ಸಾರಾಂಶ
ಡಿ.ಕೆ. ಶಿವಕುಮಾರ್ ಅವರಿಗೆ ಅಧಿಕಾರ ಸುಲಭವಾಗಿ ಸಿಗುವುದಿಲ್ಲ, ಅವರು ಅಧಿಕಾರವನ್ನು ಒದ್ದು ತೆಗೆದುಕೊಳ್ಳಬೇಕು. ಎಸ್.ಎಂ. ಕೃಷ್ಣ ಮುಖ್ಯಮಂತ್ರಿ ಆಗಿದ್ದಾಗ ಅವರು ಒದ್ದು ಸಚಿವ ಸ್ಥಾನ ತೆಗೆದುಕೊಂಡಿದ್ದರು. ಸಿದ್ದರಾಮಯ್ಯ ಬೆಂಬಲಿಗರು ಸುಲಭವಾಗಿ ಅವರಿಗೆ ಅಧಿಕಾರ ಕೊಡುವುದಿಲ್ಲ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸುನಿಲ್ ವಿ. ಕುಮಾರ್ ಭವಿಷ್ಯ ನುಡಿದಿದ್ದಾರೆ.
ಕನ್ನಡಪ್ರಭ ವಾರ್ತೆ ಉಡುಪಿ
ಡಿ.ಕೆ. ಶಿವಕುಮಾರ್ ಅವರಿಗೆ ಅಧಿಕಾರ ಸುಲಭವಾಗಿ ಸಿಗುವುದಿಲ್ಲ, ಅವರು ಅಧಿಕಾರವನ್ನು ಒದ್ದು ತೆಗೆದುಕೊಳ್ಳಬೇಕು. ಎಸ್.ಎಂ. ಕೃಷ್ಣ ಮುಖ್ಯಮಂತ್ರಿ ಆಗಿದ್ದಾಗ ಅವರು ಒದ್ದು ಸಚಿವ ಸ್ಥಾನ ತೆಗೆದುಕೊಂಡಿದ್ದರು. ಸಿದ್ದರಾಮಯ್ಯ ಬೆಂಬಲಿಗರು ಸುಲಭವಾಗಿ ಅವರಿಗೆ ಅಧಿಕಾರ ಕೊಡುವುದಿಲ್ಲ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸುನಿಲ್ ವಿ. ಕುಮಾರ್ ಭವಿಷ್ಯ ನುಡಿದಿದ್ದಾರೆ.ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾರೇ ಮುಖ್ಯಮಂತ್ರಿಯಾದರೂ ನಾನು ನನ್ನ ಕ್ಷೇತ್ರಕ್ಕೆ ಅನುದಾನ ಕೊಡಿ ಎಂದು ಕೇಳುತ್ತೇನೆ. ಕಳೆದ ಎರಡು ವರ್ಷಗಳಲ್ಲಿ ಒಂದು ರುಪಾಯಿ ಅನುದಾನ ಕೊಟ್ಟಿಲ್ಲ, ವ್ಯಾಪಕ ಮಳೆಯಾದರೂ ಅಭಿವೃದ್ಧಿ ದೃಷ್ಟಿಯಿಂದ ರಾಜ್ಯದಲ್ಲಿ ಬರ ಬಿದ್ದಿದೆ ಎಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.ಬಿಜೆಪಿಯಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆ ತಯಾರಿ ಆರಂಭಿಸಿದ್ದೇವೆ. ಯಡಿಯೂರಪ್ಪ ನಮ್ಮ ಗರಿಷ್ಠ ಮಟ್ಟದ ನಾಯಕರು. ಅವರ ಪ್ರವಾಸದಲ್ಲಿ ರಾಜ್ಯಾದ್ಯಂತ ಕಾರ್ಯಕರ್ತರು ಜೋಡಿಸಿಕೊಳ್ಳುತ್ತಾರೆ. ರಾಜ್ಯಾಧ್ಯಕ್ಷರು ಚುನಾವಣಾ ತಯಾರಿ ಪ್ರಕ್ರಿಯೆ ಪ್ರಾರಂಭಿಸಿದ್ದಾರೆ. ಪಕ್ಷದ ಆಂತರಿಕ ಭಿನ್ನಮತ ವಿಚಾರ ರಾಷ್ಟ್ರೀಯ ನಾಯಕರಿಗೆ ಬಿಟ್ಟದ್ದು ಎಂದವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.