ಜನರ ಬದುಕಿಗೆ ಬೇಕಾದ ಅನೇಕ ಗುಟ್ಟುಗಳು ವಚನಕಾರರು ರಚಿಸಿದ ವಚನಗಳಲ್ಲಿ ಅಡಗಿವೆ. ಅಂತಹ ವಚನಗಳ ಮಹತ್ವ ಅರಿಯಲು ಜಿಲ್ಲಾಮಟ್ಟದ ವಚನ ಸಾಹಿತ್ಯ ಸಮ್ಮೇಳನವನ್ನು ಭೈರನಹಟ್ಟಿ ಗ್ರಾಮದಲ್ಲಿ ಅಕ್ಟೋಬರ್ ಕೊನೆ ವಾರದಲ್ಲಿ ಆಯೋಜಿಸಲಾಗಿದೆ.
ಕನ್ನಡಪ್ರಭ ವಾರ್ತೆ ನರಗುಂದ
ಜನರ ಬದುಕಿಗೆ ಬೇಕಾದ ಅನೇಕ ಗುಟ್ಟುಗಳು ವಚನಕಾರರು ರಚಿಸಿದ ವಚನಗಳಲ್ಲಿ ಅಡಗಿವೆ. ಅಂತಹ ವಚನಗಳ ಮಹತ್ವ ಅರಿಯಲು ಜಿಲ್ಲಾಮಟ್ಟದ ವಚನ ಸಾಹಿತ್ಯ ಸಮ್ಮೇಳನವನ್ನು ಭೈರನಹಟ್ಟಿ ಗ್ರಾಮದಲ್ಲಿ ಅಕ್ಟೋಬರ್ ಕೊನೆ ವಾರದಲ್ಲಿ ಆಯೋಜಿಸಲಾಗಿದೆ ಎಂದು ಭೈರನಹಟ್ಟಿ-ಶಿರೋಳ ತೋಂಟದಾರ್ಯ ಮಠದ ಶಾಂತಲಿಂಗ ಶ್ರೀಗಳು ಹೇಳಿದರು.ಶನಿವಾರ ಸಂಜೆ ತಾಲೂಕಿನ ಭೈರನಹಟ್ಟಿ ಗ್ರಾಮದ ಶ್ರೀ ದೊರೆಸ್ವಾಮಿ ವಿರಕ್ತಮಠದಲ್ಲಿ ಕನ್ನಡ ಸಾಹಿತ್ಯ ಮತ್ತು ಸಾಂಸ್ಕೃತಿಕ ವೇದಿಕೆ, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಶರಣ ಸಾಹಿತ್ಯ ಪರಿಷತ್ತು ತಾಲೂಕ ಘಟಕದ ಆಶ್ರಯದಲ್ಲಿ ಜರುಗಿದ ಪ್ರಥಮ ಬಾರಿಗೆ ಜಿಲ್ಲಾಮಟ್ಟದ ವಚನ ಸಾಹಿತ್ಯ ಸಮ್ಮೇಳನದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.
ಗದಗ ತೋಂಟದಾರ್ಯ ಮಠದ ಪೀಠಾಧಿಪತಿಗಳ ಸಾನಿಧ್ಯದಲ್ಲಿ ಸಮ್ಮೇಳನ ನಡೆಸಲಾಗುವುದು. 12ನೇ ಶತಮಾನದಲ್ಲಿ ಶರಣರ, ಶಿವಶರಣೆಯರ ವಚನಗಳನ್ನು ಫ.ಗು. ಹಳಕಟ್ಟಿ ಬರೆದಿಟ್ಟಿದ್ದಾರೆ. ಇದಕ್ಕೆಲ್ಲ ಹಾನಗಲ್ಲ ಕುಮಾರ ಮಹಾಸ್ವಾಮಿಗಳು ಮಾರ್ಗದರ್ಶಕರಾಗಿದ್ದಾರೆ ಎಂದರು.ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ವಿವೇಕಾನಂದಗೌಡ ಪಾಟೀಲ ಮಾತನಾಡಿ, ವಚನ ಸಾಹಿತ್ಯ ಪರಿಷತ್‌ನಲ್ಲಿ ಆರ್ಥಿಕ ಶಕ್ತಿ ಇಲ್ಲ, ಸಾರ್ವಜನಿಕರಿಂದ ಹಣ ಸಂಗ್ರಹಿಸಿ ಸಮ್ಮೇಳನ ಮಾಡಬೇಕಾಗಿದೆ. ಪುಸ್ತಕ ಪ್ರದರ್ಶನ, ವಚನ ನೃತ್ಯ, ಮಕ್ಕಳ ವಚನ ಸ್ಪರ್ಧೆ, ಧ್ವಜಾರೋಹಣ, ತಾಯಿ ಭುವನೇಶ್ವರಿ ಮೆರವಣಿಗೆ, ಗೋಷ್ಠಿಗಳು, ಮಕ್ಕಳ ಸಾಂಸ್ಕೃತಿಕ ಚಟುವಟಿಕೆ, ಸಮ್ಮೇಳನದಲ್ಲಿ ಎಂತಹ ಪ್ರೇಕ್ಷಕರನ್ನು ಕರೆತರಬೇಕು. ಊಟ-ಉಪಾಹಾರದ ಬಗ್ಗೆ ಮತ್ತು ಸಮ್ಮೇಳನದ ಸ್ವರೂಪ ಹೇಗಿರಬೇಕೆಂದು ಚರ್ಚಿಸಬೇಕಾಗಿದೆ ಎಂದರು.
ಸಭೆಯಲ್ಲಿ ಶರಣ ಸಾಹಿತ್ಯ ಪರಿಷತ್ತು ತಾಲೂಕಾಧ್ಯಕ್ಷ ಎಸ್.ಜಿ. ಮಣ್ಣೂರಮಠ, ಸಿ.ಜಿ. ಕಂಠಿ, ಕದಳಿ ಮಹಿಳಾ ಘಟಕದ ಅಧ್ಯಕ್ಷೆ ಸುಕನ್ಯಾ ಸಾಲಿ, ನಿವೃತ್ತ ಶಿಕ್ಷಕ ಎಸ್.ಬಿ. ದಂಡಿನ, ಪ್ರಕಾಶಗೌಡ ತಿರಕನಗೌಡ್ರ, ಭಾಕಿಸಂ ಜಿಲ್ಲಾಧ್ಯಕ್ಷ ಎಸ್.ಎಸ್. ಪಾಟೀಲ, ಬಿ.ಬಿ. ಐನಾಪೂರ, ಚಂದ್ರು ದಂಡಿನ, ಕಸಾಪ ಅಧ್ಯಕ್ಷ ಪ್ರೊ. ಬಿ.ಸಿ. ಹನುಮಂತಗೌಡ್ರ ಸೇರಿ ಅನೇಕರು ತಮ್ಮ ಅಭಿಪ್ರಾಯ ಸಭೆಯಲ್ಲಿ ವ್ಯಕ್ತಪಡಿಸಿದರು.ಪೂರ್ವಭಾವಿ ಸಭೆಯಲ್ಲಿ ಪ್ರೊ. ಪಿ.ಎಸ್. ಅಣ್ಣಿಗೇರಿ, ಎಸ್.ಎಸ್. ಪಾಟೀಲ, ರೈತ ಸಂಘ ಹಾಗೂ ಹಸಿರು ಸೇನೆ ತಾಲೂಕಾ ಅಧ್ಯಕ್ಷ ಉಮೇಶ ಮರ್ಚಪ್ಪನವರ, ಮಂಜು ಮೆಣಸಗಿ, ಪ್ರಾಥಮಿಕ ಸಹಕಾರಿ ಸಂಘದ ಅಧ್ಯಕ್ಷ ರಂಗಪ್ಪ ತೆಗ್ಗಿನಮನಿ, ಮಾಲಾ ಪಾಟೀಲ, ಶಂಕರಗೌಡ ಪಾಟೀಲ, ಬಸವರಾಜ ಸಾಲಿಮಠ, ನಿವೃತ್ತ ಬಿಇಒ ಮಂಗಲಾ ಪಾಟೀಲ, ಸುರೇಶ ಐನಾಪೂರ, ಗುರುಶಾಂತ ನರಸಾಪೂರ ಇದ್ದರು.
ಶಿಕ್ಷಕ ಮಹಾಂತೇಶ ಹಿರೇಮಠ ಸ್ವಾಗತಿಸಿದರು, ರಮೇಶ ಐನಾಪೂರ ಕಾರ್ಯಕ್ರಮ ನಿರೂಪಿಸಿದರು.