ಸಾರಾಂಶ
ಶಿವಮೊಗ್ಗ: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಜನ್ಮದಿನಾಚರಣೆಯನ್ನು ಗುರುವಾರ ನಗರದ ವಿವಿಧೆಡೆ ಅದ್ಧೂರಿಯಾಗಿ ಆಚರಿಸಲಾಯಿತು.
ದೇವಾಲಯಗಳಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಲ್ಲದೇ, ಕ್ರೀಡಾಕೂಟ, ಸಾಮಾಜಿಕ ಸೇವಾ ಕಾರ್ಯಗಳ ಮೂಲಕ ಜನ್ಮದಿನ ಆಚರಿಸಲಾಯಿತು.ವಿಶೇಷ ಪೂಜೆ: ರವೀಂದ್ರ ನಗರದ ಶ್ರೀ ಪ್ರಸನ್ನ ಗಣಪತಿ ದೇವಾಲಯದಲ್ಲಿ ಪೂಜೆ ಸಲ್ಲಿಸಿ ಯಡಿಯೂರಪ್ಪ ಅವರಿಗೆ ಶುಭಾಶಯ ಕೋರಿದರು. ಬಿಜೆಪಿ ಜಿಲ್ಲಾಧ್ಯಕ್ಷ ಎನ್.ಕೆ.ಜಗದೀಶ್ ನೇತೃತ್ವದಲ್ಲಿ ಪೂಜಾ ಕೈಂಕರ್ಯ ನೆರವೇರಿಸಿ ಯಡಿಯೂರಪ್ಪ ಅವರಿಗೆ ಆರೋಗ್ಯ, ಯಶಸ್ಸು ಕರುಣಿಸಲೆಂದು ದೇವರಲ್ಲಿ ಪ್ರಾರ್ಥನೆ ಸಲ್ಲಿಸಿದರು.ಈ ಸಂಧರ್ಭದಲ್ಲಿ ಶಾಸಕರಾದ ಡಿ.ಎಸ್.ಅರುಣ್, ಮಾಜಿ ಸೂಡಾಧ್ಯಕ್ಷ ಎನ್.ಜೆ.ನಾಗರಾಜ್, ಜ್ನಾನೇಶ್ವರ್, ಎಸ್.ದತ್ತಾತ್ರಿ, ನಗರಾಧ್ಯಕ್ಷ ಮೋಹನ್ ರೆಡ್ಡಿ, ಬಳ್ಳಕೆರೆ ಸಂತೋಷ್ ಇದ್ದರು.ಹಣ್ಣು ವಿತರಣೆ:ಯಡಿಯೂರಪ್ಪ ಹುಟ್ಟುಹಬ್ಬದ ಅಂಗವಾಗಿ ಮೆಗ್ಗಾನ್ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು ವಿತರಿಸಲಾಯಿತು.ಈ ವೇಳೆ ಶಾಸಕರಾದ ಎಸ್.ಎನ್. ಚನ್ನಬಸಪ್ಪ, ಡಿ.ಎಸ್.ಅರುಣ್, ಧನಂಜಯ ಸರ್ಜಿ, ಮುಖಂಡರಾದ ದಿವಾಕರ್ ಶೆಟ್ಟಿ. ರಾಜೇಶ್ ಕಾಮತ್, ಪ್ರಭಾಕರ್, ವಿಶ್ವನಾಥ್, ಸುರೇಖಾ ಮುರಳೀಧರ್, ನಾಗರಾಜ್, ಸೇರಿದಂತೆ ಹಲವರಿದ್ದರು.ಕುಂಭಮೇಳ ಯಾತ್ರಿಕರಿಂದ ಜನ್ಮದಿನಾಚರಣೆ: ಶಿವಮೊಗ್ಗದಿಂದ ಪ್ರಯಾಗ್ ರಾಜ್ ಗೆ ತೆರಳಿದ್ದ ವಿಶೇಷ ರೈಲಿನಲ್ಲಿದ್ದ ಪ್ರಯಾಣಿಕರು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ 81ನೇ ಹುಟ್ಟುಹಬ್ಬ ಆಚರಿಸಿದ್ದಾರೆ.ಪ್ರಯಾಗ್ ರಾಜ್‌ನಿಂದ ವಾಪಸ್ ಬರುವ ವೇಳೆ ಹುಟ್ಟುಹಬ್ಬ ಆಚರಿಸಲಾಗಿದೆ. ಚಿತ್ರದುರ್ಗದ ರೈಲ್ವೆ ನಿಲ್ದಾಣದಲ್ಲಿ ಬಿಎಸ್‍ವೈ ಅಭಿಮಾನಿಗಳು ಜನ್ಮದಿನ ಆಚರಿಸಿದ್ದಾರೆ. ಕೇಕ್ ಕತ್ತರಿಸಿ ಸಿಹಿ ಹಂಚಿ ಸಂಭ್ರಮಾಚರಣೆ ನಡೆಸಲಾಗಿದೆ. ಶಿವಮೊಗ್ಗ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮಾಲತೇಶ್, ಭದ್ರಾವತಿ ಬಿಜೆಪಿ ಮುಖಂಡ ಮಂಗೋಟೆ ರುದ್ರೇಶ್, ದತ್ತ ಕುಮಾರ್, ಶಿವಾನಂದ, ರಾಜೇಶ್, ಭವಾನಿ, ಯಶೋಧ ಉಪಸ್ಥಿತರಿದ್ದರು.ಬಿ.ಎಸ್.ವೈ ಕಪ್ ಥ್ರೋಬಾಲ್ "ಪಂದ್ಯಾವಳಿಗೆ ಚಾಲನೆ:ಶಿವಮೊಗ್ಗ ಜಿಲ್ಲಾ ಥ್ರೋಬಾಲ್ ಸಂಸ್ಥೆ ಸಹಯೋಗದಲ್ಲಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರ 81ನೇ ಜನ್ಮದಿನಾಚರಣೆ ಅಂಗವಾಗಿ ನಗರದ ನೆಹರು ಕ್ರೀಡಾಂಗಣದಲ್ಲಿ ಮಹಿಳೆಯರು ಮತ್ತು ಪುರುಷರಿಗಾಗಿ "ಬಿ.ಎಸ್.ವೈ ಕಪ್ ಥ್ರೋಬಾಲ್ "ಪಂದ್ಯಾವಳಿಯನ್ನು ಆಯೋಜಿಸಲಾಗಿತ್ತು.
ಶಾಸಕ ಎಸ್.ಎನ್.ಚನ್ನಬಸಪ್ಪ ಎಸ್.ಎನ್. ಕ್ರೀಡಾ ಕೂಟಕ್ಕೆ ಚಾಲನೆ ನೀಡಿ, ಶುಭ ಹಾರೈಸಿದರು, ಸಮಾರಂಭದ ಅಧ್ಯಕ್ಷತೆಯನ್ನು ವಿಧಾನ ಪರಿಷತ್ ಸದಸ್ಯ, ಥ್ರೋಬಾಲ್ ಸಂಸ್ಥೆಯ ಜಿಲ್ಲಾಧ್ಯಕ್ಷ ಡಿ.ಎಸ್.ಅರುಣ್, ವಿಧಾನ ಪರಿಷತ್ ಸದಸ್ಯ ಡಾ.ಧನಂಜಯ ಸರ್ಜಿ, ಬಿಜೆಪಿ ಜಿಲ್ಲಾಧ್ಯಕ್ಷ ಜಗದೀಶ್, ಸಂತೋಷ್ ಬಳ್ಳೇಕೆರೆ, ರಾಜೇಶ್ ಕಾಮತ್ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.