District tour of the Nomad Development Corporation President
ಕನ್ನಡಪ್ರಭ ವಾರ್ತೆ ಯಾದಗಿರಿ
ಕರ್ನಾಟಕ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಗಳ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಜಿ. ಪಲ್ಲವಿ ಅವರು ಮಾರ್ಚ್ 9 ಹಾಗೂ 10 ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡು ಈ ಕೆಳಕಂಡ ಕಾರ್ಯಕ್ರಮಗಳಲ್ಲಿ ಭಾಗವಹಿಸುವರು.ಮಾರ್ಚ್ 9 ರಂದು ಸಂಜೆ 4 ಗಂಟೆಗೆ ಗುರುಮಠಕಲ್ ಇಂದಿರಾ ನಗರ ವಾರ್ಡ್ ಸ.10 ಇಲ್ಲಿ ಪರಿಶಿಷ್ಟ ಜಾತಿ ಬುಡ್ಗ ಜಂಗಮ ಸಮುದಾಯಕ್ಕೆ ಸೇರಿದ ಶ್ಯಾಮಮ್ಮ ಸಿರಿಗಿರಿ ಮತ್ತು ಕು. ಸಾಯಮ್ಮ ಸಾವುಗಳ ಬಗ್ಗೆ ಸಂತ್ರಸ್ತರ ಕುಟುಂಬದವರನ್ನು ಭೇಟಿ ಮಾಡಿ ಸಾಂತ್ವನ ನೀಡುವರು. ಅಂದು ಸಂಜೆ 5 ಗಂಟೆಗೆ ಮಾರಣಾಂತಿಕ ಹಲ್ಲೆಗೊಳಗಾದ ಮಾರೆಮ್ಮ ತಂ.ಮಾರೆಪ್ಪ ರವರ ಕುಟುಂಬಸ್ಥರನ್ನು ಯಲಸತ್ತಿ ಗ್ರಾಮದಲ್ಲಿ ಭೇಟಿ ಮಾಡುವರು. ನಂತರ ರಾತ್ರಿ 8-ಕ್ಕೆ ಯಾದಗಿರಿಯಲ್ಲಿ ವಾಸ್ತವ್ಯ ಮಾಡುವರು.
ಸೋಮವಾರ ಮಾರ್ಚ್ 10 ರಂದು ಬೆಳಿಗ್ಗೆ 10 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸಮುದಾಯದ ಸಂಘ, ಸಂಸ್ಥೆ ಗಳ, ಅಲೆಮಾರಿ ಸಮುದಾಯದ ಸಾಮಾನ್ಯ ಜನರಿಂದ ಕುಂದುಕೊರತೆ ಅಹವಾಲು ಸ್ವೀಕಾರ, ವಿವಿಧ ಇಲಾಖೆಗಳ ಅಧಿಕಾರಿಗಳ ಸಮಕ್ಷಮ ಸಭೆ ನಡೆಸಲಿದ್ದಾರೆ.ಅಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ದಂಡಾಧಿಕಾರಿಗಳು ಹಾಗೂ ಜಿಲ್ಲಾ ಅನುಷ್ಠಾನ ಸಮಿತಿ ಅಧ್ಯಕ್ಷರು ಇವರ ಉಪಸ್ಥಿತಿಯಲ್ಲಿ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು, ಜಿಲ್ಲಾ ಅನುಷ್ಠಾನ ಸಮಿತಿ ಸದಸ್ಯರು ಹಾಗೂ ಸಂಬಂಧಪಟ್ಟ ಇಲಾಖಾ ಅಧಿಕಾರಿಗಳೊಂದಿಗೆ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮದಿಂದ ಜಾರಿಯಾದ ವಿವಿಧ ಯೋಜನೆಗಳ ಕುರಿತು ಪ್ರಗತಿ ಪರಿಶೀಲನಾ ಹಾಗೂ ಸಮಾಲೋಚನಾ ಸಭೆ ನಡೆಸುವರು. ಮಧ್ಯಾಹ್ನ ಪಕ್ಷದ ಕಚೇರಿಗೆ ಭೇಟಿ ನೀಡಿ ಮಧ್ಯಾಹ್ನ 3 ಗಂಟೆಗೆ ಬಳ್ಳಾರಿ ಗೆ ಪ್ರಯಾಣ ಬೆಳೆಸುವರು.
-7ವೈಡಿಆರ್24 : ಜಿ. ಪಲ್ಲವಿ, ಕರ್ನಾಟಕ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಗಳ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷೆ