ಸಾರಾಂಶ
ಹಳೆಯಂಗಡಿ ಪ್ರಿಯದರ್ಶಿನಿ ಕೋ-ಆಪರೇಟಿವ್ ಸೊಸೈಟಿಯ ಸಹಕಾರಿ ಸಪ್ತಾಹದ ಅಂಗವಾಗಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾಮಟ್ಟದ ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಗಳಿಗೆ ದ.ಕ. ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅವರ ಭಾವಚಿತ್ರ ಬಿಡಿಸುವ ಚಿತ್ರಕಲಾ ಸ್ಪರ್ಧೆ ಆಯೋಜಿಸಿತ್ತು.
ಕನ್ನಡಪ್ರಭ ವಾರ್ತೆ ಮೂಲ್ಕಿ
ಕಳೆದ 30 ವರ್ಷಗಳಿಂದ ಸಹಕಾರಿ ಕ್ರಾಂತಿಯನ್ನು ಮಾಡಿ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರಾಷ್ಟ್ರೀಕೃತ ಬ್ಯಾಂಕ್‌ಗಳಿಗೆ ಸರಿಸಾಟಿ ಹೊಂದುವ ರೀತಿಯಲ್ಲಿ ಸಹಕಾರಿ ಕ್ಷೇತ್ರವನ್ನು ಬೆಳೆಸಿ ಅದಕ್ಕೆ ಭದ್ರ ಬುನಾದಿ ಹಾಕಿಕೊಟ್ಟ ಮೇರು ವ್ಯಕ್ತಿತ್ವದ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಅವರ ಸಹಕಾರಿ ಕ್ರಾಂತಿಯನ್ನು ಮುಂದಿನ ಜನಾಂಗಕ್ಕೆ ಮುಟ್ಟಿಸುವ ಚಿಂತನೆಯನ್ನು ಹಮ್ಮಿಕೊಂಡಿದ್ದೇವೆ ಎಂದು ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿ ಅಧ್ಯಕ್ಷ ಎಚ್.ವಸಂತ್ ಬೆರ್ನಾಡ್ ಹೇಳಿದರು.ಹಳೆಯಂಗಡಿ ಪ್ರಿಯದರ್ಶಿನಿ ಕೋ-ಆಪರೇಟಿವ್ ಸೊಸೈಟಿಯ ಸಹಕಾರಿ ಸಪ್ತಾಹದ ಅಂಗವಾಗಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾಮಟ್ಟದ ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಗಳಿಗೆ ಆಯೋಜಿಸಲಾದ ದ.ಕ. ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅವರ ಭಾವಚಿತ್ರ ಬಿಡಿಸುವ ಚಿತ್ರಕಲಾ ಸ್ಪರ್ಧೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಕಾರ್ಯಕ್ರಮವನ್ನು ಚಲನಚಿತ್ರ ನಟಿ ಚಿರಶ್ರೀ ಅಂಚನ್ ಹಳೆಯಂಗಡಿ ಉದ್ಘಾಟಿಸಿದರು. ಕೆಮ್ರಾಲ್ ಪಂಜದಗುತ್ತು ಶಾಂತಾರಾಮ ಶೆಟ್ಟಿ ಸರ್ಕಾರಿ ಪ್ರೌಢಶಾಲೆಯ ಸಹ ಶಿಕ್ಷಕಿ ಮಂಜುಳಾ ಶೆಟ್ಟಿ, ಪೂಜಾ ಟ್ಯೂಷನ್ ಕ್ಲಾಸಸ್ ಹಳೆಯಂಗಡಿಯ ಮಾಲಕ ಗೋಪಾಲಕೃಷ್ಣ ಬಿ. ಕೋಟ್ಯಾನ್ ಮುಖ್ಯಅತಿಥಿಗಳಾಗಿ ಭಾಗವಹಿಸಿ ಶುಭ ಹಾರೈಸಿದರು.ಸ್ವಸಹಾಯ ಗುಂಪಿನ ಪ್ರೇರಕಿ ನಿರಂಜಲ ಪ್ರಾರ್ಥಿಸಿದರು. ಸೊಸೈಟಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುದರ್ಶನ್ ಸ್ವಾಗತಿಸಿದರು. ಸಾಲ ವಿಭಾಗದ ಪ್ರಬಂಧಕಿ ಅಕ್ಷತಾ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಲೆಕ್ಕಿಗರಾದ ಲೋಲಾಕ್ಷಿ ವಂದಿಸಿದರು.
;Resize=(128,128))
;Resize=(128,128))
;Resize=(128,128))