ಸಾರಾಂಶ
ಗ್ರಾಪಂ ಸದಸ್ಯರ ನ್ಯಾಯಯುತ ಬೇಡಿಕೆಗಳ ಈಡೇರಿಕೆ ಸಂಬಂಧ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಜಿಪಂ ವ್ಯಾಪ್ತಿಯ 22 ಇಲಾಖೆಗಳ ಅಧಿಕಾರಿಗಳ ಸಭೆ ಕರೆದು ಸಮಸ್ಯೆ ಬಗೆಹರಿಸುವುದಾಗಿ ಜಿಪಂ ಸಿಇಓ ಶೇಖ್ ತನ್ವೀರ್ ಆಸಿಫ್ ಭರವಸೆ ನೀಡಿದರು.
ಕನ್ನಡಪ್ರಭ ವಾರ್ತೆ ಮದ್ದೂರು ಗ್ರಾಪಂ ಸದಸ್ಯರ ನ್ಯಾಯಯುತ ಬೇಡಿಕೆಗಳ ಈಡೇರಿಕೆ ಸಂಬಂಧ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಜಿಪಂ ವ್ಯಾಪ್ತಿಯ 22 ಇಲಾಖೆಗಳ ಅಧಿಕಾರಿಗಳ ಸಭೆ ಕರೆದು ಸಮಸ್ಯೆ ಬಗೆಹರಿಸುವುದಾಗಿ ಜಿಪಂ ಸಿಇಓ ಶೇಖ್ ತನ್ವೀರ್ ಆಸಿಫ್ ಭರವಸೆ ನೀಡಿದರು.
ತಾಪಂ ಕಚೇರಿ ಆವರಣದಲ್ಲಿ ವಿವಿಧ ಸಂಘಟನೆಗಳೊಂದಿಗೆ ತಾಲೂಕು ಗ್ರಾಪಂ ಸದಸ್ಯರ ಒಕ್ಕೂಟ ನಡೆಸುತ್ತಿರುವ ಧರಣಿ ಸ್ಥಳಕ್ಕೆ ಆಗಮಿಸಿದ ಜಿಪಂ ಸಿಇಒ ಶೇಖ್ ತನ್ವೀರ್ ಆಸಿಫ್ ಅಹವಾಲು ಆಲಿಸಿದರು. ಮುಂದಿನ ದಿನಗಳಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ನೇತೃತ್ವದಲ್ಲಿ ಸಭೆ ಕರೆದು ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವುದಾಗಿ ಭರವಸೆ ನೀಡಿದರು.ಇದಕ್ಕೆ ಒಪ್ಪದ ಧರಣಿನಿರತರು ಸಮಸ್ಯೆ ಬಗೆಹರಿಸುವ ಸಂಬಂಧ ಶುಕ್ರವಾರ ಸಂಜೆ 5ಗಂಟೆಯವರೆಗೆ ಗಡುವು ನೀಡಲಾಗಿದೆ. ಆನಂತರ ಒಕ್ಕೂಟದ ಸದಸ್ಯರೊಂದಿಗೆ ಮಾತುಕತೆ ನಡೆಸುವುದರೊಂದಿಗೆ ಚಳವಳಿ ತೀವ್ರಗೊಳಿಸುವುದಾಗಿ ಎಚ್ಚರಿಕೆ ನೀಡಿದರು.
ಈ ವೇಳೆ ತಾಪಂ ಇಒ ಸಂಜೀವರಾಯಪ್ಪ, ಡಿವೈಎಸ್ಪಿ ಕೃಷ್ಣಪ್ಪ, ಸಿಪಿಐ ಕೆ.ಆರ್. ಪ್ರಸಾದ್, ಪಿಎಸ್‌ಐ ಮಂಜುನಾಥ್, ತಾ.ಪಂ. ಸಹಾಯಕ ನಿರ್ದೇಶಕ ಮಂಜುನಾಥ್ ಗ್ರಾಮ ಪಂಚಾಯಿತಿ ಸದಸ್ಯರ ಒಕ್ಕೂಟದ ಅಧ್ಯಕ್ಷ ಜಿ.ಎನ್. ಸತ್ಯಾ, ಗೌರವಾಧ್ಯಕ್ಷ ದಯಾನಂದ, ಪ್ರಧಾನ ಕಾರ್‍ಯದರ್ಶಿ ಎಂ.ಇ. ಕೃಷ್ಣ, ಉಪಾಧ್ಯಕ್ಷರಾದ ನಳೀನಾ, ಆಬಲವಾಡಿ ಸುರೇಶ ಸೇರಿದಂತೆ ವಿವಿಧ ಗ್ರಾಪಂ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.