ವಿದ್ಯುತ್‌ ಸಮಸ್ಯೆಗೆ ಬಿಜೆಪಿ ಕಾರಣ: ಡಿಕೆಶಿ

| Published : Oct 13 2023, 12:15 AM IST

ವಿದ್ಯುತ್‌ ಸಮಸ್ಯೆಗೆ ಬಿಜೆಪಿ ಕಾರಣ: ಡಿಕೆಶಿ
Share this Article
  • FB
  • TW
  • Linkdin
  • Email

ಸಾರಾಂಶ

ಪ್ರತಿವರ್ಷ ಶೇ.10ರಿಂದ 15ರಷ್ಟು ಬೇಡಿಕೆ ಹೆಚ್ಚಾಗುವುದು ವಾಡಿಕೆ. ಆದರೆ ಕಳೆದ ನಾಲ್ಕು ವರ್ಷದಿಂದ ಬಿಜೆಪಿ ಸರ್ಕಾರ ವಿದ್ಯುತ್‌ ಉತ್ಪಾದನೆ ಪ್ರಮಾಣ ಹೆಚ್ಚಳ ಮಾಡಲಿಲ್ಲ. ಈಗ ರಾಜ್ಯದ ಜನತೆಗೆ ಎದುರಾಗಿರುವ ಸಂಕಷ್ಟ ಬಗೆಹರಿಸುವ ಬಗ್ಗೆ ಮಾತನಾಡದೆ ರಾಜಕೀಯ ಮಾಡಲು ಹೊರಟಿದ್ದಾರೆ ಎಂದು ಡಿ.ಕೆ.ಶಿವಕುಮಾರ್‌ ಕಿಡಿಕಾರಿದ್ದಾರೆ.
- ವಿದ್ಯುತ್‌ ಉತ್ಪಾದನೆ ಹೆಚ್ಚಿಸದೆ ಬಿಜೆಪಿ ಆಡಳಿತದಲ್ಲಿ ನಿರ್ಲಕ್ಷ್ಯ - ಅದರಿಂದಾಗಿ ಈಗ ರಾಜ್ಯದಲ್ಲಿ ವಿದ್ಯುತ್‌ ಕೊರತೆ: ಡಿಸಿಎಂ ಹೇಳಿಕೆ ಕನ್ನಡಪ್ರಭ ವಾರ್ತೆ ಬೆಂಗಳೂರು ‘ರಾಜ್ಯದಲ್ಲಿ ಭೀಕರ ಬರಗಾಲ ಎದುರಾಗಿದೆ. ರಾಜ್ಯದ ಅಣೆಕಟ್ಟುಗಳಲ್ಲಿ ನೀರಿನ ಲಭ್ಯತೆ ಇಲ್ಲದೆ ಜಲ ವಿದ್ಯುತ್‌ ಉತ್ಪಾದನೆ ಕುಸಿದಿದೆ. ವಿದ್ಯುತ್‌ ಬೇಡಿಕೆ ಹೆಚ್ಚಾಗಿದ್ದು ಉತ್ಪಾದನೆ ಇಲ್ಲದೆ ವಿದ್ಯುತ್‌ ಸಮಸ್ಯೆಯಾಗಿದೆ. ಈಗ ಟೀಕೆ ಮಾಡುವ ಬಿಜೆಪಿ ನಾಯಕರು ತಮ್ಮ ಅವಧಿಯಲ್ಲಿ ಎಷ್ಟು ಪ್ರಮಾಣದ ವಿದ್ಯುತ್ ಉತ್ಪಾದನೆ ಹೆಚ್ಚಿಸಿದ್ದರು ಎಂಬುದನ್ನು ಹೇಳಲಿ’ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಆಗ್ರಹಿಸಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತಿವರ್ಷ ಶೇ.10ರಿಂದ 15ರಷ್ಟು ಬೇಡಿಕೆ ಹೆಚ್ಚಾಗುವುದು ವಾಡಿಕೆ. ಆದರೆ ಕಳೆದ ನಾಲ್ಕು ವರ್ಷದಿಂದ ಬಿಜೆಪಿ ಸರ್ಕಾರ ವಿದ್ಯುತ್‌ ಉತ್ಪಾದನೆ ಪ್ರಮಾಣ ಹೆಚ್ಚಳ ಮಾಡಲಿಲ್ಲ. ಈಗ ರಾಜ್ಯದ ಜನತೆಗೆ ಎದುರಾಗಿರುವ ಸಂಕಷ್ಟ ಬಗೆಹರಿಸುವ ಬಗ್ಗೆ ಮಾತನಾಡದೆ ರಾಜಕೀಯ ಮಾಡಲು ಹೊರಟಿದ್ದಾರೆ ಎಂದು ಕಿಡಿ ಕಾರಿದರು. ರೈತರಿಗೆ ತೊಂದರೆಯಾಗದಂತೆ ಕ್ರಮ: ರೈತರಿಂದಲೂ ವಿದ್ಯುತ್ ಬೇಡಿಕೆ ಹೆಚ್ಚಾಗಿದೆ. ರೈತರಿಗೆ ಯಾವುದೇ ಕಾರಣಕ್ಕೂ ತೊಂದರೆ ಆಗದಂತೆ ನೋಡಿಕೊಳ್ಳುತ್ತೇವೆ ಎಂದರು. ---- ಈಗಾಗಲೇ ನಮ್ಮ ಸಚಿವರು ಕಾರ್ಯಪ್ರವೃತ್ತರಾಗಿದ್ದು, ಸಮಸ್ಯೆ ಬಗೆಹರಿಸುತ್ತೇವೆ. ಇಂಧನ ಸಚಿವರಾದ ಕೆ.ಜೆ.ಜಾರ್ಜ್ ಅವರು ಕೇಂದ್ರ ವಿದ್ಯುತ್ ಸಚಿವರ ಬಳಿ ಚರ್ಚೆ ಮಾಡಿ ಕೇಂದ್ರೀಯ ಗ್ರಿಡ್‌ಗಳಿಂದ ವಿದ್ಯುತ್ ಪೂರೈಕೆಗೆ ಮನವಿ ಮಾಡಿದ್ದಾರೆ ಎಂದರು.