ಸಾರಾಂಶ
ಜಿಲ್ಲಾ ಮಾಹಿತಿ ತಂತ್ರಜ್ಞಾನಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಮಂಜುನಾಥ ಅವರು ಅನಾರೋಗ್ಯದಿಂದ ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ನಿಧನರಾದರು. ಅವರು ಪತ್ನಿ, ಇಬ್ಬರು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ.
ಕನ್ನಡಪ್ರಭ ವಾರ್ತೆ, ಮಣಿಪಾಲ
ಉಡುಪಿ ಜಿಲ್ಲಾಧಿಕಾರಿ ಅವರ ಕಚೇರಿಯಲ್ಲಿ ಜಿಲ್ಲಾ ಮಾಹಿತಿ ತಂತ್ರಜ್ಞಾನಾಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿದ್ದ ಮಂಜುನಾಥ ಆನಂದ (53) ಅವರು ಅಲ್ಪಕಾಲದ ಅನಾರೋಗ್ಯದಿಂದ ಮಂಗಳವಾರ ರಾತ್ರಿ ಮಣಿಪಾಲದ ಕೆ.ಎಂ.ಸಿ. ಆಸ್ಪತ್ರೆಯಲ್ಲಿ ನಿಧನರಾದರು. ಅವರು ಪತ್ನಿ ಮತ್ತು ಇಬ್ಬರು ಹೆಣ್ಣುಮಕ್ಕಳನ್ನು ಅಗಲಿದ್ದಾರೆ.ಅವರು ಇ ತಂತ್ರಾಂಶ ನಿರ್ವಹಣೆ, ಚುನಾವಣಾ ಎಪ್ಲಿಕೇಶನ್ ನಿರ್ವಹಣೆ, ಜಿಲ್ಲಾ ಸರ್ಕಾರಿ ವೆಬ್ಸೈಟ್ ನಿರ್ವಹಣೆ ಇತ್ಯಾದಿಗಳನ್ನು ನಡೆಸುತ್ತಿದ್ದರು. 2007ರಲ್ಲಿ ಉಡುಪಿ ಡಿಸಿ ಕಚೇರಿಯನ್ನು ಪ್ರಥಮವಾಗಿ ಪೇಪರ್ ಲೆಸ್ ಆಫೀಸನ್ನಾಗಿ ಮಾಡಿರುವುದರ ಜೊತೆಗೆ ಎನ್ಐಸಿ ಮುಖ್ಯಸ್ಥರಾಗಿ, ಹೀಗೆ ಒಟ್ಟು 31 ವರ್ಷಗಳಿಂದ ಸೇವೆ ಸಲ್ಲಿಸಿದ್ದಾರೆ.
--------------------ನಾಳೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ
ಉಡುಪಿ: 33/11ಕೆ.ವಿ ಮಾರ್ಗದಲ್ಲಿ ಮಾನ್ಸೂನ್ ಪೂರ್ವ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ 33ಕೆ.ವಿ ಕುಂದಾಪುರ-ತಲ್ಲೂರು-ಗಂಗೊಳ್ಳಿ ಮುಖ್ಯ ಮಾರ್ಗ ಹಾಗೂ 33/11ಕೆ.ವಿ ತಲ್ಲೂರು ಹಾಗೂ ಗಂಗೊಳ್ಳಿ ಉಪಕೇಂದ್ರದಿಂದ ಹೊರಡುವ 11ಕೆ.ವಿ ವಂಡ್ಸೆ, ನೇರಳಕಟ್ಟೆ, ಬಾಂಡ್ಯ, ಕೆಂಚನೂರು, ಗುಲ್ವಾಡಿ, ದೇವಲ್ಕುಂದ, ಹೆಮ್ಮಾಡಿ, ಸಬ್ಲಾಡಿ, ಮುಳ್ಳಿಕಟ್ಟೆ, ತ್ರಾಸಿ, ಗಂಗೊಳ್ಳಿ ಫೀಡರುಗಳ ವಂಡ್ಸೆ, ಚಿತ್ತೂರು, ಬೆಳ್ಳಾಲ, ಜಡ್ಕಲ್, ಆನಗಳ್ಳಿ, ಉಪ್ಪಿನಕುದ್ರು, ತಲ್ಲೂರು, ಇಡೂರು-ಕುಂಜ್ಞಾಡಿ, ಮುದೂರು, ಹೊಸೂರು, ಕರ್ಕುಂಜೆ, ಕಾವ್ರಾಡಿ, ಅಂಪಾರು, ಬೆಳ್ಲಾಲ, ಕೆರಾಡಿ, ಆಜ್ರಿ, ಕೊಡ್ಲಾಡಿ, ಹೇರಿಕುದ್ರು, ಗುಲ್ವಾಡಿ, ಬಾಂಡ್ಯ, ಉಪ್ಪಿನಕುದ್ರು, ಹಟ್ಟಿಯಂಗಡಿ, ಕನ್ಯಾನ, ಕೆಂಚನೂರು, ನೇರಳಕಟ್ಟೆ ಹೆಮ್ಮಾಡಿ, ಕಟ್‌ಬೆಲ್ತೂರು, ದೇವಲ್ಕುಂದ, ಗಂಗೊಳ್ಳಿ, ಮುಳ್ಳಿಕಟ್ಟೆ, ಹೊಸಾಡು, ಗುಜ್ಜಾಡಿ ಮತ್ತು ತ್ರಾಸಿ ಗ್ರಾಮಗಳ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮೇ 17ರಂದು ಬೆಳಗ್ಗೆ 9 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಮಾಡಲಾಗುತ್ತದೆ.