ಸಾರಾಂಶ
ಯಾದಗಿರಿ: ಜಿಲ್ಲೆಯ ಮೀನುಗಾರಿಕೆ ಇಲಾಖೆ ವತಿಯಿಂದ ಜಿಲ್ಲಾ ವಲಯ ಯೋಜನೆಗೆ ಅರ್ಹ ಫಲಾನುಭವಿಗಳಿಂದ ಆನ್‌ಲೈನ್ ಮುಖಾಂತರ ಅರ್ಜಿ ಆಹ್ವಾನಿಸಲಾಗಿದೆ ಎಂದು ಜಿ.ಪಂ. ಮೀನುಗಾರಿಕೆ ಉಪ ನಿರ್ದೇಶಕರು ತಿಳಿಸಿದ್ದಾರೆ. ಜಿಲ್ಲಾ ವಲಯ ಯೋಜನೆಯ ವಿಶೇಷ ಘಟಕ ಯೋಜನೆ ಮತ್ತು ಗಿರಿಜನ ಉಪ ಯೋಜನೆಯಡಿ ಉಚಿತ ಸಲಕರಣೆ ಕಿಟ್ಟುಗಳ ವಿತರಣೆ, ಮತ್ಸ್ಯ ವಾಹಿನಿ ಯೋಜನೆಯಡಿ ಮೀನು ಮಾರಾಟಕ್ಕಾಗಿ ದ್ವಿಚಕ್ರ ಮತ್ತು ಐಸ್ ಬಾಕ್ಸ್ ಖರೀದಿಗೆ ಸಹಾಯ ಧನಕ್ಕಾಗಿ ಆನ್‌ಲೈನ್ yadgir.nic.in ನಲ್ಲಿ 2024ರ ಅ.25ರೊಳಗೆ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಮೀನುಗಾರಿಕೆ ಉಪ ನಿರ್ದೇಶಕರ ಕಚೇರಿ, ಜಿ.ಪಂ ಯಾದಗಿರಿ ಮೊದಲನೇ ಮಹಡಿ ಕೋಣೆ ಸಂ.ಸಿ-15, ಜಿಲ್ಲಾಡಳಿತ ಭವನ, ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಚೇರಿ, ಮೊದಲನೇ ಮಹಡಿ ಕೋಣೆ ಸಂ.ಸಿ-14, ಜಿಲ್ಲಾಡಳಿತ ಭವನ ಯಾದಗಿರಿ. ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಚೇರಿ, ಲಕ್ಷ್ಮೀ ನಗರ ಶಹಾಪುರ. ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಚೇರಿ, ತಹಸೀಲ್ ರೋಡ ಲಕ್ಷ್ಮೀ ಗುಡಿ ಹತ್ತಿರ, ಸುರಪುರ. ತಾಲೂಕು ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಚೇರಿಗೆ ಸಂಪರ್ಕಿಸಬಹುದು ಎಂದು ತಿಳಿಸಿದ್ದಾರೆ.