ನಾಳೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಜಿಲ್ಲಾ ಮಟ್ಟದ ಕವಿಗೋಷ್ಠಿ

| Published : Nov 15 2025, 01:45 AM IST

ನಾಳೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಜಿಲ್ಲಾ ಮಟ್ಟದ ಕವಿಗೋಷ್ಠಿ
Share this Article
  • FB
  • TW
  • Linkdin
  • Email

ಸಾರಾಂಶ

ಕೇಂದ್ರ ಸಮಿತಿಯ ಸಂಸ್ಥಾಪಕ ಅಧ್ಯಕ್ಷರಾದ ಕೊಟ್ರೇಶ್‌ ಎಸ್. ಉಪ್ಪಾರ್‌ ಕಾರ್ಯಕ್ರಮ ಉದ್ಘಾಟಿಸಲಿದ್ದು, ಹಿರಿಯ ಸಾಹಿತಿ ಎನ್. ಶೈಲಜಾ ಹಾಸನ ಅಧ್ಯಕ್ಷತೆ ವಹಿಸಲಿದ್ದಾರೆ. ಪತ್ರಕರ್ತ ಹಾಗೂ ಸಾಹಿತಿ ನಾಗರಾಜ ಹೆತ್ತೂರು ಭುವನೇಶ್ವರಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಲಿದ್ದು, ರಾಜ್ಯ ಜಂಟಿ ಕಾರ್ಯದರ್ಶಿ ನಾಗರಾಜ ದೊಡ್ಡಮನಿ ಪ್ರಾಸ್ತಾವಿಕವಾಗಿ ಮಾತನಾಡಲಿದ್ದಾರೆ. ಕೊಡಗು ಜಿಲ್ಲೆ ಮೀನುಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕಿ ಹಾಗೂ ಸಾಹಿತಿ ಮಿಲನ ಕೆ. ಭರತ್ ಮುಖ್ಯ ಭಾಷಣ ಮಾಡಲಿದ್ದು, ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಗೌರವಾಧ್ಯಕ್ಷ ರವಿ ನಾಕಲಗೂಡು ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಸಮಾಜ ಸೇವಕರಾದ ಡಾ. ವಿಜಯ ಕುಮಾರ್ ಹಾಗೂ ಕೆ.ಪಿ. ಪುಟ್ಟಸ್ವಾಮಿ ಶೆಟ್ಟಿಯವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಕನ್ನಡಪ್ರಭ ವಾರ್ತೆ ಹಾಸನ

ಕೇಂದ್ರಕನ್ನಡ ಸಾಹಿತ್ಯ ವೇದಿಕೆ ಹಾಸನ ತಾಲೂಕು ಘಟಕದ ವತಿಯಿಂದ ನವೆಂಬರ್ ೧೬ರ ಭಾನುವಾರ ನಗರದ ಭಾರತ್ ಸ್ಕೌಟ್ಸ್ & ಗೈಡ್ಸ್ ಸಮುದಾಯ ಭವನದಲ್ಲಿ ಕನ್ನಡ ರಾಜ್ಯೋತ್ಸವ, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಹಾಗೂ ಜಿಲ್ಲಾ ಮಟ್ಟದ ಕನ್ನಡ ರಾಜ್ಯೋತ್ಸವ ಕವಿಗೋಷ್ಠಿಯನ್ನು ಹಮ್ಮಿಕೊಳ್ಳಲಾಗಿದೆ ಎಂದು ತಾಲೂಕು ಅಧ್ಯಕ್ಷೆ ಕೆ.ಸಿ. ಗೀತಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕೇಂದ್ರ ಸಮಿತಿಯ ಸಂಸ್ಥಾಪಕ ಅಧ್ಯಕ್ಷರಾದ ಕೊಟ್ರೇಶ್‌ ಎಸ್. ಉಪ್ಪಾರ್‌ ಕಾರ್ಯಕ್ರಮ ಉದ್ಘಾಟಿಸಲಿದ್ದು, ಹಿರಿಯ ಸಾಹಿತಿ ಎನ್. ಶೈಲಜಾ ಹಾಸನ ಅಧ್ಯಕ್ಷತೆ ವಹಿಸಲಿದ್ದಾರೆ. ಪತ್ರಕರ್ತ ಹಾಗೂ ಸಾಹಿತಿ ನಾಗರಾಜ ಹೆತ್ತೂರು ಭುವನೇಶ್ವರಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಲಿದ್ದು, ರಾಜ್ಯ ಜಂಟಿ ಕಾರ್ಯದರ್ಶಿ ನಾಗರಾಜ ದೊಡ್ಡಮನಿ ಪ್ರಾಸ್ತಾವಿಕವಾಗಿ ಮಾತನಾಡಲಿದ್ದಾರೆ. ಕೊಡಗು ಜಿಲ್ಲೆ ಮೀನುಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕಿ ಹಾಗೂ ಸಾಹಿತಿ ಮಿಲನ ಕೆ. ಭರತ್ ಮುಖ್ಯ ಭಾಷಣ ಮಾಡಲಿದ್ದು, ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಗೌರವಾಧ್ಯಕ್ಷ ರವಿ ನಾಕಲಗೂಡು ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಸಮಾಜ ಸೇವಕರಾದ ಡಾ. ವಿಜಯ ಕುಮಾರ್ ಹಾಗೂ ಕೆ.ಪಿ. ಪುಟ್ಟಸ್ವಾಮಿ ಶೆಟ್ಟಿಯವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ವೇದಿಕೆಯಲ್ಲಿ ಅರಕಲಗೂಡು ತಾಲೂಕು ಅಧ್ಯಕ್ಷ ಗಂಗೇಶ್ ಬಸವನಹಳ್ಳಿ, ಹೊಳೆನರಸೀಪುರ ತಾಲೂಕು ಅಧ್ಯಕ್ಷೆ ಕಾವ್ಯಶ್ರೀ ಕೃಷ್ಣ, ಹಾಸನ ತಾಲೂಕು ಅಧ್ಯಕ್ಷ ಕೆ.ಸಿ.ಗೀತಾ, ಅರಸೀಕೆರೆ ತಾಲೂಕು ಅಧ್ಯಕ್ಷ ಕೆ.ಎಸ್.ಮಂಜುನಾಥ್ ಪಂಡಿತ್, ಬೇಲೂರು ತಾಲೂಕು ಅಧ್ಯಕ್ಷ ಮಾರುತಿ ಕೆ.ಬಿ.ದೊಡ್ಡಕೋಡಿಹಳ್ಳಿ, ಆಲೂರು ತಾಲೂಕು ಅಧ್ಯಕ್ಷ ಕೃಷ್ಣೇಗೌಡ ಮಣಿಪುರ ಗೌರವ ಉಪಸ್ಥಿತಿ ವಹಿಸಲಿದ್ದಾರೆ.ಜಿಲ್ಲಾ ಮಟ್ಟದ ಕನ್ನಡ ರಾಜ್ಯೋತ್ಸವ ಕವಿಗೋಷ್ಠಿ

ನಂತರ ನಡೆಯುವ ಜಿಲ್ಲಾಮಟ್ಟದ ಕನ್ನಡರಾಜ್ಯೋತ್ಸವ ಕವಿಗೋಷ್ಠಿಯಲ್ಲಿ ಗ್ಯಾರಂಟಿ ರಾಮಣ್ಣ, ರಂಗನಾಥ್‌ ಆರ್.ಬಿ., ವಾಣಿ ಮಹೇಶ್, ಎಚ್. ಯಮುನಾವತಿ, ವೇದಶ್ರೀ ನಿಶಿತ್, ರೇಖಾಪ್ರಕಾಶ್, ಪದ್ಮಾವತಿ ವೆಂಕಟೇಶ್, ರಘು ಜಿ. ಗೆಂಡೆಹಳ್ಳಿ, ಗಿರಿಜಾ ನಿರ್ವಾಣಿ, ಶಿವಣ್ಣ ಕೆರೆಕೋಡಿ, ಭಾರತಿ ಎಚ್.ಎನ್, ಗಿರೀಶ್‌ ಕೊಣನೂರು, ರುಮಾನಜಬೀರ್, ಅಶ್ವಿನಿ ಟಿ.ಎಸ್., ಸುಧೀರ್‌ ಹೆಜಮಾಡಿ, ಚಂದ್ರಕಲಾ ಎಂ.ಆಲೂರು, ಧರ್ಮಕೆರಲೂರು, ಡಾ. ರಕ್ಷಾ, ಸಿಲ್ವೆಸ್ಟರ್‌ ಕ್ರಾಸ್ತ, ಮಲ್ಲೇಶ್ ಜಿ, ಸೈಫುಲ್ಲಾ ಡಿ.ಎಂ., ಲಲಿತಎಸ್, ಸತ್ತಿಗರಹಳ್ಳಿ ಸಂಪತ್, ಪಾತರಾಜು ಎಸ್.ಡಿ. ಸೇರಿದಂತೆ ಹಲವರು ಭಾಗವಹಿಸಲಿದ್ದಾರೆ.

ಕನ್ನಡ ಸಾಂಸ್ಕೃತಿಕ ಕಾರ್ಯಕ್ರಮಗಳು:

ಸಂತ ಫಿಲೋಮಿನಾ ಬಾಲಕಿಯರ ಪ್ರೌಢಶಾಲೆ, ಹಾಸನದ ವಿದ್ಯಾಸೌಧ ಪಬ್ಲಿಕ್ ಶಾಲೆ, ವಿಜಯನಗರ, ಹಾಸನ; ಅಲ್-ಅಮಿನ್‌ ಆಂಗ್ಲ ಹಿರಿಯ ಪ್ರಾಥಮಿಕ & ಪ್ರೌಢಶಾಲೆ, ಚಿಪ್ಪಿನಕಟ್ಟೆ, ಹಾಸನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ವಳಗೇರಹಳ್ಳಿ, ಹಾಸನ ತಾಲೂಕು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಉತ್ತರ ಬಡಾವಣೆ, ಹಾಸನ ಮಕ್ಕಳಿಂದ ಕನ್ನಡ ನಾಡು-ನುಡಿಗೆ ಸಂಬಂಧಿಸಿದಂತೆ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ ಎಂದರು.