ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಐಪಿಎಸ್ ಅಧಿಕಾರಿ ಮಹಮದ್ ಸುಜೀತಾ ಅವರನ್ನು ವರ್ಗಾವಣೆ ಮಾಡಲಾಗಿದ್ದು, ಈಗ ಬೆಂಗಳೂರು ನಗರ ಆಗ್ನೇಯ ವಲಯದ ಉಪ ಪೊಲೀಸ್ ಆಯುಕ್ತರಾಗಿ (ಡಿಸಿಪಿ) ಸರ್ಕಾರ ನೇಮಕ ಮಾಡಿದೆ. ಈ ಸ್ಥಾನಕ್ಕೆ ನೂತನ ಎಸ್‌ಪಿಯಾಗಿ ಶುಭನ್ವಿತಾ ಅವರನ್ನು ನೇಮಕ ಮಾಡಲಾಗಿದ್ದು, ಗುರುವಾರ ಕರ್ತವ್ಯಕ್ಕೆ ಹಾಜರಾದರು.

ಕನ್ನಡಪ್ರಭ ವಾರ್ತೆ ಹಾಸನ

ಈವರೆಗೆ ಅವರು ಸಿಐಡಿ ಎಸ್‌ಪಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ೨೦೨೫ ಡಿಸೆಂಬರ್ ೩೧, ವರ್ಷದ ಕೊನೆಯ ದಿನವೇ ಹಾಸನ ಜಿಲ್ಲಾ ಪೊಲೀಸ್ ಇಲಾಖೆಯಲ್ಲಿ ಮಹತ್ವದ ಆಡಳಿತಾತ್ಮಕ ಬದಲಾವಣೆ ನಡೆದಿದೆ. ಮಹಮದ್ ಸುಜೀತಾ ಅವರು ಹಾಸನ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ, ಅಪರಾಧ ನಿಯಂತ್ರಣ ಹಾಗೂ ಶಾಂತಿ ಕಾಪಾಡುವಲ್ಲಿ ಪ್ರಮುಖ ಪಾತ್ರವಹಿಸಿದ್ದರು. ನೂತನ ಎಸ್‌ಪಿ ಶುಭನ್ವಿತಾ ಅವರ ನೇಮಕದೊಂದಿಗೆ ಹಾಸನ ಜಿಲ್ಲೆಯಲ್ಲಿ ಪೊಲೀಸ್ ಆಡಳಿತಕ್ಕೆ ಹೊಸ ಚಾಲನೆ ಸಿಗುವ ನಿರೀಕ್ಷೆ ವ್ಯಕ್ತವಾಗಿದೆ. ಮುಂದಿನ ದಿನಗಳಲ್ಲಿ ಕಾನೂನು ಸುವ್ಯವಸ್ಥೆ, ಅಪರಾಧ ತಡೆ ಹಾಗೂ ಸಾರ್ವಜನಿಕ ಸುರಕ್ಷತೆಗೆ ಹೆಚ್ಚಿನ ಒತ್ತು ನೀಡುವ ಸಾಧ್ಯತೆ ಇದೆ.