ಸಾರಾಂಶ
ರಾಮನಗರ: ಮಾಜಿ ಮುಖ್ಯಮಂತ್ರಿಗಳಾದ ಹಾಲಿ ಚನ್ನಪಟ್ಟಣ ಕ್ಷೇತ್ರ ಶಾಸಕ ಕುಮಾರಸ್ವಾಮಿ ಹಾಗೂ ವಿಧಾನ ಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ ಅವರಿಗೆ ಡಿಕೆ ಸಹೋದರರು ಬಿಗ್ ಶಾಕ್ ನೀಡಿದ್ದಾರೆ.
ರಾಮನಗರ: ಮಾಜಿ ಮುಖ್ಯಮಂತ್ರಿಗಳಾದ ಹಾಲಿ ಚನ್ನಪಟ್ಟಣ ಕ್ಷೇತ್ರ ಶಾಸಕ ಕುಮಾರಸ್ವಾಮಿ ಹಾಗೂ ವಿಧಾನ ಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ ಅವರಿಗೆ ಡಿಕೆ ಸಹೋದರರು ಬಿಗ್ ಶಾಕ್ ನೀಡಿದ್ದಾರೆ.
ಕುಮಾರಸ್ವಾಮಿ ಮತ್ತು ಯೋಗೇಶ್ವರ್ ರವರ ತವರು ಕ್ಷೇತ್ರ ಚನ್ನಪಟ್ಟಣದಲ್ಲಿಯೇ ಕಾಂಗ್ರೆಸ್ ನಾಯಕರು ಸದ್ದಿಲ್ಲದೆ ರಹಸ್ಯವಾಗಿ ಆಪರೇಷನ್ ಹಸ್ತ ನಡೆಸಿ ಯಶಸ್ವಿಯಾಗಿದ್ದಾರೆ.ಚನ್ನಪಟ್ಟಣ ನಗರಸಭೆ ಅಧ್ಯಕ್ಷ ಪಿ.ಪ್ರಶಾಂತ್ ಸೇರಿದಂತೆ 9 ಮಂದಿ ಜೆಡಿಎಸ್ ಸದಸ್ಯರು ಪಕ್ಷವನ್ನು ತೊರೆದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಹಾಗೂ ವಿಧಾನ ಪರಿಷತ್ ಸದಸ್ಯ ಪುಟ್ಟಣ್ಣ ಅವರ ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.
ಬೆಂಗಳೂರು ಸದಾಶಿವನಗರದಲ್ಲಿರುವ ಡಿ.ಕೆ. ಶಿವಕುಮಾರ್ ಅವರ ನಿವಾಸದಲ್ಲಿ ಗುರುವಾರ ರಾತ್ರಿ ನಗರಸಭೆ ಅಧ್ಯಕ್ಷ ಪ್ರಶಾಂತ್ ಸೇರಿದಂತೆ 9 ಮಂದಿ ಸದಸ್ಯರು ಜೆಡಿಎಸ್ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಇವರ ಜತೆಗೆ ಪಕ್ಷೇತರ ಸದಸ್ಯೆ ಉಮಾ ಅವರೂ ಕಾಂಗ್ರೆಸ್ ಸೇರಿದರು.ಚನ್ನಪಟ್ಟಣ ನಗರಸಭೆಯ ಒಟ್ಟು ಜೆಡಿಎಸ್ ಸದಸ್ಯರ ಪೈಕಿ ಮೂರನೇ ಒಂದರಷ್ಟು ಮಂದಿ ಪಕ್ಷ ತೊರೆದು ಕಾಂಗ್ರೆಸ್ ಸೇರಿದ್ದು, ತಮ್ಮನ್ನು ಕಾಂಗ್ರೆಸ್ ಸದಸ್ಯರೆಂದು ಪರಿಗಣಿಸಿ ನಗರಸಭೆಯಲ್ಲಿ ತಮಗೆ ಕಾಂಗ್ರೆಸ್ ಸದಸ್ಯರ ಜತೆ ಕೂರಲು ಅವಕಾಶ ಕಲ್ಪಿಸಬೇಕು ಎಂದು ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದು ಕೋರಿದ್ದಾರೆ.
ಸದಸ್ಯರಾದ ಎಂ.ಜೆ. ರೇವಣ್ಣ , ವಿ.ಸತೀಶ್ ಬಾಬು, ಶ್ರೀನಿವಾಸಮೂರ್ತಿ, ಸಿ.ಜೆ. ಲೋಕೇಶ್, ನಾಗೇಶ್, ಸಯ್ಯದ್ ರಫೀಕ್ ಅಹ್ಮದ್ ಕುನುಮೀರಿ, ಅಭಿದಾಬಾನು, ಭಾನುಪ್ರಿಯಾ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿದ ಸದಸ್ಯರಾಗಿದ್ದಾರೆ.4ಕೆಆರ್ ಎಂಎನ್ 14.ಜೆಪಿಜಿಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿದ ನಗರಸಭೆ ಅಧ್ಯಕ್ಷ ಪ್ರಶಾಂತ್ ಮತ್ತು ಸದಸ್ಯರು.