ಮಾಜಿ ಶಾಸಕ ಎಚ್‌. ಎಂ. ವಿಶ್ವನಾಥ್‌ ಅವರು ಬೆಂಗಳೂರಿನಲ್ಲಿ ಶನಿವಾರ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರನ್ನು ಭೇಟಿಯಾಗಿ ಫೆಬ್ರವರಿ 2ರಂದು ಸಕಲೇಶಪುರ ಪಟ್ಟಣದಲ್ಲಿ ನಡೆಯುವ ನಾಡಪ್ರಭು ಕೆಂಪೇಗೌಡ ಜಯಂತಿಯಲ್ಲಿ ಭಾಗವಹಿಸುವಂತೆ ಆಹ್ವಾನಿಸಿದರು. ಮಲೆನಾಡು ಭಾಗದಲ್ಲಿ ಕಾಡುತ್ತಿರುವ ಕಾಡಾನೆಗಳ ಸಮಸ್ಯೆ ನಿವಾರಣೆಗೆ ಶ್ರೀಲಂಕಾ ಮಾದರಿಯಲ್ಲಿ ಆನೆಧಾಮ ನಿರ್ಮಾಣಕ್ಕೆ ಮುಂದಾಗಬೇಕೆಂದು ಕೋರಿದರು. ಈ ವಿಚಾರದ ಬಗ್ಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಉಪ ಮುಖ್ಯಮಂತ್ರಿ, ಅಂದು ಕಾಡಾನೆ ಸಮಸ್ಯೆ, ಆನೆಧಾಮ ನಿರ್ಮಾಣದ ಬಗ್ಗೆ ಚರ್ಚಿಸುವುದಾಗಿ ಭರವಸೆ ನೀಡಿದ್ದಾರೆ ಎಂದು ವಿಶ್ವನಾಥ್‌ ಅವರು ತಿಳಿಸಿದ್ದಾರೆ.

ಕನ್ನಡಪ್ರಭ ವಾರ್ತೆ ಹಾಸನ

ಮಾಜಿ ಶಾಸಕ ಎಚ್‌. ಎಂ. ವಿಶ್ವನಾಥ್‌ ಅವರು ಬೆಂಗಳೂರಿನಲ್ಲಿ ಶನಿವಾರ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರನ್ನು ಭೇಟಿಯಾಗಿ ಫೆಬ್ರವರಿ 2ರಂದು ಸಕಲೇಶಪುರ ಪಟ್ಟಣದಲ್ಲಿ ನಡೆಯುವ ನಾಡಪ್ರಭು ಕೆಂಪೇಗೌಡ ಜಯಂತಿಯಲ್ಲಿ ಭಾಗವಹಿಸುವಂತೆ ಆಹ್ವಾನಿಸಿದರು.ಆಹ್ವಾನ ಸ್ವಾಗತಿಸಿದ ಡಿ.ಕೆ.ಶಿವಕುಮಾರ್‌ ಅವರು ಕಾರ್ಯಕ್ರಮದಲ್ಲಿ ಭಾಗವಹಿಸುವುದಾಗಿ ಅವರು ಭರವಸೆ ನೀಡಿದ್ದಾರೆ. ಈ ಸಂದರ್ಭದಲ್ಲಿ ಎಚ್‌.ಎಂ. ವಿಶ್ವನಾಥ್‌, ಮಲೆನಾಡು ಭಾಗದಲ್ಲಿ ಕಾಡುತ್ತಿರುವ ಕಾಡಾನೆಗಳ ಸಮಸ್ಯೆ ನಿವಾರಣೆಗೆ ಶ್ರೀಲಂಕಾ ಮಾದರಿಯಲ್ಲಿ ಆನೆಧಾಮ ನಿರ್ಮಾಣಕ್ಕೆ ಮುಂದಾಗಬೇಕೆಂದು ಕೋರಿದರು. ಈ ವಿಚಾರದ ಬಗ್ಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಉಪ ಮುಖ್ಯಮಂತ್ರಿ, ಅಂದು ಕಾಡಾನೆ ಸಮಸ್ಯೆ, ಆನೆಧಾಮ ನಿರ್ಮಾಣದ ಬಗ್ಗೆ ಚರ್ಚಿಸುವುದಾಗಿ ಭರವಸೆ ನೀಡಿದ್ದಾರೆ ಎಂದು ವಿಶ್ವನಾಥ್‌ ಅವರು ತಿಳಿಸಿದ್ದಾರೆ. ಸಕಲೇಶಪುರ ಬ್ಲಾಕ್‌ ಕಾಂಗ್ರೆಸ್‌‍ ಅಧ್ಯಕ್ಷ ಬೈರಮುಡಿ ಚಂದ್ರು ಮತ್ತಿತರರು ಇದ್ದರು.