕ್ಕಳು ಪಾಲ್ಗೊಳ್ಳುತ್ತಾರೆ. ಜಿಲ್ಲಾಮಟ್ಟಕ್ಕೆ ಸೀಮಿತವಾಗಿ ಪಾಲಕರು, ಮಕ್ಕಳ ಒತ್ತಾಸೆ ಮೇರೆಗೆ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗಾಗಿಯೂ ಪ್ರತ್ಯೇಕ ಸ್ಪರ್ಧೆಯನ್ನು ಕನ್ನಡಪ್ರಭ ಆಯೋಜಿಸಿದೆ.

ವನ್ಯಜೀವಿ ಮತ್ತು ವನ್ಯ ಸಂಪತ್ತು ವಿಷಯದ ಕುರಿತು ಚಿತ್ರಕಲಾ ಸ್ಪರ್ಧೆ ಭಾನುವಾರ ಬೆಳಗ್ಗೆ 9.30ರಿಂದ 11.30 ಗಂಟೆವರೆಗೆ ನಡೆಯಲಿದೆ. ಮಧ್ಯಾಹ್ನ 12.30ಕ್ಕೆ ವಿರಕ್ತ ಮಠದ ಶ್ರೀ ಬಸವಪ್ರಭು ಸ್ವಾಮೀಜಿ ಸಾನ್ನಿಧ್ಯದಲ್ಲಿ ಜನಪ್ರತಿನಿಧಿಗಳು, ವಿವಿಧ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿ ಪದಾಧಿಕಾರಿಗಳು, ಗಣ್ಯರು ಬಹುಮಾನ ವಿತರಣೆ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ.

ಪ್ರೌಢಶಾಲಾ ವಿಭಾಗದಲ್ಲಿ ಪ್ರಥಮ 3 ಸ್ಥಾನ ಪಡೆಯುವ ಮಕ್ಕಳಿಗೆ ಆಕರ್ಷಕ ಬಹುಮಾನ, ಸಮಾಧಾನಕರ ಬಹುಮಾನ ನೀಡಲಾಗುವುದು. ಹೈಸ್ಕೂಲ್ ವಿಭಾಗದಲ್ಲಿ ಪ್ರಥಮ 3 ಸ್ಥಾನ ಪಡೆಯುವ ಸ್ಪರ್ಧಿಗಳು ರಾಜ್ಯಮಟ್ಟಕ್ಕೆ ಅರ್ಹತೆ ಪಡೆಯಲಿದ್ದಾರೆ. ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗೆ ಜಿಲ್ಲಾ ಮಟ್ಟಕ್ಕೆ ಸೀಮಿತವಾಗಿ ಸ್ಪರ್ಧೆ ನಡೆಯಲಿದೆ.

ಸೇವ್ ವೈಲ್ಡ್ ಲೈಫ್ ಅಭಿಯಾನದಡಿ ರಾಜ್ಯಮಟ್ಟದಲ್ಲಿ ಕರ್ನಾಟಕ ಅರಣ್ಯ ಇಲಾಖೆ ಸಹಕಾರದಲ್ಲಿ ಕರ್ನಾಟಕ ಚಿತ್ರಕಲಾ ಪರಿಷತ್ ಸಹಯೋಗದಲ್ಲಿ ಹಾಗೂ ದಾವಣಗೆರೆ ಜಿಲ್ಲಾಮಟ್ಟದ ಸ್ಪರ್ಧೆಯು ಖಾಸಗಿ ಶಾಲಾ-ಕಾಲೇಜು ಆಡಳಿತ ಮಂಡಳಿಗಳು, ಸರ್ಕಾರಿ ಶಾಲೆಗಳು, ಸಾಶಿಇ, ಗಣ್ಯರ ಸಹಕಾರದಲ್ಲಿ ನಡೆಯಲಿದೆ. ಸ್ಪರ್ಧೆಯ ವಿಷಯವು ವನ್ಯ ಸಂಪತ್ತು, ವನ್ಯಜೀವಿಗಳ ಬಗ್ಗೆ ಅರಿವು, ಜಾಗೃತಿ‌ ಮೂಡಿಸುವುದಾಗಿದೆ. ‍ ಆಸಕ್ತರು ಹೆಚ್ಚಿನ ಮಾಹಿತಿಗೆ ಕನ್ನಡಪ್ರಭ ಹಿರಿಯ ಪ್ರಧಾನ ವರದಿಗಾರ ನಾಗರಾಜ ಎಸ್. ಬಡದಾಳ್ (ಮೊ-98440-24995), ಹಿರಿಯ ಜಾಹೀರಾತು ಪ್ರತಿನಿಧಿ ಟಿ.ಆರ್. ಸುಧೀಂದ್ರ (98449-13226), ಪ್ರಸಾರಾಂಗ ವಿಭಾಗದ ಶಿವರಾಜ (63661-59404) ಅವರನ್ನು ಸಂಪರ್ಕಿಸುವಂತೆ ಕನ್ನಡಪ್ರಭ ಕೋರಿದೆ.

- - -

-13ಕೆಡಿವಿಜಿ11.ಜೆಪಿಜಿ: ದಾವಣಗೆರೆ ಜಿಲ್ಲಾಮಟ್ಟದ ಚಿತ್ರಕಲಾ ಸ್ಪರ್ಧೆಯ ಬ್ಯಾನರ್.