ಯೋಜನೆಗಳ ಅನುಷ್ಠಾನದಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ: ಶಿವಾನಂದ ಸ್ವಾಮಿ

| Published : Jan 16 2025, 12:49 AM IST

ಯೋಜನೆಗಳ ಅನುಷ್ಠಾನದಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ: ಶಿವಾನಂದ ಸ್ವಾಮಿ
Share this Article
  • FB
  • TW
  • Linkdin
  • Email

ಸಾರಾಂಶ

ತರೀಕೆರೆ, ಸರ್ಕಾರ್ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳ ಅನುಷ್ಠಾನದಲ್ಲಿ ಚಿಕ್ಕಮಗಳೂರು ಜಿಲ್ಲೆ ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದಿದೆ ಎಂದು ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಅಧ್ಯಕ್ಷ ಶಿವಾನಂದ ಸ್ವಾಮಿ ಹೇಳಿದ್ದಾರೆ.

ತರೀಕೆರೆಯಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸಭೆ

ಕನ್ನಡಪ್ರಭ ವಾರ್ತೆ, ತರೀಕೆರೆ

ಸರ್ಕಾರ್ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳ ಅನುಷ್ಠಾನದಲ್ಲಿ ಚಿಕ್ಕಮಗಳೂರು ಜಿಲ್ಲೆ ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದಿದೆ ಎಂದು ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಅಧ್ಯಕ್ಷ ಶಿವಾನಂದ ಸ್ವಾಮಿ ಹೇಳಿದ್ದಾರೆ,

ಬುಧವಾರ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆದ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸಭೆಯಲ್ಲಿ ಮಾತನಾಡಿದರು. ನಾವು ಭಾಗ್ಯವಂತರು, ಶ್ರದ್ಧೆ, ಜಾಗರೂಕತೆ ಮತ್ತು ಜವಾಬ್ದಾರಿ ಹಾಗೂ ಅಧಿಕಾರಿಗಳ ಶ್ರಮ ಹಾಗೂ ಸರ್ವರ ಸಹಕಾರದಿಂದ ಯೋಜನೆ ಅನುಷ್ಠಾನಕ್ಕೆ ತರಲಾಗುತ್ತಿದೆ ಎಂದು ಹೇಳಿದರು. ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸಭೆಗೆ ಅಧಿಕಾರಿಗಳು ಸಮಯಕ್ಕೆ ಸರಿಯಾಗಿ ಆಗಮಿಸಬೇಕು, ಐದು ಇಲಾಖೆಗಳು ಈ ಹಿಂದೆ ನಡೆದಿರುವ ಸಭೆಗಳ ಪ್ರಗತಿ ಮಾಹಿತಿಯನ್ನುಮಂಡಿಸಬೇಕು, ಇದು ಸರ್ಕಾರದ ಕಾರ್ಯಕ್ರಮಕ್ಕೆ ಪೂರಕವಾಗಿ ಕಾರ್ಯನಿರ್ವಹಿಸಬೇಕು, ಗ್ಯಾರಂಟಿಯ ಎಲ್ಲ ಯೋಜನೆಗಳು ಹೋಬಳಿ ಮಟ್ಟದಲ್ಲಿ ಪ್ರಗತಿ ಪರೀಶೀಲನೆ ನೆಡೆಯಬೇಕು ಎಂದು ಹೇಳಿದರು. ಶಕ್ತಿ ಯೋಜನೆಯಲ್ಲಿ ಮೂರು ಕೋಟಿ 27 ಲಕ್ಷ ಜನರು ಸಂಚರಿಸಿದ್ದಾರೆ, 124 ಕೋಟಿ ರೂ ಕೆ ಎಸ್ ಆರ್ ಟಿ ಸಿ ಗೆ ಸಂದಾಯವಾಗಿದೆ, ಇದರಿಂದ ಕೆ ಎಸ್ ಆರ್ ಟಿ ಸಿಗೂ ಉತ್ಪನ್ನ ಹೆಚ್ಚಾಗಿದೆ ಎಂದು ತಿಳಿಸಿದ ಅವರು ಅನ್ನಭಾಗ್ಯ ಗೃಹಲಕ್ಷ್ಮಿ ಯೋಜನೆ ಯುವ ನಿಧಿ ಕುರಿತು ಸಂಪೂರ್ಣ ಅಂಕಿಅಂಶ ತಿಳಿಸಿದರು, ಗ್ಯಾರಂಟಿ ಯೋಜನೆಗಳ ಅನುಷ್ಠಾನದಿಂದ ಸಾರ್ವಜನಿಕರ ಆರ್ಥಿಕ ಚಟುವಟಿಕೆ ಹೆಚ್ಚಾಗಿದೆ. ಜನರ ದುಡ್ಡು ಜನರಿಗೆ ತಲುಪಿಸುವ ಕಾರ್ಯ ಆಗುತ್ತಿದೆ. ಈ ಯೋಜನೆಗಳು ಹೆಚ್ಚು ಹೆಚ್ಚು ಜನರಿಗೆ ತಲುಪಿಸಬೇಕು ಎಂದು ಹೇಳಿದರು. ತರೀಕೆರೆ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ರಮೇಶ್ ಗೋವಿಂದೇಗೌಡ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿ ಬಡತನ ರೇಖೆಗಿಂತ ಕೆಳಗಿರುವ ಬಡವರಿಗೆ ಯೋಜನೆಗಳ ಅನುಷ್ಠಾನದಿಂದ ತುಂಬಾ ಅನುಕೂಲ ವಾಗಿದೆ. ಆರ್ಥಿಕವಾಗಿ ಮೇಲೆ ಬರಲು ಯೋಜನೆಗಳು ಸಹಾಯಕ. ಈ ಕುರಿತ ಪ್ರಚಾರ ಹೆಚ್ಚಾಗಬೇಕು, ಗ್ರಾಮ ಮಟ್ಟ ದಲ್ಲಿ ಯೋಜನೆಗಳು ಅನುಷ್ಠಾನಕ್ಕೆ ಬರಬೇಕು. ಸಮಸ್ಯೆ ಪರಿಹರಿಸಬೇಕು, ಕಟ್ಟಕಡೆ ವ್ಯಕ್ತಿಗೂ ಯೋಜನೆಗಳು ತಲುಪಬೇಕು, ರಾಜ್ಯದ ಮುಖ್ಯಮಂತ್ರಿ ಎಸ್. ಸಿದ್ದರಾಮಯ್ಯಗೆ ಬಡವರ ಸಂಕಷ್ಟ ಗೊತ್ತಿದೆ. ಯೋಜನೆ ಅನುಷ್ಠಾನಕ್ಕೆ ತರುವಲ್ಲಿ ಅಧಿಕಾರಿ ಮತ್ತು ಸರ್ವರು ಸಹರಿಸಬೇಕು ಎಂದು ತಿಳಿಸಿದರು. ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಉಪಾಧ್ಯಕ್ಷ ಸಮೀವುಲ್ಲಾ ಶರೀಫ್ ಅವರು ಮಾತನಾಡಿದರು,ತಾಲೂಕು ಗ್ಯಾರಂಟಿ ಯೋಜನೆ ಸಮಿತಿ ಸದಸ್ಯರು, ತಾಲುಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಡಾ. ಆರ್ ದೇವೇಂದ್ರಪ್ಪ. ವಿವಿಧ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು 15 ಕೆ ಟಿ ಆರ್ ಕೆ 4ಃ

ತರೀಕೆರೆಯಲ್ಲಿ ನಡೆದ ಗ್ಯಾರಂಟಿ ಯೋಜನೆಗಳ ಸಮಿತಿ ಸಭೆಯಲ್ಲಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಅಧ್ಯಕ್ಷ ಶಿವಾನಂದ ಸ್ವಾಮಿ ಮಾತನಾಡಿದರು, ಪ್ರಾಧಿಕಾರ ಉಪಾಧ್ಯಕ್ಷ ಸಮೀವುಲ್ಲಾ ಶರೀಫ್, ತರೀಕೆರೆ ತಾಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ರಮೇಶ್ ಗೋವಿಂದೇ ಗೌಡ, ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ಡಾ, ಆರ್ ದೇವೇಂದ್ರಪ್ಪ ಇದ್ದರು.