ಸಾರಾಂಶ
ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ಗುರುವಾರ ಬೆಳ್ತಂಗಡಿ ಬಳಿಯ ನಾರಾವಿಯಲ್ಲಿ ನಿರ್ಮಿಸಲಾಗಿದ್ದ ಚೆಕ್ ಪೋಸ್ಟ್‌ಗೆ ಭೇಟಿ ನೀಡಿ ತಪಾಸಣಾ ಕಾರ್ಯ ಪರಿಶೀಲಿಸಿದರು.
ಬಂಟ್ವಾಳ: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಚುನಾವಣಾಧಿಕಾರಿಯಾಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು ಶುಕ್ರವಾರ ಬಂಟ್ವಾಳ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಭೇಟಿ ನೀಡಿದರು.
ಸೂಕ್ಷ್ಮ ಮತಗಟ್ಟೆಗಳಿರುವ ಪ್ರದೇಶಗಳಿಗೆ ಭೇಟಿ ನೀಡಿದ ಅವರು ದ.ಕ. ಜಿ.ಪಂ.ಹಿ.ಪ್ರಾ. ಶಾಲೆ ಕೊಡಂಗೆ ಬಿ ಮೂಡಾ ಇಲ್ಲಿರುವ ಮತಗಟ್ಟೆ ಸಂಖ್ಯೆ 122, 123 ಮತ್ತು 124 ಗಳಲ್ಲಿ ಸಿದ್ಧತೆಗಳನ್ನು ಪರಿಶೀಲಿಸಿ ಮೆಚ್ಚುಗೆ ವ್ಯಕ್ತಪಡಿಸಿದರು. ತಹಸೀಲ್ದಾರ್ ಅರ್ಚನಾ ಭಟ್, ಚುನಾವಣಾ ಉಪತಹಸೀಲ್ದಾರ್ ನವೀನ್ ಕುಮಾರ್ ಬೆಂಜನಪದವು, ಕಂದಾಯ ನಿರೀಕ್ಷಕರಾದ ಜನಾರ್ದನ ಜೆ., ವಿಜಯ್ ಆರ್., ಗ್ರಾಮ ಆಡಳಿತ ಅಧಿಕಾರಿ ಕರಿಬಸಪ್ಪ ನಾಯಕ್, ಮತಗಟ್ಟೆ ಅಧಿಕಾರಿಗಳಾದ ಜ್ಯೋತಿ, ಸೌಮ್ಯ, ಆಶಾ ಉಪಸ್ಥಿತರಿದ್ದರು. ಚೆಕ್ ಪೋಸ್ಟ್ ಪರಿಶೀಲನೆ ನಡೆಸಿದ ಡಿಸಿಮಂಗಳೂರು: ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ಗುರುವಾರ ಬೆಳ್ತಂಗಡಿ ಬಳಿಯ ನಾರಾವಿಯಲ್ಲಿ ನಿರ್ಮಿಸಲಾಗಿದ್ದ ಚೆಕ್ ಪೋಸ್ಟ್‌ಗೆ ಭೇಟಿ ನೀಡಿ ತಪಾಸಣಾ ಕಾರ್ಯ ಪರಿಶೀಲಿಸಿದರು.ಚೆಕ್‌ಪೋಸ್ಟ್‌ನಲ್ಲಿದ್ದ ಅಧಿಕಾರಿಗಳು, ಸಿಬ್ಬಂದಿಗೆ ಅಗತ್ಯ ಸಲಹೆ ಸೂಚನೆಗಳನ್ನು ಜಿಲ್ಲಾಧಿಕಾರಿ ನೀಡಿದರು.ಈ ಸಂದರ್ಭ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಿಷ್ಯಂತ್ ಸಿ.ಬಿ., ಸಹಾಯಕ ಚುನಾವಣಾಧಿಕಾರಿ ಕೆಂಪೇಗೌಡ ಹಾಗೂ ಸಿಬ್ಬಂದಿ ಹಾಜರಿದ್ದರು.