ಸಾರಾಂಶ
ಕೋಲ್ಕತ್ತಾದ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿನಿ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿರುವುದು ಇಡೀ ವೈದ್ಯ ಸಮೂಹಕ್ಕೆ ಮಾಡಿದ ಘೋರ ಅನ್ಯಾಯ. ಇದು ಕಾನೂನಿನ ವೈಫಲ್ಯವನ್ನು ಎತ್ತಿ ತೋರಿಸುತ್ತದೆ. ಅಲ್ಲದೇ ಈ ಪ್ರಕರಣವು ವೈದ್ಯರುಗಳ ಮನೋಸ್ಥೈರ್ಯ ಕುಗ್ಗುವಂತೆ ಮಾಡಿದೆ.
ಕನ್ನಡಪ್ರಭ ವಾರ್ತೆ ಚಿಕ್ಕಬಳ್ಳಾಪುರ
ಕೋಲ್ಕತ್ತಾದ ಆರ್‌ಜಿಕರ್ ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ಕರ್ತವ್ಯ ನಿರಿತ ಯುವ ವೈದ್ಯೆಯ ಮೇಲೆ ನಡೆದ ಅತ್ಯಾಚಾರ ಮತ್ತು ಕೊಲೆ ಖಂಡಿಸಿ ತುರ್ತು ಸೇವೆಗಳನ್ನು ಹೊರತುಪಡಿಸಿ ಇತರೆ ಎಲ್ಲಾ ಆರೋಗ್ಯ ಸೇವೆಗಳನ್ನು ಸ್ಥಗಿತಗೊಳಿಸಿ, ಭಾರತೀಯ ವೈದ್ಯಕೀಯ ಸಂಘವು ಶನಿವಾರ ದಂದು ಜಿಲ್ಲಾದ್ಯಂತ ಪ್ರತಿಭಟನೆ ನಡೆಸಿದರು. ಜಿಲ್ಲೆಯ ಎಲ್ಲಾ ಖಾಸಗಿ ಆಸ್ಪತ್ರೆಗಳು ಹೊರ ರೋಗಿಗಳ ಸೇವೆಯನ್ನು ಸಂಪೂರ್ಣ ಸ್ಥಗಿತಗೊಳಿಸಿ ಹೋರಾಟಕ್ಕೆ ಬೆಂಬಲ ಸೂಚಿಸಲಾಗಿತ್ತು.ಜಿಲ್ಲಾ ಮತ್ತು ತಾಲ್ಲೂಕಿನ ಸರ್ಕಾರಿ ಆಸ್ಪತ್ರೆಗಳಲ್ಲಿ ಹೊರ ರೋಗಿ ಸೇವೆ ಬಂದ್ ಆಗಿದ್ದರೂ ಸಹಾ ತುರ್ತು ಚಿಕಿತ್ಸಾ ಘಟಕಗಳಲ್ಲಿ ಹೊರ ರೋಗಿಗಳಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಗ್ರಾಮೀಣ ಭಾಗದ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಮಾತ್ರ ವೈದ್ಯರು ಹೊರ ರೋಗಿ ಸೇವೆಯಲ್ಲಿ ನಿರತರಾಗಿದ್ದರು.
ಸರ್ಕಾರಿ ಆಸ್ಪತ್ರೆ ಹೆಚ್ಚಿದ ಒತ್ತಡಖಾಸಗಿ ಆಸ್ಪತ್ರೆಗಳ ಸೇವೆ ಸ್ಥಗಿತವಾಗಿದ್ದರೂ ಜಿಲ್ಲೆಯ ಎಲ್ಲ ಸರ್ಕಾರಿ ಆಸ್ಪತ್ರೆಗಳಲ್ಲಿ ಹೊರ ರೋಗಿಗಳ ಸೇವೆಗೆ ಯಾವುದೇ ಸಮಸ್ಯೆ ಆಗದಂತೆ ಎಂದಿನಂತೆ ಮುಂದುವರೆದಿತ್ತು. ಇದರಿಂದಾಗಿ ಸರ್ಕಾರಿ ಆಸ್ಪತ್ರೆಗಳ ಮೇಲೆ ಶನಿವಾರ ಆರೋಗ್ಯ ಸೇವೆಯ ಹೆಚ್ಚಿನ ಒತ್ತಡ ಬಿದ್ದಿತ್ತು.
ಭಾರತೀಯ ವೈದ್ಯಕೀಯ ಸಂಘದ ಜಿಲ್ಲಾ ಘಟಕದ ಸದಸ್ಯರು ಜಿಲ್ಲಾಡಳಿತ ಭವನದ ಮುಂದೆ ಪ್ರತಿಭಟನೆ ನಡೆಸಿ, .ಕೋಲ್ಕತ್ತಾದ ವೈದ್ಯಕೀಯ ವಿದ್ಯಾರ್ಥಿನಿ ಪ್ರಕರಣದ ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಬೇಕು ಎಂದು ಒತ್ತಾಯಿಸಿ ಅಪರ ಜಿಲ್ಲಾಧಿಕಾರಿ.ಡಾ.ಎನ್.ಭಾಸ್ಕರ್ ರಿಗೆ ಮನವಿ ಪತ್ರ ಸಲ್ಲಿಸಿದರು.ಕುಗ್ಗಿದ ವೈದ್ಯರ ಮನೋಸ್ಥೈರ್ಯ
ಈ ವೇಳೆ ಮಾತನಾಡಿದ ಭಾರತೀಯ ವೈದ್ಯಕೀಯ ಸಂಘದ ಜಿಲ್ಲಾಧ್ಯಕ್ಷ ಡಾ.ಕೆ.ಆರ್ ಅನಂತು ಮಾತನಾಡಿ,ವೈದ್ಯರು ದಿನದ 24 ಗಂಟೆ ಬಡ ರೋಗಿಗಳಿಗೆ ತಪಾಸಣೆ ಮತ್ತು ಚಿಕಿತ್ಸೆ ನೀಡುತ್ತಿದ್ದು ಸಾರ್ವಜನಿಕರ ಆರೋಗ್ಯವನ್ನು ಕಾಪಾಡುವಲ್ಲಿ ಪ್ರಮುಖ ಪಾತ್ರವಹಿಸುತ್ತಿದ್ದಾರೆ. ಆಗಸ್ಟ್ 9 ರಂದು ಕೋಲ್ಕತ್ತಾದ ಆರ್.ಜಿ.ಕರ್ ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ಯುವ ವೈದ್ಯಯ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿರುವುದು ಇಡೀ ವೈದ್ಯ ಸಮೂಹಕ್ಕೆ ಮಾಡಿದ ಘೋರ ಅನ್ಯಾಯ. ಇದು ಕಾನೂನಿನ ವೈಫಲ್ಯವನ್ನು ಎತ್ತಿ ತೋರಿಸುತ್ತದೆ. ಅಲ್ಲದೇ ಈ ಪ್ರಕರಣವು ವೈದ್ಯರುಗಳ ಮನೋಸ್ಥೈರ್ಯ ಕುಗ್ಗುವಂತೆ ಮಾಡಿದ್ದು ಇದನ್ನು ಭಾರತೀಯ ವೈದ್ಯಕೀಯ ಸಂಘವು ಖಂಡಿಸುತ್ತದೆ ಎಂದರು.ಪ್ರತಿಭಟನೆಯಲ್ಲಿ ಇಂಡಿಯನ್ ಮೆಡಿಕಲ್ ಅಸೋಸಿಯೇಷನ್ ನ ಜಿಲ್ಲಾ ಉಪಾಧ್ಯಕ್ಷರಾದ ಡಾ.ಸವಿತಾರಮೇಶ್, ಡಾ.ಅಜಿತ್, ಕಾರ್ಯದರ್ಶಿ ಡಾ.ಡಿ.ಆರ್.ನರಸಿಂಹಮೂರ್ತಿ, ಜಂಟಿ ಕಾರ್ಯದರ್ಶಿ ಡಾ.ಶ್ರೀಧರ್, ಖಜಾಂಚಿ ಡಾ.ವಿಜಯ್ ಕುಮಾರ್, ಜಿಲ್ಲಾ ಆರೋಗ್ಯಮತ್ತು ಕುಟುಂಭ ಕಲ್ಯಾಣಾಧಿಕಾರಿ ಡಾ.ಎಸ್.ಎಸ್.ಮಹೇಶ್ ಕುಮಾರ್, ಡಾ.ಜಿವಿ.ಮಂಜುನಾಥ್, ಡಾ.ಪ್ರಶಾಂತ್, ಡಾ.ಪ್ರಕಾಶ್, ಡಾ.ಮಧುಕರ್, ಡಾ.ಮಂಜುನಾಥ್, ಡಾ.ಮಧುಕರ್, ಡಾ.ರಮೇಶ್ ಸೇರಿದಂತೆ ವೈದ್ಯರುಗಳು ಇದ್ದರು.