ಸಾರಾಂಶ
ಸಮಾಜದ ಸ್ವಚ್ಛತೆ ಕಾಪಾಡಿ ಸ್ವಾಸ್ಥ್ಯ ಸಮಾಜದ ನಿರ್ಮಾಪಕರು ತಾವುಗಳು ತಮ್ಮ ಆರೋಗ್ಯ ಉತ್ತಮ ಸ್ಥಿತಿಯಲ್ಲಿ ಕಾಪಾಡಿಕೊಳ್ಳುಲು ತಾವು ಆದ್ಯತೆ ನೀಡಬೇಕು
ಕನ್ನಡಪ್ರಭ ವಾರ್ತೆ ಕಡಕೊಳಕಡಕೊಳ ಪಪಂ ವತಿಯಿಂದ ಪೌರಕಾರ್ಮಿಕರ ದಿನವನ್ನು ಆಚರಿಸಲಾಯಿತು.ನಗರಾಭಿವೃದ್ಧಿ ಇಲಾಖೆಯ ಜಿಲ್ಲಾ ಯೋಜನಾ ನಿರ್ದೇಶಕಿ ಬಿ. ಶುಭಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಪೌರಕಾರ್ಮಿಕ ಬಂಧುಗಳು ತಮ್ಮ ದೈನಂದಿನ ಕರ್ತವ್ಯದಲ್ಲಿ ತಂತ್ರಜ್ಞಾನದ ಜೊತೆಗೆ ವೈಚಾರಿಕತೆಯನ್ನು ಅಳವಡಿಸಿಕೊಂಡು ಕೆಲಸ ಮಾಡಿದಾಗ ಜೊತೆಗೆ ನಿಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಬಹುದೆಂದು ತಿಳಿಸಿದರು.ಸಮಾಜದ ಸ್ವಚ್ಛತೆ ಕಾಪಾಡಿ ಸ್ವಾಸ್ಥ್ಯ ಸಮಾಜದ ನಿರ್ಮಾಪಕರು ತಾವುಗಳು ತಮ್ಮ ಆರೋಗ್ಯ ಉತ್ತಮ ಸ್ಥಿತಿಯಲ್ಲಿ ಕಾಪಾಡಿಕೊಳ್ಳುಲು ತಾವು ಆದ್ಯತೆ ನೀಡಬೇಕು ಜೊತೆಗೆ ತಮ್ಮ ಮಕ್ಕಳ ಉನ್ನತ ವ್ಯಾಸಂಗಕ್ಕೆ ಅವಕಾಶ ಕಲ್ಪಿಸಿ ಸಮಾಜದ ಮುಖ್ಯವಾಹಿನಿಯಲ್ಲಿ ತಾವು ಮುಂದೆ ಬರಬೇಕೆಂದು ತಿಳಿಸಿದರು. ಪೌರಕಾರ್ಮಿಕರ ಕಲ್ಯಾಣಕ್ಕೆ ಇಲಾಖೆ ಬದ್ಧವಾಗಿದ್ದು, ತಮ್ಮ ಹಿತರಕ್ಷಣೆಗೆ ಕಂಕಣ ಬದ್ಧವಾಗಿದೆ ಎಂದು ತಿಳಿಸಿದರು. ಪಪಂ ವತಿಯಿಂದ ಕಾರ್ಯನಿರ್ವಹಿಸುತ್ತಿರುವ ಎಲ್ಲ ಪೌರಕಾರ್ಮಿಕ ಬಂಧುಗಳಿಗೆ ಸನ್ಮಾನಿಸಿ ನೆನಪಿನ ಕಾಣಿಕೆ ನೀಡಲಾಯಿತು.
ಪಪಂ ಮುಖ್ಯಾಧಿಕಾರಿ ದೀಪಾ, ಪಪಂ ಸ್ವಚ್ಛತಾ ರಾಯಭಾರಿ ಕಡಕೊಳ ಕುಮಾರಸ್ವಾಮಿ, ಸಫಾಯಿ ಕರ್ಮಚಾರಿ ಸಂಘದ ಜಿಲ್ಲಾಧ್ಯಕ್ಷ ರಾಜು, ಸಮುದಾಯ ಸಂಘಟನಾಧಿಕಾರಿ ಮಹೇಶ್, ಶಂಕರ್, ಆರ್ಐ ವೀಣಾ. ಡಿಇಓ ಶಿವಕುಮಾರ್, ಆರೋಗ್ಯ ನಿರೀಕ್ಷಕ ಮಂಜುನಾಥ್, ಲೆಕ್ಕಿಗರಾದ ಸತೀಶ್ ಹಾಗೂ ಸಿಬ್ಬಂದಿ ವರ್ಗ ಇದ್ದರು.-------------