ಸಾರಾಂಶ
ಇಲ್ಲಿನ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿಯರು ಪಿಯು ಕಾಲೇಜು ಮಟ್ಟದ ತಾಲೂಕು ಕ್ರೀಡಾಕೂಟ ಸ್ಪರ್ಧೆಗಳಲ್ಲಿ ಬಾಲ್‌ಬ್ಯಾಡ್ಮಿಂಟನ್ ಮತ್ತು ಷಟಲ್ ಬ್ಯಾಡ್ಮಿಂಟನ್‌ನಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಬಸವಾಪಟ್ಟಣ: ಇಲ್ಲಿನ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿಯರು ಪಿಯು ಕಾಲೇಜು ಮಟ್ಟದ ತಾಲೂಕು ಕ್ರೀಡಾಕೂಟ ಸ್ಪರ್ಧೆಗಳಲ್ಲಿ ಬಾಲ್‌ಬ್ಯಾಡ್ಮಿಂಟನ್ ಮತ್ತು ಷಟಲ್ ಬ್ಯಾಡ್ಮಿಂಟನ್‌ನಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಬಾಲ್‌ಬ್ಯಾಡ್ಮಿಂಟನ್ ತಂಡದ ನಾಯಕಿಯಾಗಿ ನಿರ್ಮಲಾ, ಲಕ್ಷ್ಮೀ, ಸಿಂಚನ, ಚೈತ್ರ, ಅಂಜಲಿ, ಷಟಲ್ ಬ್ಯಾಡ್ಮಿಂಟನ್‌ನಲ್ಲಿ ದೀಪಿಕ, ಲಕ್ಷ್ಮೀ, ತಾಲೂಕು ಮಟ್ಟದ ಸ್ಪರ್ಧೆಗಳಲ್ಲಿ ಪ್ರಥಮ ಸ್ಥಾನ ಪಡೆದು ಕಾಲೇಜಿಗೆ ಕೀರ್ತಿ ತಂದಿದ್ದಾರೆ. ಮಾರ್ಗದರ್ಶಕ ದೀಪು, ಉಪನ್ಯಾಸಕರಾದ ಹರೀಶ, ಮಂಜು, ಮಹೇಂದ್ರಕುಮಾರ್, ನಿರ್ವಾಣೆಗೌಡ ವಿದ್ಯಾರ್ಥಿನಿಯರಿಗೆ ಅಭಿನಂದನೆ ತಿಳಿಸಿದ್ದಾರೆ.