ತ್ಯಾರನಹಳ್ಳಿ ಗ್ರಾಮದ ನಿವಾಸಿ ಜಿಲ್ಲಾ ರೈತ ಸಂಘದ ಅಧ್ಯಕ್ಷ ಮತ್ತು ಕಾಂಗ್ರೆಸ್ ಮುಖಂಡ ಟಿ.ಎ.ರಾಮೇಗೌಡ ಬಂಧಿತ ಆರೋಪಿಯಾಗಿದ್ದು, ಸಿದ್ದನಹಳ್ಳಿ ಗ್ರಾಮದ 14 ವರ್ಷದ ಅಪ್ರಾಪ್ತೆ ಬಾಲಕಿಯ ಮೇಲೆಯೇ ರಾಮೇಗೌಡ ಲೈಂಗಿಕ ಕಿರುಕುಳ ನೀಡಿದ್ದಾರೆ.

ಕನ್ನಡಪ್ರಭ ವಾರ್ತೆ ಬಂಗಾರಪೇಟೆ

ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ಕಿರುಕುಳ ನೀಡಿ ಈಗ ಬಾಲಕಿ ನಾಲ್ಕು ತಿಂಗಳ ಗರ್ಭಿಣಿಯಾಗಿರುವ ಕಾರಣ ಬಾಲಕಿ ತಂದೆ ನೀಡಿದ ದೂರಿನ ಮೇರೆಗೆ ಪೊಲೀಸರು ಜಿಲ್ಲಾ ರೈತ ಸಂಘದ ಅಧ್ಯಕ್ಷ, ಕಾಂಗ್ರೆಸ್ ಮುಖಂಡನೊಬ್ಬನ ಮೇಲೆ ಪೊಕ್ಸೋ ಪ್ರಕರಣ ದಾಖಲಿಸಿ ಬಂಧಿಸಿದ್ದಾರೆ.ತಾಲೂಕಿನ ತ್ಯಾರನಹಳ್ಳಿ ಗ್ರಾಮದ ನಿವಾಸಿ ಜಿಲ್ಲಾ ರೈತ ಸಂಘದ ಅಧ್ಯಕ್ಷ ಮತ್ತು ಕಾಂಗ್ರೆಸ್ ಮುಖಂಡ ಟಿ.ಎ.ರಾಮೇಗೌಡ ಬಂಧಿತ ಆರೋಪಿಯಾಗಿದ್ದು, ಸಿದ್ದನಹಳ್ಳಿ ಗ್ರಾಮದ 14 ವರ್ಷದ ಅಪ್ರಾಪ್ತೆ ಬಾಲಕಿಯ ಮೇಲೆಯೇ ರಾಮೇಗೌಡ ಲೈಂಗಿಕ ಕಿರುಕುಳ ನೀಡಿದ್ದು ಈಗ ಬಾಲಕಿ ನಾಲ್ಕು ತಿಂಗಳ ಗರ್ಭಿಣಿಯಾಗಿದ್ದಾಳೆ. ಪ್ರಕರಣ ಒಂದರಲ್ಲಿ ರಾಮೇಗೌಡ ಬಾಲಕಿಗೆ ಬುದ್ಧಿವಾದ ಹೇಳಲು ಅವರ ಮನೆಗೆ ಕರೆದುಕೊಂಡು ಹೋಗಿ ಕೆಲ ದಿನಗಳು ಇರಿಸಿಕೊಂಡಿದ್ದರು. ಆಗ ಆರೋಪಿ ರಾಮೇಗೌಡ ತಾವು ರೈತ ಸಂಘದ ಜಿಲ್ಲಾಧ್ಯಕ್ಷ ಎಂಬುದನ್ನು ಮರೆತು ಕಾಮುಕರಂತೆ ಬಾಲಕಿಯನ್ನು ಬಲವಂತವಾಗಿ ಲೈಂಗಿಕ ಕ್ರಿಯೆಗೆ ಬಳಸಿಕೊಂಡಿದ್ದಾನೆ. ರಾಮೇಗೌಡನಿಗೆ ಇಬ್ಬರು ಹೆಂಡ್ತಿರಿದ್ದರೂ ಸಹ ಬಾಲಕಿಯ ಮೇಲೆ ಲೈಂಗಿಕ ಕಿರುಕುಳ ನೀಡಿರುವುದು ನಾಗರಿಕ ಸಮಾಜ ತಲೆ ತಗ್ಗಿಸುವಂತಾಗಿದೆ.ಈ ವಿಷಯ ಬಾಲಕಿಯ ಪೋಷಕರಿಗೆ ತಿಳಿದಾಗ ರಾಮೇಗೌಡ ತಾವು ರೈತ ಸಂಘದ ಜಿಲ್ಲಾಧ್ಯಕ್ಷ ಮತ್ತು ಕಾಂಗ್ರೆಸ್ ಪಕ್ಷದ ಮುಖಂಡರಾಗಿದ್ದು ನನಗೆ ಎಲ್ಲರ ಬೆಂಬಲವಿದೆ. ನನ್ನನ್ನು ನೀವು ಏನನ್ನೂ ಮಾಡಲು ಸಾದ್ಯವಿಲ್ಲವೆಂದು ಬೆದರಿಕೆ ಹಾಕಿ ಪ್ರಕರಣ ಮುಚ್ಚಿ ಹಾಕಲು ಯತ್ನಿಸಿದ್ದಾನೆ. ಈಗ ಬಾಲಕಿ ಗರ್ಭಿಣಿಯಾಗಿದ್ದು, ರಾಮೇಗೌಡರ ವಿರುದ್ದ ಬಾಲಕಿಯ ತಂದೆ ಧೈರ್ಯ ಮಾಡಿ ಪೊಲೀಸರಿಗೆ ದೂರು ನೀಡಿದ್ದಾರೆ. ದೂರು ಬಂದ ತಕ್ಷಣ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ತನಿಖೆ ನಡೆಸಿದ್ದಾರೆ.

ರಾಮೇಗೌಡ ರೈತ ಸಂಘವನ್ನು ದುರ್ಬಳಕೆ ಮಾಡಿಕೊಂಡು ಎಲ್ಲಾ ಕಡೆ ದಂಧೆಗೆ ಇಳಿದಿದ್ದ ಎನ್ನಲಾಗಿದೆ. ಈಗ ರಾಮೇಗೌಡನ ಈ ನೀಚ ಕೃತ್ಯದಿಂದ ಇಡೀ ರೈತ ಸಂಘಕ್ಕೆ ಕಳಂಕವಾಗಿದೆ. ರೈತ ಸಂಘದ ಹೆಸರನ್ನು ಬಳಸಿಕೊಂಡು ಅಪ್ರಾಪ್ತೆ ಬಾಲಕಿ ಮೇಲೆ ಲೈಂಗಿಕ ಕಿರುಕುಳ ನೀಡಿರುವ ರಾಮೇಗೌಡಗೆ ತಕ್ಕ ಶಿಕ್ಷೆ ನೀಡಬೇಕೆಂದು ಸಾರ್ವಜನಿಕರೂ ಹಾಗೂ ರೈತ ಸಂಘದ ಮುಖಂಡರು ಒತ್ತಾಯಿಸಿದ್ದಾರೆ.