ದೀಪಾವಳಿ ಜಾತ್ರೆ: ಮಹದೇಶ್ವರ ಬೆಟ್ಟ ಹರಿದು ಬಂದ ಭಕ್ತರು

| Published : Oct 20 2025, 01:02 AM IST

ದೀಪಾವಳಿ ಜಾತ್ರೆ: ಮಹದೇಶ್ವರ ಬೆಟ್ಟ ಹರಿದು ಬಂದ ಭಕ್ತರು
Share this Article
  • FB
  • TW
  • Linkdin
  • Email

ಸಾರಾಂಶ

ತಾಲೂಕಿನ ಮಲೆ ಮಹದೇಶ್ವರ ಬೆಟ್ಟ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದಿಂದ 5 ದಿನಗಳ ದೀಪಾವಳಿ ಜಾತ್ರಾ ಮಹೋತ್ಸವದ ನಡೆತುತ್ತಿದ್ದು, ಈ ಹಿನ್ನೆಲೆ ಮಾದಪ್ಪ ಸ್ವಾಮಿಗೆ ಬೆಳಗಿನ ಜಾವ ನಾಲ್ಕು ಗಂಟೆಯಿಂದ ಬೇಡಗಂಪಣ ಅರ್ಚಕರಿಂದ ಎಣ್ಣೆ ಮಜ್ಜನ ಸೇವೆ ಜಲಾಭಿಷೇಕ, ಪಂಚಾಮೃತ ಅಭಿಷೇಕ ಗಂಧದ ಅಭಿಷೇಕ, ಬಿಲ್ವಾರ್ಚನೆ, ವಿಶೇಷ ಹೂವಿನ ಅಲಂಕಾರ ಮಾಡಿ ಮಹಾಮಂಗಳಾರತಿ ಮಾಡಲಾಯಿತು.

ಕನ್ನಡಪ್ರಭ ವಾರ್ತೆ, ಹನೂರು

ಹರಕೆ ಹೊತ್ತ ಮಾದಪ್ಪನ ಭಕ್ತರಿಂದ ಮಲೆ ಮಾದೇಶ್ವರನ ಬೆಟ್ಟದಲ್ಲಿ ನಡೆಯುವ ರುದ್ರಾಕ್ಷಿ ಮಂಟಪೋತ್ಸವ, ಬಸವನ ಉತ್ಸವ ಹುಲಿ ವಾಹನ ಉತ್ಸವ ಹಾಗೂ ಬೆಳ್ಳಿಯ ತೇರು ಉತ್ಸವ ಮತ್ತು ಚಿನ್ನದ ತೇರಿನ ಉತ್ಸವ ಸಂಭ್ರಮದಿಂದ ನಡೆಯಿತು.

ವಿಶೇಷ ದಾಸೋಹ: ಜಾತ್ರಾ ಮಹೋತ್ಸವಕ್ಕೆ ರಾಜ್ಯದ ನಾನಾ ಜಿಲ್ಲೆಗಳಿಂದ ಮತ್ತು ತಮಿಳುನಾಡಿನಿಂದ ಸಹ ಬರುವ ಭಕ್ತರ ಅನುಕೂಲಕ್ಕಾಗಿ ನಿರಂತರ ದಾಸೋಹವನ್ನು ಮಲೆ ಮಹದೇಶ್ವರ ಬೆಟ್ಟ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಕಲ್ಪಿಸಿದೆ. ಭಕ್ತ ಸಮೂಹ ಮಾದಪ್ಪನ ಬೆಟ್ಟದಲ್ಲಿರುವ ವಸತಿ ನಿಲಯಗಳಲ್ಲಿ ಸಹ ತುಂಬಿ ತುಳುಕುತ್ತಿದೆ. ದೇವಾಲಯದ ಮುಂಭಾಗ ಇರುವ ಡಾರ್ಮೆಂಟರಿಲ್ಲಿಯೂ ಸಹ ವಾಸ್ತವ್ಯ ಮಾಡುವ ಮೂಲಕ ಭಕ್ತರ ದಂಡೆ ಹರಿದು ಬರುತ್ತಿದೆ.ಬಂದೂಬಸ್ತ್‌ಗೆ ಹೆಚ್ಚಿನ ಪೊಲೀಸರನ್ನು ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಿಂದ ನಿಯೋಜನೆ ಮಾಡಲಾಗಿದೆ. ದೇವಾಲಯ ಮುಂಭಾಗ ಹಾಗೂ ಬಸ್ ನಿಲ್ದಾಣ ಮತ್ತು ದಾಸೋಹ ವ್ಯವಸ್ಥೆ ನಡೆಯುವ ಸ್ಥಳ ಮತ್ತು ಆಯಕಟ್ಟಿನ ಸ್ಥಳಗಳಲ್ಲಿ ಭದ್ರತೆ ಕಲ್ಪಿಸಿದೆ.

ಮಂಗಳವಾರ ಅಮಾವಾಸ್ಯೆ ಪೂಜೆ ಹಾಲರುವೆ ಉತ್ಸವ, ಬೇಡಗಂಪಣ ಸಮುದಾಯದ ಹೆಣ್ಣು ಮಕ್ಕಳಿಂದ ಹಾಲು ಹಳ್ಳದಿಂದ ಜಲತಂದು ಮಾದೇಶ್ವರನಿಗೆ ಅಭಿಷೇಕ ಮಾಡುವ ಪೂಜಾ ಕಾರ್ಯಕ್ರಮಕ್ಕೆ ಸಾಲೂರು ಬೃಹನ್ ಮಠದ ಶಾಂತ ಮಲ್ಲಿಕಾರ್ಜುನ ಸ್ವಾಮಿ ಸಾನಿಧ್ಯದಲ್ಲಿ ವಿಶೇಷ ಪೂಜೆಗಳು ನಡೆಯಲಿದೆ. ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಸಕಲ ಸಿದ್ಧತೆಯು ಸಹ ನಡೆದಿದೆ.

ಭಕ್ತರಿಗೆ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸುವ ಕ್ರಮ ಕೈಗೊಳ್ಳಲಾಗಿದೆ. ಅಮಾವಾಸ್ಯೆ ವಿಶೇಷ ಪೂಜೆ ಹಾಲುರುವೆ ಹಾಗೂ ಮಹಾ ರಥೋತ್ಸವ ನಡೆಯುವ ವೇಳೆಯಲ್ಲಿ ಪೂಜಾ ಕಾರ್ಯಕ್ರಮಕ್ಕೆ ಸಕಲ ಸಿದ್ಧತೆ ಕೈಗೊಳ್ಳಲಾಗಿದೆ. ಹಿರಿಯ ನಾಗರಿಕರಿಗೆ ದೇವರ ದರ್ಶನ ಮಾಡಲು ವಿಶೇಷ ಸರದಿ ಸಾಲಿನ ವ್ಯವಸ್ಥೆಯನ್ನು ಸಹ ಕಲ್ಪಿಸಲಾಗಿದೆ. ಭಕ್ತಾದಿಗಳು ಪ್ಲಾಸ್ಟಿಕ್ ತ್ಯಜಿಸಿ, ಶ್ರೀ ಕ್ಷೇತ್ರದಲ್ಲಿ ಸ್ವಚ್ಛತೆ ಕಾಪಾಡಬೇಕು.ಎ. ಇ. ರಘು, ಕಾರ್ಯದರ್ಶಿ, ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಮಲೆ ಮಹದೇಶ್ವರ ಬೆಟ್ಟ.