ದೀಪಾವಳಿ ಹಬ್ಬಕ್ಕೆ ಬೆಂಗ್ಳೂರಿಂದ ಕಾರವಾರ, ಮಂಗ್ಳೂರಿಗೆ ವಿಶೇಷ ಎಕ್ಸ್‌ಪ್ರೆಸ್‌ರೈಲು

| Published : Oct 20 2024, 01:59 AM IST / Updated: Oct 20 2024, 11:26 AM IST

ದೀಪಾವಳಿ ಹಬ್ಬಕ್ಕೆ ಬೆಂಗ್ಳೂರಿಂದ ಕಾರವಾರ, ಮಂಗ್ಳೂರಿಗೆ ವಿಶೇಷ ಎಕ್ಸ್‌ಪ್ರೆಸ್‌ರೈಲು
Share this Article
  • FB
  • TW
  • Linkdin
  • Email

ಸಾರಾಂಶ

ದೀಪಾವಳಿ ಹಬ್ಬಕ್ಕೆ ತೆರಳುವವರಿಗೆ ನೈಋತ್ಯ ರೈಲ್ವೆಯಿಂದ ವಿಶೇಷ ಎಕ್ಸ್‌ಪ್ರೆಸ್‌ ರೈಲು ಸೇವೆ ಒದಗಿಸಲಾಗುತ್ತಿದೆ. ಅ.30ಕ್ಕೆ ರೈಲು ಬೆಂಗಳೂರಿನಿಂದ ಹೊರಡಲಿದೆ.

 ಬೆಂಗಳೂರು : ದೀಪಾವಳಿ ಹಿನ್ನೆಲೆಯಲ್ಲಿ ಪ್ರಯಾಣಿಕರ ದಟ್ಟಣೆ ನಿಭಾಯಿಸಲು ಬೆಂಗಳೂರಿನ ಸರ್ ಎಂ.ವಿಶ್ವೇಶ್ವರಯ್ಯ ಟರ್ಮಿನಲ್-ಕಾರವಾರ ಮತ್ತು ಯಶವಂತಪುರ-ಮಂಗಳೂರು ಜಂಕ್ಷನ್ ನಿಲ್ದಾಣಗಳ ನಡುವೆ ನೈಋತ್ಯ ರೈಲ್ವೆ ವಲಯ ಒಂದು ಟ್ರಿಪ್ ವಿಶೇಷ ಎಕ್ಸ್‌ಪ್ರೆಸ್ ರೈಲುಗಳ ಸೇವೆ ಕಲ್ಪಿಸಿದೆ.

ಅಕ್ಟೋಬರ್ 30ರಂದು ಬೆಂಗಳೂರಿನ ಸರ್ ಎಂ.ವಿಶ್ವೇಶ್ವರಯ್ಯ ಟರ್ಮಿನಲ್‌ನಿಂದ ಮಧ್ಯಾಹ್ನ 1ಕ್ಕೆ ಹೊರಡಲಿರುವ ಈ ರೈಲು (06597) ಚಿಕ್ಕಬಾಣಾವರ, ಕುಣಿಗಲ್, ಚನ್ನರಾಯಪಟ್ಟಣ, ಹಾಸನ, ಸಕಲೇಶಪುರ, ಸುಬ್ರಹ್ಮಣ್ಯ ರೋಡ್, ಕಬಕ, ಪುತ್ತೂರು, ಬಂಟ್ವಾಳ, ಸುರತ್ಕಲ್, ಮೂಲ್ಕಿ, ಉಡುಪಿ, ಬಾರ್ಕೂರು, ಕುಂದಾಪುರ, ಬೈಂದೂರು, ಭಟ್ಕಳ, ಮುರುಡೇಶ್ವರ, ಹೊನ್ನಾವರ, ಕುಮಟಾ, ಗೋಕರ್ಣ ರೋಡ್ ಮತ್ತು ಅಂಕೋಲಾ ನಿಲ್ದಾಣಗಳ ಮೂಲಕ ಮರುದಿನ ಬೆಳಗಿನ ಜಾವ 4ಕ್ಕೆ ಕಾರವಾರ ನಿಲ್ದಾಣವನ್ನು ತಲುಪಲಿದೆ. ಹಿಂದಿರುಗುವಾಗ ಪುನಃ ಇದೇ ರೈಲು (06598) ಅ.31ರಂದು ಮಧ್ಯಾಹ್ನ 12ಕ್ಕೆ ಕಾರವಾರದಿಂದ ಹೊರಟು ಮರುದಿನ ಬೆಳಗಿನ ಜಾವ 4ಕ್ಕೆ ಎಸ್ಎಂವಿಟಿ ಬೆಂಗಳೂರು ತಲುಪಲಿದೆ.ಯಶವಂತಪುರ-ಮಂಗಳೂರು ರೈಲು

ಅ.30ರಂದು ಯಶವಂತಪುರದಿಂದ ರಾತ್ರಿ 11.50ಕ್ಕೆ ಹೊರಡುವ ವಿಶೇಷ ಎಕ್ಸ್‌ಪ್ರೆಸ್‌ ರೈಲು (06565) ಕುಣಿಗಲ್, ಚನ್ನರಾಯಪಟ್ಟಣ, ಹಾಸನ, ಸಕಲೇಶಪುರ, ಸುಬ್ರಹ್ಮಣ್ಯ ರೋಡ್, ಕಬಕ, ಪುತ್ತೂರು, ಬಂಟ್ವಾಳ ನಿಲ್ದಾಣಗಳ ಮೂಲಕ ಮರುದಿನ ಬೆಳಗ್ಗೆ 11.45ಕ್ಕೆ ಮಂಗಳೂರು ಜಂಕ್ಷನ್ ತಲುಪಲಿದೆ.

ಹಿಂದಿರುಗುವಾಗ ಪುನಃ ಇದೇ ರೈಲು (06566) ಅ.31ರಂದು ಮಧ್ಯಾಹ್ನ 1ಕ್ಕೆ ಮಂಗಳೂರು ಜಂಕ್ಷನ್‌ನಿಂದ ಹೊರಟು ಅದೇ ಮಾರ್ಗವಾಗಿ ರಾತ್ರಿ 9.15ಕ್ಕೆ ಯಶವಂತಪುರವನ್ನು ತಲುಪಲಿದೆ.