ಪ್ರಜ್ವಲ್‌ ಪ್ರಕರಣದಲ್ಲಿ ಡಿಕೆಶಿ ಮಾಸ್ಟರ್‌ಮೈಂಡ್: ಯೋಗೇಶ್ವರ್‌

| Published : May 09 2024, 01:00 AM IST / Updated: May 09 2024, 11:25 AM IST

CP Yogeshwar
ಪ್ರಜ್ವಲ್‌ ಪ್ರಕರಣದಲ್ಲಿ ಡಿಕೆಶಿ ಮಾಸ್ಟರ್‌ಮೈಂಡ್: ಯೋಗೇಶ್ವರ್‌
Share this Article
  • FB
  • TW
  • Linkdin
  • Email

ಸಾರಾಂಶ

ಪ್ರಜ್ವಲ್ ರೇವಣ್ಣ ಅವರ ವೀಡಿಯೋ ಬಹಿರಂಗ ಪ್ರಕರಣದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಮಾಸ್ಟರ್ ಮೈಂಡ್ ಎಂಬುದು ಜಗಜ್ಜಾಹೀರಾಗಿದೆ. ಹೀಗಾಗಿ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಆಗ್ರಹಿಸಿದರು.

ರಾಮನಗರ: ಪ್ರಜ್ವಲ್ ರೇವಣ್ಣ ಅವರ ವೀಡಿಯೋ ಬಹಿರಂಗ ಪ್ರಕರಣದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಮಾಸ್ಟರ್ ಮೈಂಡ್ ಎಂಬುದು ಜಗಜ್ಜಾಹೀರಾಗಿದೆ. ಈ ಪ್ರಕರಣದಿಂದಾಗಿ ಮಹಿಳೆಯರ ಮಾನಹರಾಜಾಗಿ ರಾಜ್ಯ ತಲೆತಗ್ಗಿಸುವಂತಾಗಿದೆ. ಹೀಗಾಗಿ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಆಗ್ರಹಿಸಿದರು.

 ನಗರದಲ್ಲಿ ನಡೆದ ಪ್ರತಿಭಟನೆಯಲ್ಲಿ ಮಾತನಾಡಿ, ಕುಮಾರಸ್ವಾಮಿ ಸೇರಿ ಯಾರೂ ಪ್ರಜ್ವಲ್ ಪರವಹಿಸಿ ಮಾತನಾಡಿಲ್ಲ. ಆ ಕೃತ್ಯ ಖಂಡನೀಯ. ಆದರೆ ಖಾಸಗಿ ವಿಚಾರ ಬಹಿರಂಗಗೊಳಿಸಿ ಹೆಣ್ಣುಮಕ್ಕಳ ಮರ್ಯಾದೆ ತೆಗೆದಿದ್ದಾರೆ. ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿದ್ದರಿಂದ ದೇವೇಗೌಡರ ಕುಟುಂಬ ರಾಜಕೀಯವಾಗಿ ಪ್ರಬಲವಾಗುತ್ತಿದೆ. 

ಹೀಗಾಗಿ ಅವರ ಮುಖಕ್ಕೆ ಮಸಿ ಬಳಿಯುವ ಉದ್ದೇಶದಿಂದ ಡಿ.ಕೆ.ಶಿವಕುಮಾರ್ ಈ ಷಡ್ಯಂತ್ರ ರೂಪಿಸಿದ್ದಾರೆ. ರಮೇಶ್ ಜಾರಕಿಹೊಳಿ, ಈಶ್ವರಪ್ಪ ಅವರ ಪ್ರಕರಣಗಳಲ್ಲೂ ಇವರ ಕೃತ್ಯ ಸಾಬೀತಾಗಿದೆ. ಡಿ.ಕೆ.ಶಿವಕುಮಾರ್‌ ಮತ್ತು ಸೋದರರು ಹಿಂದೆ ಕನಕಪುರದಲ್ಲಿದ್ದ ಅವರ ಸಿನಿಮಾ ತೋರಿಸಿರುವ ವೃತ್ತಿಯನ್ನು ಈಗಲೂ ಮುಂದುವರೆಸುತ್ತಿದ್ದಾರೆ ಎಂದು ಟೀಕಿಸಿದರು.